ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜೆಡಿಎಸ್ ರಾಜ್ಯಾಧ್ಯಕ್ಷರಾದ ಕುಮಾರಸ್ವಾಮಿ ಹೇಳಿದ್ದಿಷ್ಟು

|
Google Oneindia Kannada News

ಬೆಂಗಳೂರು, ನ.13 : 'ಪಕ್ಷದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿವೆ. ಲೋಪದೋಷಗಳನ್ನು ಸರಿಪಡಿಸಿಕೊಂಡು ತಳಮಟ್ಟದಿಂದ ಪಕ್ಷವನ್ನು ಸಂಘಟಿಸುವುದು ತಮ್ಮ ಮುಂದಿರುವ ಗುರಿ' ಎಂದು ಜೆಡಿಎಸ್‍ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಗುರುವಾರ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಪಕ್ಷದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿವೆ ಅವೆಲ್ಲವನ್ನೂ ಸರಿಪಡಿಸಿಕೊಂಡು ಪಕ್ಷದ ಎಲ್ಲಾ ಮುಖಂಡರು, ಕಾರ್ಯಕರ್ತರು, ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ತಳಮಟ್ಟದಿಂದ ಪಕ್ಷ ಸಂಘಟಿಸುತ್ತೇನೆ ಎಂದರು. [ಎಚ್ಡಿಕೆ ಮತ್ತೆ ಜೆಡಿಎಸ್ ಅಧ್ಯಕ್ಷರು]

Kumaraswamy

ಪಕ್ಷದ ನಾಯಕತ್ವದ ಬಗ್ಗೆ ಮುಖಂಡರು, ಶಾಸಕರು, ಕಾರ್ಯಕರ್ತರ ನಡುವೆ ಭಿನ್ನಾಭಿಪ್ರಾಯಗಳಿದ್ದರೆ, ನನ್ನನ್ನು ಭೇಟಿ ಮಾಡಿ ಚರ್ಚಿಸಬಹುದು ಎಂದು ಕುಮಾರಸ್ವಾಮಿ ಮುಕ್ತ ಆಹ್ವಾನ ನೀಡಿದರು. ಪಕ್ಷ ಸಂಘಟನೆಗಾಗಿ ಒಟ್ಟಾಗಿ ಕೆಲಸ ಮಾಡೋಣ ಎಂದು ಕರೆ ನೀಡಿದರು. [ಭಿನ್ನಮತ ಸಹಿಸಲ್ಲ, ದೇವೇಗೌಡ ಘರ್ಜನೆ]

ಪಕ್ಷದಲ್ಲಿನ ಕೆಲವು ಅಸಮಾಧಾನಗಳಿಂದಾಗಿ ಲೋಕಸಭೆ, ವಿಧಾನಸಭೆ ಚುನಾವಣೆಗಳಲ್ಲಿ ಜೆಡಿಎಸ್ ಪಕ್ಷಕ್ಕೆ ಹಿನ್ನಡೆ ಉಂಟಾಗಿದೆ. ಅದನ್ನೇ ಸವಾಲಾಗಿ ಸ್ವೀಕರಿಸಿ ಮುಂದಿನ ದಿನಗಳಲ್ಲಿ ಪಕ್ಷವನ್ನು ಬಲಿಷ್ಠಗೊಳಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಕುಮಾರಸ್ವಾಮಿ ತಿಳಿಸಿದರು.

ಜೆಡಿಎಸ್ ಪಕ್ಷದ ವಿರುದ್ಧ ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆಲ್ಲಾ ಹೆದರುವುದಿಲ್ಲ ಎಂದು ಹೇಳಿದ ಕುಮಾರಸ್ವಾಮಿ, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಉತ್ತಮ ಜನರ ಹಿತಾಸಕ್ತಿಯನ್ನು ಕಡೆಗಣಿಸಿದೆ. ಇವರ ಆಡಳಿತದಿಂದ ಜನ ಬೇಸತ್ತಿದ್ದಾರೆ ಎಂದು ಹೇಳಿದರು.

ಈ ಹಿಂದೆ ಬಿಜೆಪಿ ಭ್ರಷ್ಟಾಚಾರದಲ್ಲಿ ತೊಡಗಿ ಅಧಿಕಾರ ಕಳೆದುಕೊಂಡಿತ್ತು. ಅದೇ ಹಾದಿಯನ್ನು ಕಾಂಗ್ರೆಸ್ ಪಾಲಿಸುತ್ತಿದೆ. ಕಬ್ಬು ಮತ್ತು ಈರುಳ್ಳಿಗೆ ಬೆಂಬಲ ಬೆಲೆ ದೊರೆಯದೆ ರೈತರು ಕಂಗಾಲಾಗಿದ್ದಾರೆ. ಇದರ ಬಗ್ಗೆ ರಾಜ್ಯ ಸರ್ಕಾರ ತಲೆ ಕೆಡಿಸಿಕೊಳ್ಳುತ್ತಿಲ್ಲ. ಬೆಳಗಾವಿ ಅಧಿವೇಶನದಲ್ಲಿ ಈ ಬಗ್ಗೆ ಚರ್ಚಿಸಲಾಗುತ್ತದೆ ಎಂದರು.

English summary
Janata Dal (Secular) State president H.D. Kumaraswamy on Thursday said he would focus on strengthen the party in North Karnataka and South Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X