ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲಾಟರಿ ಹಗರಣ : ಸಿಬಿಐನಿಂದ ಕೆಂಪಯ್ಯ, ಓಂ ಪ್ರಕಾಶ್ ವಿಚಾರಣೆ

|
Google Oneindia Kannada News

ಬೆಂಗಳೂರು, ಆಗಸ್ಟ್ 05 : ಬಹುಕೋಟಿ ರೂಪಾಯಿ ಒಂದಂಕಿ ಲಾಟರಿ ಹಗರಣದ ಬಗ್ಗೆ ಸಿಬಿಐ ತನಿಖೆ ಚುರುಕುಗೊಂಡಿದೆ. 2015ರ ಮೇ ತಿಂಗಳಿನಲ್ಲಿ ಕರ್ನಾಟಕ ಸರ್ಕಾರ ಲಾಟರಿ ಹಗರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಿತ್ತು.

ಶುಕ್ರವಾರ ರಾಜ್ಯ ಪೊಲೀಸ್ ಮಹಾನಿರ್ದೇಶ ಓಂ ಪ್ರಕಾಶ್ ಮತ್ತು ಗೃಹ ಸಚಿವರ ಸಲಹೆಗಾರ ಕೆಂಪಯ್ಯ ಅವರನ್ನು ಸಿಬಿಐ ವಿಚಾರಣೆ ನಡೆಸಿದೆ. ಲಾಟರಿ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಸಿಬಿಐ ನೋಟಿಸ್ ಜಾರಿಗೊಳಿಸಿತ್ತು. ದೆಹಲಿಯ ಸಿಬಿಐ ಕಚೇರಿಯಲ್ಲಿ ಇಂದು ಇಬ್ಬರ ವಿಚಾರಣೆ ನಡೆದಿದೆ.[ಲಾಟರಿ ಮಾರ್ಟಿನ್ ಕರಾಳ ಸಾಮ್ರಾಜ್ಯದಲ್ಲಿ ಒಂದು ಸುತ್ತು]

ಕರ್ನಾಟಕ ಸರ್ಕಾರ ಮೊದಲು ಲಾಟರಿ ಹಗರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು. ಸಿಐಡಿ ತನಿಖೆಯ ವೇಳೆ ಸಿಐಡಿ ಹಗರಣದಲ್ಲಿ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂಬುದು ಬಹಿರಂಗವಾಗಿತ್ತು. ಪ್ರತಿಪಕ್ಷಗಳು ಸಿಬಿಐ ತನಿಖೆಗೆ ಪಟ್ಟು ಹಿಡಿದಿದ್ದರಿಂದ ಸರ್ಕಾರ 2015ರ ಮೇ 25ರಂದು ತನಿಖೆಯನ್ನು ಸಿಬಿಐಗೆ ವಹಿಸಿತ್ತು.[ಲಾಟರಿ ಹಗರಣ ಸಿಬಿಐ ತನಿಖೆಗೆ ಕೊಟ್ಟಿದ್ದೇಕೆ?]

ಲಾಟರಿ ಹಗರಣದ ನಂಟು ಹೊಂದಿದ್ದಾರೆ ಎಂಬ ಆರೋಪದ ಮೇಲೆ ಸರ್ಕಾರ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರನ್ನು ಅಮಾನತು ಮಾಡಿತ್ತು. ಆದರೆ, 2015ರ ಅಕ್ಟೋಬರ್‌ನಲ್ಲಿ ಅವರ ಅಮಾನತು ಆದೇಶವನ್ನು ರದ್ದುಗೊಳಿಸಲಾಗಿತ್ತು....[ಕೆಂಪಯ್ಯರನ್ನು ವಿವಾದಗಳು ಸದಾ ಕಾಡುವುದೇಕೆ?]

ಲಾಟರಿ ನಿಷೇಧ ಜಾರಿಯಲ್ಲಿದೆ

ಲಾಟರಿ ನಿಷೇಧ ಜಾರಿಯಲ್ಲಿದೆ

ಕರ್ನಾಟಕದಲ್ಲಿ 2007 ರ ಮಾರ್ಚ್ 27 ರಂದು ಲಾಟರಿ ನಿಷೇಧಕ್ಕೆ ಕ್ರಮ ಕೈಗೊಳ್ಳಲಾಗಿದೆ. ಏಪ್ರಿಲ್ 1 ರಿಂದ ಅಧಿಕೃತವಾಗಿ ಈ ಆದೇಶ ಜಾರಿಗೆ ಬಂದಿದೆ. ಆನ್‌ಲೈನ್ ಸೇರಿದಂತೆ ಅಕ್ರಮ ಲಾಟರಿ ವಹಿವಾಟು ನಡೆಯುತ್ತಿದೆ ಎಂದು ಮಾಧ್ಯಮಗಳಲ್ಲಿ ವರದಿ ಪ್ರಸಾರವಾಗಿತ್ತು. ಕೋಲಾರದ ಕೆಜಿಎಫ್‌ನಲ್ಲಿ ಅಕ್ರಮ ಲಾಟರಿ ದಂಧೆಯ ಬಗ್ಗೆ ಮೊಕದ್ದಮೆ ದಾಖಲಾಗಿತ್ತು.

ಸಿಐಡಿ ತನಿಖೆಗೆ ಆದೇಶ ನೀಡಿದ ಸರ್ಕಾರ

ಸಿಐಡಿ ತನಿಖೆಗೆ ಆದೇಶ ನೀಡಿದ ಸರ್ಕಾರ

ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಲಾಟರಿ ದಂಧೆಯ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು 2015 ರ ಮೇ 6 ರಂದು ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು. ವರದಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಭಾಗಿಯಾದ ಆರೋಪಗಳು ಕೇಳಿಬಂದಿತ್ತು. ಆದ್ದರಿಂದ ಸರ್ಕಾರ ಮೇ 8 ರಂದು ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತು.

ಪಾರಿ ರಾಜನ್ ಬಂಧನ

ಪಾರಿ ರಾಜನ್ ಬಂಧನ

ಪಾರಿ ರಾಜನ್ ಒಂದಂಕಿ ಲಾಟರಿ ಹಗರಣದ ಕಿಂಗ್ ಪಿನ್. ಕೋಲಾರದಲ್ಲಿ ಆತನನ್ನು ಬಂಧಿಸಲಾಗಿತ್ತು. ಆತನ ಆರೋಗ್ಯದದಲ್ಲಿ ಏರುಪೇರಾದ ಬಳಿಕ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಆತನನ್ನು ಸ್ಥಳಾಂತರ ಮಾಡಲಾಯಿತು.

ಇಬ್ಬರ ವಿಚಾರಣೆ

ಇಬ್ಬರ ವಿಚಾರಣೆ

ಶುಕ್ರವಾರ ರಾಜ್ಯ ಪೊಲೀಸ್ ಮಹಾನಿರ್ದೇಶ ಓಂ ಪ್ರಕಾಶ್ ಮತ್ತು ಗೃಹ ಸಚಿವರ ಸಲಹೆಗಾರ ಕೆಂಪಯ್ಯ ಅವರನ್ನು ಸಿಬಿಐ ವಿಚಾರಣೆ ನಡೆಸಿದೆ. ಒಂದಂಕಿ ಲಾಟರಿ ಹಗರಣದಲ್ಲಿ ಹಿರಿಯ ಅಧಿಕಾರಿಗಳ ಪಾತ್ರದ ಬಗ್ಗೆ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ವಿಚಾರಣೆ ನಡೆಸಲಾಗಿದೆ.

 ಅಲೋಕ್ ಕುಮಾರ್ ಅಮಾನತು

ಅಲೋಕ್ ಕುಮಾರ್ ಅಮಾನತು

ಲಾಟರಿ ಹಗರಣದ ನಂಟು ಹೊಂದಿದ್ದಾರೆ ಎಂಬ ಆರೋಪದ ಮೇಲೆ ಸರ್ಕಾರ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರನ್ನು ಅಮಾನತು ಮಾಡಿತ್ತು. ಆದರೆ, 2015ರ ಅಕ್ಟೋಬರ್‌ನಲ್ಲಿ ಅವರ ಅಮಾನತು ಆದೇಶವನ್ನು ರದ್ದುಗೊಳಿಸಲಾಗಿತ್ತು.

English summary
Karnataka Home minister advisor Kempaiah and Director General of Police (DGP) Om Prakash faced Central Bureau of Investigation (CBI) enquiry on Friday in the case of single digit lottery scam.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X