ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊಪ್ಪಳ: ಹುಲಿಗೆಮ್ಮ ದೇವಿ ಜಾತ್ರೆ ಮೇ 11ರಿಂದ ಆರಂಭ

ಉತ್ತರ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿ ಜಾತ್ರೆ ಮೇ 11 ರಿಂದ ಪ್ರಾರಂಭವಾಗಲಿದೆ

By Mahesh
|
Google Oneindia Kannada News

ಕೊಪ್ಪಳ, ಮೇ. 03 : ಉತ್ತರ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿ ಜಾತ್ರೆ ಮೇ 11 ರಿಂದ ಪ್ರಾರಂಭವಾಗಲಿದ್ದು, ಈ ಸಂದರ್ಭದಲ್ಲಿ ಭಕ್ತಾಧಿಗಳಿಗೆ ಶುದ್ಧ ಕುಡಿಯುವ ನೀರು ಹಾಗೂ ನೆರಳಿನ ವ್ಯವಸ್ಥೆ ಹಾಗೂ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವ ಸಿದ್ಧತೆ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರದಂದು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹುಲಿಗೆಮ್ಮ ದೇವಿಯ ಜಾತ್ರೆಯು ಮೇ.11 ರಿಂದ 22 ರವರೆಗೆ ಜರುಗಲಿದ್ದು, ಪ್ರತಿ ವರ್ಷದಂತೆ ಈ ವರ್ಷವು ವಿಜೃಂಭಣೆಯಿಂದ ನಡೆಯಲಿದೆ.

Koppal Huligemma Devi Temple Jatre on May 11

ಮೇ. 20 ರಂದು ಸಂಜೆ 5.30 ಗಂಟೆಗೆ ಮಹಾರಥೋತ್ಸವ ಜರುಗಲಿದ್ದು, ಜಾತ್ರಾ ಮಹೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ. ಜಾತ್ರೆಗೆ ಆಗಮಿಸುವ ಭಕ್ತಾದಿಗಳಿಗೆ ದೇವಸ್ಥಾನದಲ್ಲಿ ಯಾವುದೇ ತೊಂದರೆಯಾಗದ ರೀತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಬೇಕು.

ಪಾರ್ಕಿಂಗ್ ವ್ಯವಸ್ಥೆ ದೇವಾಲಯದಿಂದ ಅತಿ ದೂರವಾದಲ್ಲಿ, ವೃದ್ಧರು, ಅಂಗವಿಕಲರಿಗೆ ದೇವಸ್ಥಾನಕ್ಕೆ ತೆರಳಲು ತೀವ್ರ ತೊಂದರೆಯಾಗುವ ಕಾರಣಕ್ಕೆ, ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಮಾಡಲು, ಸೂಕ್ತ ಸ್ಥಳ ಗುರುತಿಸಿ ಸಿದ್ಧತೆಗಳನ್ನು ಕೈಗೊಳ್ಳಬೇಕು.

Koppal Huligemma Devi Temple Jatre from May 11

ಪ್ರಾಣಿಬಲಿ ನಿಷೇಧ : ಜಾತ್ರೆಗೆ ಲಕ್ಷಾಂತರ ಭಕ್ತರು ಆಗಮಿಸಲಿದ್ದು ನೈರ್ಮಲ್ಯತೆ ಕಾಪಾಡುವ ದೃಷ್ಠಿಯಿಂದ, ಈ ಬಾರಿ ಜಾತ್ರೆಯಲ್ಲಿ ಸ್ವಚ್ಛತೆ ಹೆಚ್ಚಿನ ಆದ್ಯತೆ ನೀಡಬೇಕು. ಗಂಗಾವತಿ, ಕುಷ್ಟಗಿ, ಯಲಬುರ್ಗಾ, ಕೊಪ್ಪಳ ಮತ್ತು ಹೊಸಪೇಟೆ(15 ಕಿ.ಮೀ)ಯಿಂದ ವಿಶೇಷ ಬಸ್ ವ್ಯವಸ್ಥೆ ಮಾಡಬೇಕು. ಜಾತ್ರೆ ಸಂದರ್ಭದಲ್ಲಿ ಪ್ರಾಣಿಬಲಿ ಕೊಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಕಾನೂನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವ ಬಗ್ಗೆ ಎಚ್ಚರಿಕೆ ಫಲಕಗಳನ್ನು ಅಳವಡಿಸಬೇಕು.

ಜಾತ್ರಾ ಸಂದರ್ಭದಲ್ಲಿ ಸುಮಾರು ಒಂದು ತಿಂಗಳುಗಳ ಕಾಲ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಕ್ಷೇತ್ರಕ್ಕೆ ಬರುವುದರಿಂದ, ಮುಂಜಾಗ್ರತಾ ಕ್ರಮವಾಗಿ ಹುಲಿಗಿಯಲ್ಲಿ ಹೆಚ್ಚುವರಿ ವೈದ್ಯರು ಮತ್ತು ಸಿಬ್ಬಂದಿಗಳನ್ನು ನಿಯೋಜಿಸಬೇಕು. ಅಲ್ಲದೆ ಅಗತ್ಯ ಔಷಧಿಯನ್ನು ದಾಸ್ತಾನು ಇರಿಸಬೇಕು. ಸಾಧ್ಯವಾದಲ್ಲಿ, ದೇವಸ್ಥಾನದ ಬಳಿ ತಾತ್ಕಾಲಿಕ ಚಿಕಿತ್ಸಾ ಕೇಂದ್ರ ಪ್ರಾರಂಭಿಸಬೇಕು. ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

English summary
Huligemma Devi Temple Jatre will be held on May 11 in Koppal district. Huligemma Devi temple is situated in a village called Huligi. This village is beside bank of Tungabadra. Huligemma Devi Temple is around 15 km from Hospet; 25 km from Koppal and 75 km from Ballari
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X