ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಿವಮೊಗ್ಗ, ಮಂಡ್ಯ ಸೇರಿ ವಿವಿಧ ಜಿಲ್ಲೆಯಲ್ಲಿ ಲೋಕಾ ದಾಳಿ

|
Google Oneindia Kannada News

ಬೆಂಗಳೂರು, ಏ. 28 : ಲೋಕಾಯುಕ್ತ ಪೊಲೀಸರು ಮಂಗಳವಾರ ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಿದ್ದಾರೆ. ಮಂಡ್ಯ, ಬೀದರ್, ಶಿವಮೊಗ್ಗ, ಮಂಗಳೂರು, ದೊಡ್ಡಬಳ್ಳಾಪುರ, ಬೆಂಗಳೂರಿನಲ್ಲಿ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ಮುಂದುವರೆದಿದೆ.

ಶಿವಮೊಗ್ಗದಲ್ಲಿ ಲೋಕಾಯುಕ್ತ ಎಸ್ಪಿ ಶ್ರೀಧರ್ ಅವರ ನೇತೃತ್ವದಲ್ಲಿ ಕಸಬಾ ಹೋಬಳಿ ರೆವಿನ್ಯೂ ಇನ್ಸ್‌ಪೆಕ್ಟರ್ ವಿಜಯ್ ಕುಮಾರ್ ಅವರ ಮನೆ ಮೇಲೆ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. ಅಕ್ರಮವಾಗಿ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂಬ ಆರೋಪದ ಹಿನ್ನಲೆಯಲ್ಲಿ ಈ ದಾಳಿ ನಡೆದಿದೆ.

Lokayukta

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಎಇಇ ಚಂದ್ರಶೇಖರ್ ಅವರ ಶರಾವತಿ ನಗರದಲ್ಲಿರುವ ನಿವಾಸದ ಮೇಲೂ ದಾಳಿ ನಡೆಲಾಗಿದ್ದು, ಪರಿಶೀಲನೆ ಮುಂದುವರೆದಿದೆ. [ರಾಮಲಿಂಗಾ ರೆಡ್ಡಿ ವಿರುದ್ಧ ಲೋಕಾಯುಕ್ತಕ್ಕೆ ದೂರು]

ಮಂಡ್ಯದಲ್ಲಿ ದಾಳಿ : ಮಂಡ್ಯದಲ್ಲಿ ಲೋಕಾಯುಕ್ತ ಎಸ್ಪಿ ನಾರಾಯಣ ಸ್ವಾಮಿ ಅವರ ನೇತೃತ್ವದಲ್ಲಿ ಕಸಬಾ ವೃತ್ತದ ಗ್ರಾಮ ಲೆಕ್ಕಾಧಿಕಾರಿ ಎಂ.ಎಸ್.ಸಿದ್ದೇಗೌಡ ಅವರ ಹೊಸಹಳ್ಳಿಯ ನಿವಾಸದ ಮೇಲೆ ದಾಳಿ ನಡೆದಿದೆ. ಮಂಡ್ಯದ್ಲಲಿ ಭೂಮಿ, ನಿವೇಶನ, 2 ಮನೆ, ಮೈಸೂರಿನಲ್ಲಿ ಮೂರು ಅಂತಸ್ತಿನ ಮನೆ ಸೇರಿದಂತೆ ಅಕ್ರಮವಾಗಿ ಆಸ್ತಿಗಳಿಕೆ ಮಾಡಿದ್ದಾರೆ ಎಂಬ ಆರೋಪದ ಹಿನ್ನಲೆಯಲ್ಲಿ ಈ ದಾಳಿ ನಡೆಸಲಾಗಿದೆ. [ಭ್ರಷ್ಟರಿಗೆ ಶಿಕ್ಷೆ ನೀಡುವ ಅಧಿಕಾರ ಲೋಕಾಯುಕ್ತರಿಗೆ ಬೇಕು]

ತುಮಕೂರು : ತುಮಕೂರಿನಲ್ಲಿ ರಾಗಿ ಖರೀದಿ ಕೇಂದ್ರ ಮತ್ತು ಅಕ್ಷರ ದಾಸೋಹ ಯೋಜನೆ ಕಿರಿಯ ಸಹಾಯಕ ತಿಮ್ಮಯ್ಯ ಅವರ ಮರಳೂರು ದಿಣ್ಣೆಯಲ್ಲಿರುವ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ಕಲಬುರಗಿ : ಕಲಬುರಗಿಯಲ್ಲಿ ಲೋಕಾಯುಕ್ತ ಎಸ್ಪಿ ಎಂ.ಬಿ.ಪಾಟೀಲ್ ಅವರ ನೇತೃತ್ವದಲ್ಲಿ ಕೆಐಎಬಿಡಿ ಉಪಅಭಿವೃದ್ಧಿ ಅಧಿಕಾರಿ ಕಾಶಿನಾಥ್ ಬೀದರ್‌ಕರ್ ಅವರ ನಿವಾಸದ ಮೇಲೆ ದಾಳಿ ನಡೆಸಿದೆ.

English summary
The Lokayukta police on Tuesday raided in Mandya and Shivamogga and other districts. Document verification going on.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X