ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಬ್ ಗಯಾರ್ ಶಾಲೆಗೆ ನುಗ್ಗಿದ ಚಿರತೆ

|
Google Oneindia Kannada News

ಬೆಂಗಳೂರು, ಫೆಬ್ರವರಿ 7 : ವರ್ತೂರು ಬಳಿ ಇರುವ ವಿಬ್ ಗಯಾರ್ ಶಾಲೆಗೆ ಚಿರತೆ ನುಗ್ಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ನೂರಾರು ಜನರು ಚಿರತೆ ನೋಡಲು ಶಾಲಾ ಆವರಣಕ್ಕೆ ಆಗಮಿಸಿದ್ದಾರೆ. [ಚಿರತೆ ಹಿಡಿಯುವ ಕಾರ್ಯಾಚರಣೆ ಚಿತ್ರಗಳು]

ಭಾನುವಾರ ಮುಂಜಾನೆ 4.15ರ ಸುಮಾರಿಗೆ ಚಿರತೆ ಶಾಲೆಯ ಆವರಣದೊಳಗೆ ಆಗಮಿಸುತ್ತಿರುವುದನ್ನು ಭದ್ರತಾ ಸಿಬ್ಬಂದಿ ಸಿಸಿಟಿವಿಯಲ್ಲಿ ಗಮನಿಸಿದ್ದಾರೆ. ಈ ಬಗ್ಗೆ ವರ್ತೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅರಣ್ಯ ಇಲಾಖೆ ಮತ್ತು ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಚಿರತೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ. [ಚಿಕ್ಕಮಗಳೂರು : ಕಾಲೇಜಿಗೆ ನುಗ್ಗಿದ ಚಿರತೆ]

vibgyor

ಭಾನುವಾರವಾದ್ದರಿಂದ ಶಾಲೆಗೆ ರಜೆ ಇದೆ. ಆದರೆ, ನೂರಾರು ಜನರು ಶಾಲೆಯ ಆವರಣದಲ್ಲಿ ಸೇರಿದ್ದು, ಅವರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. [ಚಿತ್ರಗಳು : ಮೂಡಬಿದಿರೆಯಲ್ಲಿ ಬಾವಿಗೆ ಬಿದ್ದ ಚಿರತೆ ರಕ್ಷಣೆ]

'ಶಾಲೆಗೆ ನುಗ್ಗಿರುವುದು ಚಿರತೆಯೇ. ಸಿಸಿಟಿವಿಯಲ್ಲಿ ಅದರ ಸ್ಪಷ್ಟ ದೃಶ್ಯಾವಳಿಗಳು ಸೆರೆಯಾಗಿವೆ' ಎಂದು ಶಾಲೆಯ ಕಟ್ಟಡದ ಮಾಲೀಕ ಮುನಿರಾಜು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ. [ಅತ್ಯಾಚಾರ ಪ್ರಕರಣದಿಂದ ಸುದ್ದಿಯಾದ ಶಾಲೆ]

ಅರಣ್ಯ ಇಲಾಖೆ ಅಧಿಕಾರಿಗಳು ಬೋನಿನೊಂದಿಗೆ ಸ್ಥಳಕ್ಕೆ ಆಗಮಿಸಿದ್ದಾರೆ. ಶಾಲೆಯ ಆವರಣದಲ್ಲಿ ಪರಿಶೀಲನೆ ನಡೆಸಿದ ಬಳಿಕ ಚಿರತೆ ಹಿಡಿಯಲು ಬೋನನ್ನು ಇಡುವ ಸಾಧ್ಯತೆ ಇದೆ.

ಒಂದು ವೇಳೆ ಚಿರತೆ ಇಂದು ಪತ್ತೆಯಾಗದಿದ್ದರೆ ಫೆ.8ರ ಸೋಮವಾರ ಶಾಲೆಗೆ ರಜೆ ಘೋಷಣೆ ಮಾಡಲು ಆಡಳಿತ ಮಂಡಳಿ ನಿರ್ಧರಿಸಿದ್ದು, ಈ ಬಗ್ಗೆ ಪೋಷಕರಿಗೆ ಎಸ್‌ಎಂಎಸ್ ಕಳಿಸಲಾಗುತ್ತದೆ ಎಂದು ತಿಳಿದುಬಂದಿದೆ.

English summary
Leopard entered into the premises of a Vibgyor school near Varthur. Forest department officials reached the spot.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X