ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾರವಾರ: ಲಂಚ ಪಡೆಯುಲು ಹೋಗಿ ಎಸಿಬಿಗೆ ಬಲೆಗೆ ಬಿದ್ದ ಅಗ್ನಿಶಾಮಕ ಅಧಿಕಾರಿ

By ದೇವರಾಜ ನಾಯ್ಕ, ಕಾರವಾರ
|
Google Oneindia Kannada News

ಕಾರವಾರ, ಆಗಸ್ಟ್ 4: ಲಂಚ ಪಡೆಯುತ್ತಿದ್ದ ವೇಳೆ ಉತ್ತರ ಕನ್ನಡ ಜಿಲ್ಲಾ ಅಗ್ನಿಶಾಮಕ ದಳದ ಅಧಿಕಾರಿ ಶ್ರೀನಿವಾಸ ಎಂಬುವವರು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಬಲೆಗೆ ಬಿದ್ದಿದ್ದಾರೆ.

5 ಸಾವಿರ ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದ ಜೆಇ5 ಸಾವಿರ ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದ ಜೆಇ

ಶಿರಸಿ ಮೂಲದ ರಘುಪತಿ ಸುಬ್ರಾಯ ಹೆಗಡೆ ಎನ್ನುವವರು ಪಟಾಕಿ ಅಂಗಡಿಗೆ ಪರವಾನಿಗೆಗಾಗಿ ಎನ್‌ಒಸಿ ನವೀಕರಣ ಮಾಡಿಕೊಡುವುದಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಶ್ರೀನಿವಾಸ್ ಅದನ್ನು ನೀಡಲು ಕಳೆದ ಕೆಲವು ದಿನಗಳಿಂದ ಮೀನಾಮೇಷ ಎಣಿಸುತ್ತಿದ್ದರು. 10 ಸಾವಿರ ರೂ. ಲಂಚ ನೀಡುವಂತೆ ಬೇಡಿಕೆಯನ್ನು ಕೂಡ ಇಟ್ಟಿದ್ದರು.

Karwar: A fire officer trapped by ACB when accepting bribe

ರಘುಪತಿ ಅವರು ಶ್ರೀನಿವಾಸರ ಕಚೇರಿಗೆ ಸಾಕಷ್ಟು ಬಾರಿ ಅಲೆದಾಡಿದರೂ ಎನ್‌ಒಸಿ ನೀಡಿರಲಿಲ್ಲ. ಬಳಿಕ ಲಂಚ ನೀಡಲು ಒಪ್ಪಿ, ಇನ್ನೊಂದೆಡೆ ಎಸಿಬಿಗೆ ಮಾಹಿತಿ ನೀಡಿದ್ದರು. ರಘುಪತಿ ಅವರಿಂದ ಅಗ್ನಿಶಾಮಕ ಅಧಿಕಾರಿ ಶ್ರೀನಿವಾಸ 5750 ರೂ. ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಹುಬ್ಬಳ್ಳಿ: ಪೊಲೀಸ್ ಸಬ್‌ ಇನ್ಸ್ ಪೆಕ್ಟರ್ ಕಚೇರಿ ಮೇಲೆ ಎಸಿಬಿ ದಾಳಿಹುಬ್ಬಳ್ಳಿ: ಪೊಲೀಸ್ ಸಬ್‌ ಇನ್ಸ್ ಪೆಕ್ಟರ್ ಕಚೇರಿ ಮೇಲೆ ಎಸಿಬಿ ದಾಳಿ

ಅಧಿಕಾರಿಯನ್ನು ಎಸಿಬಿಯವರು ವಶಕ್ಕೆ ಪಡೆದುಕೊಂಡಿದ್ದು, ಲಂಚದ ಹಣ, ಅಗತ್ಯ ದಾಖಲೆಗಳನ್ನು ಪರಿಶೀಲನೆ ನಡೆಸಿ, ಜಪ್ತಿ ಮಾಡಿಕೊಂಡಿದ್ದಾರೆ. ಎಸಿಬಿ ಇನ್ಸ್ ಪೆಕ್ಟರ್ ರಮೇಶ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಶ್ರೀನಿವಾಸ್ ಅವರನ್ನು ನ್ಯಾಯಾಲಯದ ವಶಕ್ಕೆ ನೀಡುವುದಾಗಿ ರಮೇಶ್ 'ಒನ್ಇಂಡಿಯಾ ಕನ್ನಡ'ಕ್ಕೆ ತಿಳಿಸಿದ್ದಾರೆ.

English summary
Srinivas, a Uttara Kannada District Fire Force officer, has been trapped by the Anti Corruption Bureau (ACB) during accepting the bribe.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X