ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿದ್ದರಾಮಯ್ಯ ಸಂಪುಟ ಸೇರುವ ಡಾ.ಜಿ.ಪರಮೇಶ್ವರ ಪರಿಚಯ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 29 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರಿಗೆ ಸ್ಥಾನ ಮಾನ ಕಲ್ಪಿಸಬೇಕೆಂಬ ಬೇಡಿಕೆ ಈಡೇರಿದೆ. ಕೆಪಿಸಿಸಿ ಅಧ್ಯಕ್ಷರಾಗಿ 5 ವರ್ಷ ಪೂರ್ಣಗೊಳಿಸಿರುವ ಪರಮೇಶ್ವರ ಅವರು ಸಚಿವರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟ ಸೇರಲಿದ್ದಾರೆ.

2013ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆದು ಕರ್ನಾಟಕದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಿತು. ತುಮಕೂರು ಜಿಲ್ಲೆಯ ಕೊರಟಗೆರೆ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ (62) ಅವರು 54,074 ಮತಗಳನ್ನು ಪಡೆದು ಸೋಲು ಅನುಭವಿಸಿದರು. ಪರಮೇಶ್ವರ ವಿರುದ್ಧ ಸ್ಪರ್ಧಿಸಿದ್ದ ಜೆಡಿಎಸ್‌ನ ಸುಧಾಕರಲಾಲ್ 72,229 ಮತಗಳನ್ನುಗಳಿಸಿ ಜಯಗಳಿಸಿದರು.

parameshwar

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದ ಪರಮೇಶ್ವರ ಅವರಿಗೆ ಸೂಕ್ತ ಸ್ಥಾನ-ಮಾನ ನೀಡಬೇಕು ಎಂಬ ಕೂಗು ಆಗಲೇ ಹುಟ್ಟಿಕೊಂಡಿತು. ಪರಮೇಶ್ವರ ಅವರಿಗೆ ಡಿಸಿಎಂ ಪಟ್ಟ ಕೊಡಬೇಕು ಎಂಬ ಕೂಗು ಆಗಾಗ ಕೇಳಿಬಂದಿತು. [ಸಂಪುಟ ಸೇರುವ ನಾಲ್ವರ ಹೆಸರು ಅಂತಿಮ]

2014ರ ಜುಲೈ 1 ರಂದು ಡಾ.ಜಿ.ಪರಮೇಶ್ವರ ಅವರನ್ನು ವಿಧಾನಪರಿಷತ್ ಸದಸ್ಯರಾಗಿ ಆಯ್ಕೆ ಮಾಡಲಾಯಿತು. ಸದ್ಯ, ಸಚಿವರಾಗಿ ಪರಮೇಶ್ವರ ಅವರು ಸಿದ್ದರಾಮಯ್ಯ ಅವರ ಸಂಪುಟ ಸೇರಲಿದ್ದಾರೆ. ಪರಮೇಶ್ವರ ಅವರಿಗೆ ಪ್ರಬಲ ಖಾತೆಯನ್ನು ನೀಡಲಾಗುತ್ತದೆ. ಯಾವ ಖಾತೆ ನೀಡಬೇಕು? ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ಧರಿಸಲಿದ್ದಾರೆ. [2013ರ ಚುನಾವಣಾ ಫಲಿತಾಂಶ]

ವೀರಪ್ಪ ಮೊಯ್ಲಿ ಅವರು ಮುಖ್ಯಮಂತ್ರಿಗಳಾಗಿದ್ದಾಗ ರೇಷ್ಮೆ ಸಚಿವರಾಗಿ, ಎಸ್‌.ಎಂ.ಕೃಷ್ಣ ಅವರ ಸಂಪುಟದಲ್ಲಿ ಉನ್ನತ ಶಿಕ್ಷಣ ಸಚಿವರಾಗಿ ಪರಮೇಶ್ವರ ಅವರ ಕೆಲಸ ಮಾಡಿದ ಅನುಭವ ಹೊಂದಿದ್ದು, ಈಗ ಮತ್ತೊಮ್ಮೆ ಸಚಿವರಾಗಿ ಗುರುವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪರಮೇಶ್ವರ ಅವರ ಸಂಕ್ಷಿಪ್ತ ಪರಿಚಯ ಇಲ್ಲಿದೆ..

* ದಲಿತ ಜನಾಂಗಕ್ಕೆ ಸೇರಿದ ಪರಮೇಶ್ವರ ಅವರು 3ನೇ ಬಾರಿ ಸಚಿವರಾಗುತ್ತಿದ್ದಾರೆ
* 1989ರಲ್ಲಿ ಕೊರಟಗೆರೆ ಕ್ಷೇತ್ರದಿಂದ ಮೊದಲ ಬಾರಿಗೆ ವಿಧಾನಸಭೆಗೆ ಆಯ್ಕೆ
* ವೀರಪ್ಪ ಮೊಯ್ಲಿ ಸಂಪುಟದಲ್ಲಿ ರೇಷ್ಮೆ ಸಚಿವರಾಗಿ ಕೆಲಸ
* 1999ರಲ್ಲಿ ಶಾಸಕರಾಗಿ ಮರು ಆಯ್ಕೆ, ಎಸ್‌.ಎಂ.ಕೃಷ್ಣ ಸಂಪುಟದಲ್ಲಿ ಉನ್ನತ ಶಿಕ್ಷಣ ಸಚಿವರಾಗಿ ಕೆಲಸ
* 2013ರ ಚುನಾವಣೆ ಕೊರಟಗೆರೆಯಲ್ಲಿ ಸೋಲು
* 2010ರ ಅ. 29ರಂದು ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ
* 2014ರ ಜುಲೈ 1 ರಂದು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆ

English summary
Karnataka Pradesh Congress Committee(KPCC) president Dr.G.Parameshwara will join CM Siddaramaiah cabinet on Thursday, October 29, 2015. Here is profile of Parameshwara.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X