ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ಇಲ್ಲ

|
Google Oneindia Kannada News

ಬೆಂಗಳೂರು, ಜುಲೈ 13 : ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ಬಗ್ಗೆ ವಿಧಾನಸಭೆ ಮತ್ತು ವಿಧಾನಪರಿಷತ್ತಿನಲ್ಲಿ ಎರಡು ದಿನಗಳ ಕಾಲ ಚರ್ಚೆ ನಡೆದಿದೆ. ಇಂದಿನ ವಿಧಾನಸಭೆ ಕಲಾಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಉತ್ತರ ನೀಡಲಿದ್ದಾರೆ. [ಎಂ.ಕೆ.ಗಣಪತಿ ಆತ್ಮಹತ್ಯೆ, ಸದನದಲ್ಲಿ ಸಿದ್ದರಾಮಯ್ಯ ಕೊಟ್ಟ ಉತ್ತರ]

ಬುಧವಾರದ ಕಲಾಪ ಆರಂಭವಾಗುವುದಕ್ಕೂ ಮುನ್ನ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಯುತ್ತಿದ್ದು, ಸಚಿವ ಕೆ.ಜೆ.ಜಾರ್ಜ್ ಅವರ ವಿರುದ್ಧ ಪ್ರತಿಪಕ್ಷಗಳು ಮಾಡುತ್ತಿರುವ ಆರೋಪಗಳಿಗೆ ತಿರುಗೇಟು ನೀಡುವ ಬಗ್ಗೆ ಚರ್ಚೆ ನಡೆಸಿದೆ. [ಗಣಪತಿ ಆತ್ಮಹತ್ಯೆ, ಮೌನ ಮುರಿದ ಸಚಿವ ಕೆಜೆ ಜಾರ್ಜ್]

siddaramaiah

'ಸರ್ಕಾರ ಮತ್ತು ಪಕ್ಷದ ವರ್ಚಸ್ಸಿಗೆ ಧಕ್ಕೆ ಉಂಟಾಗುವುದಾದದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವೆ' ಎಂದು ಸಚಿವ ಕೆ.ಜೆ.ಜಾರ್ಜ್ ಅವರು ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. [ಎಂಕೆ ಗಣಪತಿ ಆತ್ಮಹತ್ಯೆ : ಸದನದಲ್ಲಿ ಯಾರು, ಏನು ಹೇಳಿದರು?]

ಆದರೆ, ಜಾರ್ಜ್ ರಾಜೀನಾಮೆ ಪಡೆಯದಿರಲು ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಅಲ್ಲದೇ ಜಾರ್ಜ್ ಅವರ ಪರ ನಿಲ್ಲುವಂತೆ ಸಿದ್ದರಾಮಯ್ಯ ಅವರು ಎಲ್ಲಾ ಶಾಸಕರಿಗೆ ಸೂಚನೆ ಕೊಟ್ಟಿದ್ದಾರೆ. ['ಗಣಪತಿ ಅವರ ಜೊತೆ ಡೈಯಿಂಗ್ ಡಿಕ್ಲೆರೇಷನ್ ಸಮಾಧಿಯಾಗಿದೆ']

ಮತ್ತೊಂದು ಕಡೆ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆದಿದೆ. ಇಂದಿನ ಕಲಾಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕುರಿತು ಘೋಷಣೆ ಮಾಡುವ ಸಾಧ್ಯತೆ ಇದೆ.

English summary
Karnataka Budget session 2016 : Wednesday, July 13 highlights. What happened in the Assembly today?.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X