ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

LIVE : ಭಾರತ್ ಬಂದ್‌ಗೆ ಕರ್ನಾಟಕದಲ್ಲಿ ಮಿಶ್ರ ಪ್ರತಿಕ್ರಿಯೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 02 : ಕೇಂದ್ರ ಸರ್ಕಾರದ ರಸ್ತೆ ಸುರಕ್ಷತಾ ಕಾಯ್ದೆ ವಿರೋಧಿಸಿ, ಬೆಲೆ ಏರಿಕೆ ನಿಯಂತ್ರಣ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಸೆಪ್ಟೆಂಬರ್‌ 2ರ ಶುಕ್ರವಾರ ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿವೆ.

* ಬೆಂಗಳೂರಿನ ಟೌನ್ ಹಾಲ್ ಬಳಿ ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ನೂರಾರು ಜನರು ಪಾಲ್ಗೊಂಡಿದ್ದಾರೆ.[ದಕ್ಷಿಣ ಕನ್ನಡದಲ್ಲಿ ಬಂದ್ ಬಿಸಿ ಹೇಗಿದೆ?]

kr market

* ಕಾರ್ಮಿಕ ಸಂಘಟನೆಗಳು ಸೆಪ್ಟೆಂಬರ್‌ 2ರಂದು ಕರೆ ನೀಡಿರುವ ದೇಶವ್ಯಾಪಿ ಮುಷ್ಕರಕ್ಕೆ ಮಂಗಳೂರು ನಗರದಲ್ಲಿ ಉತ್ತಮ ಬೆಂಬಲ ಸಿಕ್ಕಿದೆ.

* 'ನಮ್ಮ ಸಂಸ್ಥೆಯಲ್ಲಿ 20 ಸಾವಿರ ಬಸ್ಸುಗಳಿವೆ. 400 ಬಸ್ಸುಗಳು ಸಂಚಾರ ನಡೆಸುತ್ತಿವೆ. ಹಲವಾರು ಕಾರ್ಮಿಕರು ಕೆಲಸಕ್ಕೆ ಬಂದಿದ್ದಾರೆ. ಕೆಲಸಕ್ಕೆ ಗೈರು ಹಾಜರಾದವರ ವಿರುದ್ಧ ಕ್ರಮ ಕೈಗೊಳ್ಳಲು ಚಿಂತನೆ ನಡೆಸಲಾಗಿದೆ' ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.

ಕರ್ನಾಟಕದಲ್ಲೂ ಬಂದ್‌ಗೆ ಬೆಂಬಲ ಸಿಕ್ಕಿದೆ, ಬೆಂಗಳೂರಿನಲ್ಲಿ ಸರ್ಕಾರಿ ಬಸ್ ಸಂಚಾರ ಸ್ಥಗಿತಗೊಂಡಿದೆ. ಆಟೋ ಮತ್ತು ಕ್ಯಾಬ್‌ಗಳು ಸಂಚಾರ ನಡೆಸುತ್ತಿವೆ. ಹಲವು ಖಾಸಗಿ ಶಾಲೆಗಳು ರಜೆ ಘೋಷಣೆ ಮಾಡಿವೆ, ಸರ್ಕಾರಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. [ಮುಷ್ಕರ : ಯಾವ ಸೇವೆ ಲಭ್ಯ? ಯಾವುದು ಅಲಭ್ಯ?]

ದಕ್ಷಿಣ ಕನ್ನಡ, ಬಳ್ಳಾರಿ, ಕೋಲಾರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಂದ್‌ಗೆ ಬೆಂಬಲ ಸಿಕ್ಕಿಲ್ಲ. ಜನಜೀವನ ಎಂದಿನಂತೆ ಇದೆ. ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ಘೋಷಣೆ ಮಾಡಲಾಗಿದೆ.[ಸೆ. 2ರ ಕಾರ್ಮಿಕ ಸಂಘಟನೆಗಳ ಮುಷ್ಕರ ಯಾಕೆ?]

'ಟ್ರೇಡ್ ಯೂನಿಯನ್‍ಗಳು ಭಾರತ್ ಬಂದ್‍ಗೆ ಕರೆ ನೀಡಿವೆ. ಸಾರ್ವಜನಿಕರಿಗೆ ಬಂದ್ ನಿಂದ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಗೃಹ ಇಲಾಖೆಗೆ ಸೂಚನೆ ನೀಡಲಾಗಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

* ಹುಬ್ಬಳ್ಳಿಯಲ್ಲಿ ಸರ್ಕಾರಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಆಟೋ ಚಾಲಕರು ಪ್ರಯಾಣಿಕರ ಸುಲಿಗೆ ಮಾಡುತ್ತಿದ್ದಾರೆ.

English summary
A nation-wide strike on Friday, September 2, 2016 called by the Trade Unions. Here are the live updates of Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X