ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಧಾನಸಭೆ ಅಧಿವೇಶನ: ಗಣಪತಿ ಆತ್ಮಹತ್ಯೆಯದ್ದೇ ಚರ್ಚೆ

|
Google Oneindia Kannada News

ಬೆಂಗಳೂರು, ಜುಲೈ 11 : ಸೋಮವಾರ ವಿಧಾನಸಭೆ ಕಲಾಪ ಆರಂಭವಾದರೂ ಬಹುತೇಕ ಸಮಯ ಡಿವೈಎಸ್ಪಿ ಗಣಪತಿ ಆತ್ಮಹತ್ಯೆಗೆ ಸಂಬಂಧಿಸಿದ ಚರ್ಚೆಗೆ ಮೀಸಲಾಯಿತು. ಆಡಳಿತ ಮತ್ತು ವಿರೋಧ ಪಕ್ಷಗಳ ನಡುವಿನ ವಾಕ್ಸಮರದಲ್ಲೇ ಇಡೀ ದಿನ ಮುಕ್ತಾಯವಾಯಿತು.

ಜನಾರ್ದನ ಪೂಜಾರಿ ಅವರ ಹೇಳಿಕೆಯನ್ನು ಸದನದಲ್ಲಿ ಪ್ರಸ್ತಾಪಿಸಿದ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಪಿಎಸ್‌ಐ ಜಗದೀಶ್ ಹತ್ಯೆ, ಚಾಮರಾಜನಗರ ಜಿಲ್ಲಾಧಿಕಾರಿ ಮೇಲಿನ ಹಲ್ಲೆ, ರಶ್ಮಿ ಮಹೇಶ್ ಮೇಲಿನ ಹಲ್ಲೆ ಮುಂತಾದವುಗಳನ್ನು ಪ್ರಸ್ತಾಪಿಸಿ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ ಶೆಟ್ಟರ್. [ಜನಾರ್ದನ ಪೂಜಾರಿ ಹೇಳಿದ್ದೇನು?]

'ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಅವರನ್ನು ಸಂತೃಪ್ತಿಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಕೆ.ಜೆ.ಜಾರ್ಜ್ ರಕ್ಷಣೆ ಮಾಡುತ್ತಿದ್ದಾರೆ' ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ದೂರಿದರು.

ಸಮಯ 2 ಗಂಟೆ : ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಬೇಕು, ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ವಿಧಾನಪರಿಷತ್ತಿನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಗದ್ದಲ ಎಬ್ಬಿಸಿದ್ದರಿಂದ ಕಲಾಪವನ್ನು ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರು ಮಧ್ಯಾಹ್ನ 3.30ಕ್ಕೆ ಮುಂದೂಡಿದರು.

ವಿಧಾನಸಭೆಯಲ್ಲಿಯೂ ಜಾರ್ಜ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಪಕ್ಷಗಳು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದು, ಗದ್ದಲದ ಹಿನ್ನಲೆಯಲ್ಲಿ ಕಲಾಪವನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಲಾಗಿದೆ. [ಜಾರ್ಜ್ ವಿರುದ್ಧ FIR ದಾಖಲಿಸಿ : ಓದುಗರ ಒಕ್ಕೊರಲ ಕೂಗು]

assembly session

ಸಮಯ 12. 45 : ಪ್ರತಿಪಕ್ಷಗಳ ಮನವೊಲಿಸುವಲ್ಲಿ ಸ್ಪೀಕರ್ ಕೆ.ಬಿ.ಕೋಳಿವಾಡ ಯಶಸ್ವಿಯಾಗಿದ್ದಾರೆ. ವಿಧಾನಸಭೆ ಕಲಾಪ ಮತ್ತೆ ಆರಂಭವಾಗಿದೆ. ಪ್ರತಿಪಕ್ಷಗಳು ಧರಣಿಯನ್ನು ವಾಪಸ್ ಪಡೆದಿದ್ದು, ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ಬಗ್ಗೆ ಚರ್ಚೆ ನಡೆಯುತ್ತಿದೆ. [ಸಚಿವ ಜಾರ್ಜ್ ವಿರುದ್ಧ ಗಣಪತಿ ಪತ್ನಿ, ಪುತ್ರರಿಂದ ದೂರು]

ಎಂ.ಕೆ.ಗಣಪತಿ ಅವರ ಆತ್ಮಹತ್ಯೆ ಬಗ್ಗೆ ನಿಯಮ 62ರ ಅಡಿ ಚರ್ಚೆ ನಡೆಸಲು ಸ್ಪೀಕರ್ ಅವಕಾಶ ನೀಡಿದರು. ಡಿವೈಎಸ್‌ಪಿ ಕಲ್ಲಪ್ಪ, ಎಂ.ಕೆ.ಗಣಪತಿ ಅವರ ಆತ್ಮಹತ್ಯೆ ಬಗ್ಗೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು ಮಾತನಾಡುತ್ತಿದ್ದಾರೆ. [[ವಿಡಿಯೋ - ಡಿವೈಎಸ್ ಪಿ ಗಣಪತಿ ಕಡೇ ಸಂದರ್ಶನ]

ಹಿಂದಿನ ಸುದ್ದಿ : ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಮತ್ತು ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ಬಗ್ಗೆ ವಿಧಾನಸಭೆ ಮತ್ತು ವಿಧಾನಪರಿಷತ್ತಿನಲ್ಲಿ ಬಿಸಿ-ಬಿಸಿ ಚರ್ಚೆ ನಡೆಯುತ್ತಿದೆ. ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಜಂಟಿಯಾಗಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.

ಸೋಮವಾರ ವಿಧಾನ ಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರು ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ಬಗ್ಗೆ ವಿಷಯ ಪ್ರಸ್ತಾಪಿಸಿದರು. 'ಗಣಪತಿ ಅವರ ಹೆಂಡತಿ, ಮಕ್ಕಳು ಎಫ್‌ಐಆರ್ ದಾಖಲಿಸಲು ಬೇಡಿಕೊಳ್ಳಬೇಕಾಯಿತು. ದೂರು ಕೊಟ್ಟರೂ ಎಫ್‌ಐಆರ್ ಹಾಕಿಲ್ಲ. ರಾಜ್ಯದಲ್ಲಿ ಪ್ರಜಾಪ್ರಭುತ್ವ ಇದೆಯೇ?' ಎಂದು ಪ್ರಶ್ನೆ ಮಾಡಿದರು.

ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು, 'ಎಂ.ಕೆ.ಗಣಪತಿ ಅವರ ಆತ್ಮಹತ್ಯೆ ಪ್ರಕರಣದ ಬಗ್ಗೆ ಚರ್ಚೆ ನಡೆಸಲು ಅವಕಾಶ ನೀಡಬೇಕು' ಎಂದು ಸ್ಪೀಕರ್ ಕೆ.ಬಿ.ಕೋಳಿವಾಡ ಅವರಿಗೆ ಮನವಿ ಮಾಡಿದರು. ಜೆಡಿಎಸ್ ಸದಸ್ಯರು ಇದಕ್ಕೆ ಧ್ವನಿಗೂಡಿಸಿದರು. [DySP ಗಳ ಆತ್ಮಹತ್ಯೆ, ವರದಿ ಕೇಳಿದ ಎಐಸಿಸಿ]

'ಕರ್ನಾಟಕದಲ್ಲಿ ಪ್ರಜಾಪ್ರಭುತ್ವವಿಲ್ಲ. ಯಾರು ಯಾರನ್ನು ಬೇಕಾದರೂ ಕೊಲೆ ಮಾಡಬಹುದು. ಸಚಿವರ ವಿರುದ್ಧ ದೂರು ಕೊಟ್ಟರೂ, ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಸಚಿವರ ಹೆಸರು ಪ್ರಸ್ತಾಪಿಸಿದರೂ ಸಾಕ್ಷಿಯಲ್ಲ ಎಂದು ಪೊಲೀಸರು ಹೇಳುತ್ತಿದ್ದಾರೆ' ಎಂದು ಕೆ.ಎಸ್.ಈಶ್ವರಪ್ಪ ಟೀಕಿಸಿದರು.

ವಿಧಾನಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 'ಡಿವೈಎಸ್‌ಪಿ ಗಣಪತಿ ಅವರ ಆತ್ಮಹತ್ಯೆ ದುರಾದೃಷ್ಟಕರ. ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ' ಎಂದು ಹೇಳಿಕೆ ನೀಡಿದರು. ಆದರೆ, ಚರ್ಚೆಗೆ ಅವಕಾಶ ನೀಡುವಂತೆ ಬಿಜೆಪಿ, ಜೆಡಿಎಸ್ ಸದಸ್ಯರು ಸದನದ ಬಾವಿಗಿಳಿದು ಧರಣಿ ಮುಂದುವರೆಸಿದರು.

ವಿಧಾನಸಭೆಯಲ್ಲಿ 'ಇದು ಕೊಲೆಗಡುಕ ಸರ್ಕಾರ' ಎಂದ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದರು. 'ಸಚಿವ ಕೆಜೆ ಜಾರ್ಜ್ ರಾಜೀನಾಮೆ ನೀಡಲಿ', 'ಆತ್ಮಹತ್ಯೆ ಭಾಗ್ಯ' ಎಂದು ಬರೆದ ಫಲಕಗಳನ್ನು ಹಿಡಿದು ಬಿಜೆಪಿ ಸದಸ್ಯರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

ಹೇಳಿಕೆ ನೀಡಿದ ಪರಮೇಶ್ವರ : ಪ್ರತಿಪಕ್ಷಗಳ ಗಲಾಟೆಯ ನಡುವೆಯೇ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಸದನಕ್ಕೆ ಎಂ.ಕೆ.ಗಣಪತಿ ಅವರ ಆತ್ಮಹತ್ಯೆ ಪ್ರಕರಣದ ಬಗ್ಗೆ ಹೇಳಿಕೆ ನೀಡಿದರು. 'ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ' ಎಂದು ಹೇಳಿದರು.

ಆದರೆ, ಪ್ರತಿಪಕ್ಷಗಳ ಗಲಾಟೆ ಮುಂದುವರೆಯಿತು. ಗೃಹ ಸಚಿವರ ಉತ್ತರದ ಪ್ರತಿಗಳನ್ನು ಹರಿದು ಹಾಕಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. ಇದರಿಂದಾಗಿ ಸ್ಪೀಕರ್ ಕೆ.ಬಿ.ಕೋಳಿವಾಡ ಅವರು ಕಲಾಪವನ್ನು ಮಧ್ಯಾಹ್ನ 12.30ಕ್ಕೆ ಮುಂದೂಡಿದರು.

ಜಾರ್ಜ್ ಹೇಳಿದ್ದೇನು? : ಸೋಮವಾರ ವಿಧಾನಸೌಧದಲ್ಲಿ ಮಾತನಾಡಿದ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅವರು, 'ನನ್ನ ವಿರುದ್ಧ ಪ್ರತಿಪಕ್ಷಗಳು ಮಾಡುತ್ತಿರುವ ಆರೋಪಕ್ಕೆ ದಾಖಲೆಗಳನ್ನು ತರಲಿ. ಎಫ್‌ಐಆರ್ ದಾಖಲು ಮಾಡಿದರೆ ಕಾನೂನು ಹೋರಾಟ ನಡೆಸುತ್ತೇನೆ. ಪ್ರಕರಣದ ಬಗ್ಗೆ ಗೃಹ ಸಚಿವರು ಸದನಕ್ಕೆ ಮಾಹಿತಿ ನೀಡುತ್ತಾರೆ. ವೈಯಕ್ತಿಕ ಅಭಿಪ್ರಾಯ ಕೇಳಿದರೆ ನಾನು ಹೇಳಿಕೆ ನೀಡುತ್ತೇನೆ' ಎಂದರು.

English summary
Karnataka Budget session 2016 : Monday July 11 highlights. What happened in the Assembly today?.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X