ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಕೈ' ಹಿಡಿದ ಕಾರವಾರ ಶಾಸಕ ಸತೀಶ್ ಸೈಲ್

|
Google Oneindia Kannada News

ಬೆಂಗಳೂರು, ನವೆಂಬರ್ 27 : ಕಾರವಾರ ಕ್ಷೇತ್ರದ ಶಾಸಕ ಸತೀಶ್ ಸೈಲ್ ಕಾಂಗ್ರೆಸ್ ಸೇರಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಅವರು, ಕಾಂಗ್ರೆಸ್ ತೊರೆದು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು ಜಯಗಳಿಸಿದ್ದರು.

ಶುಕ್ರವಾರ ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರ ಸಮ್ಮುಖದಲ್ಲಿ ಪಕ್ಷೇತರ ಶಾಸಕ ಸತೀಶ್ ಸೈಲ್ ಬೆಂಬಲಿಗರ ಜೊತೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಇದರಿಂದಾಗಿ ಸುಮಾರು ಎರಡು ವರ್ಷಗಳ ಬಳಿಕ ಅವರು ಪಕ್ಷಕ್ಕೆ ಮರಳಿದಂತಾಗಿದೆ.

satish sail

2013ರ ವಿಧಾನಸಭೆ ಚುನಾವಣೆಯಲ್ಲಿ ಕಾರವಾರ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸತೀಶ್ ಸೈಲ್ ಅವರು, 80,727 ಮತಗಳನ್ನು ಪಡೆದು ಬಿಜೆಪಿ ಅಭ್ಯರ್ಥಿ ಆನಂದ್ ಆಸ್ನೋಟಿಕರ್ ಅವರ ವಿರುದ್ಧ ಜಯಗಳಿಸಿದ್ದರು. [2013ರ ಚುನಾವಣೆ ಸೋತವರು, ಗೆದ್ದವರು]

ವಿಧಾನಸಭೆ ಚುನಾವಣೆಯಲ್ಲಿ ಅವರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಅವರಿಗೆ ಟಿಕೆಟ್ ಕೈ ತಪ್ಪಿತ್ತು. ಇದರಿಂದಾಗಿ ಕಾಂಗ್ರೆಸ್ ಪಕ್ಷದಿಂದ ಹೊರಬಂದ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ವಿಧಾನಸಭೆ ಪ್ರವೇಶಿಸಿದ್ದರು.

ಕಾಂಗ್ರೆಸ್ ಪಕ್ಷ ತರೆದರೂ ಪಕ್ಷದ ನಾಯಕರ ಜೊತೆ ಅವರು ಉತ್ತಮ ಬಾಂಧವ್ಯ ಹೊಂದಿದ್ದರು. 2009 ರಿಂದ 2011ರ ನಡುವೆ ಬಳ್ಳಾರಿಯಲ್ಲಿ ನಡೆದ ಅಕ್ರಮ ಗಣಿಗಾರಿಕೆಯಲ್ಲಿ ಸತೀಶ್ ಸೈಲ್ ಭಾಗಿಯಾಗಿದ್ದಾರೆ ಎಂಬ ಆರೋಪವೂ ಇದೆ. ಸಿಬಿಐ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸತೀಶ್ ಸೈಲ್ ಅವರನ್ನು ಬಂಧಿಸಿತ್ತು.

English summary
Uttara Kannada district Karwar constituency independent MLA Satish Sail joined Congress on Friday, November 27, 2015. Congress denied ticket for Satish Sail on 2013 assembly elections. So he contest as independent candidate.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X