ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜನಾರ್ದನ ರೆಡ್ಡಿಗೆ ನವೆಂಬರ್ 30ರ ತನಕ ಬಿಡುಗಡೆ ಇಲ್ಲ

|
Google Oneindia Kannada News

ಬೆಂಗಳೂರು, ನವೆಂಬರ್ 26 : ಲೋಕಾಯುಕ್ತ ವಿಶೇಷ ತನಿಖಾ ತಂಡದಿಂದ ಬಂಧಿತರಾಗಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಕೋರ್ಟ್ ಪೂರ್ಣಗೊಳಿಸಿದ್ದು, ತೀರ್ಪು ಕಾಯ್ದಿರಿಸಿದೆ. ಸದ್ಯ, ಜನಾರ್ದನ ರೆಡ್ಡಿ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಲೋಕಾಯುಕ್ತ ಎಸ್‌ಐಟಿ ವಿಚಾರಣೆಗೆ ನವೆಂಬರ್ 20ರಂದು ಹಾಜರಾಗಿದ್ದ ಜನಾರ್ದನ ರೆಡ್ಡಿ ಅವರನ್ನು ಬಂಧಿಸಲಾಗಿತ್ತು. ಅಂದು ಅವರನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಪುನಃ ನವೆಂಬರ್ 23ರಂದು ಡಿಸೆಂಬರ್ 3ರ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶ ಹೊರಡಿಸಿದೆ. [ಡಿ.3ರ ತನಕ ಗಾಲಿ ಜನಾರ್ದನ ರೆಡ್ಡಿಗೆ ಜೈಲು]

janardhana reddy

ಜನಾರ್ದನ ರೆಡ್ಡಿ ಪರ ವಕೀಲರು ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಬುಧವಾರ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ನವೆಂಬರ್ 30ಕ್ಕೆ ತೀರ್ಪನ್ನು ಕಾಯ್ದಿರಿಸಿದೆ. ಜನಾರ್ದನ ರೆಡ್ಡಿಯನ್ನು ತಮ್ಮ ವಶಕ್ಕೆ ನೀಡಬೇಕು ಎಂಬ ಎಸ್‌ಐಟಿ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ. [ರೆಡ್ಡಿ ಅರೆಸ್ಟ್, ಸಿದ್ದು ಸರ್ಕಾರ ವಿರುದ್ಧ ಸೋಮಶೇಖರ್ ಗರಂ]

ಅಕ್ರಮ ಗಣಿಗಾರಿಕೆ ಕುರಿತು ತನಿಖೆ ನಡೆಸಲು ಕರ್ನಾಟಕ ಸರ್ಕಾರ ರಚನೆ ಮಾಡಿರುವ ಎಸ್‌ಐಟಿ ಐಪಿಸಿ ಸೆಕ್ಷನ್ 407, 420 ಸೇರಿದಂತೆ ವಿವಿಧ ಸೆಕ್ಷನ್ ಗಳಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಜನಾರ್ದನ ರೆಡ್ಡಿ ಅವರ ವಿರುದ್ಧ ಎಫ್ ಐಆರ್ ದಾಖಲು ಮಾಡಿಕೊಂಡಿದೆ.

ಸಿಬಿಐ ತನಿಖೆ ನಡೆಸುತ್ತಿರುವ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲು ಸೇರಿದ್ದ ರೆಡ್ಡಿ, ಸುಮಾರು ಎರಡು ವರ್ಷಕ್ಕೂ ಅಧಿಕ ಕಾಲ ಜೈಲಿನಲ್ಲಿದ್ದರು. ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಈಗಾಗಲೇ 13 ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದಾರೆ.

English summary
Karnataka Lokayukta special court on Wednesday reserved its order on the bail petition filed by former minister Janardhana Reddy. Verdict will be announced on November 30, 2015. Janardhana Reddy arrested by Lokayukta SIT on November 20th.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X