ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಾದಾಯಿ ತೀರ್ಪು : ಅವರಿವರು ಕಂಡಂತೆ

|
Google Oneindia Kannada News

ಬೆಂಗಳೂರು, ಜುಲೈ 28 : ಕುಡಿಯುವ ನೀರು ಪೂರೈಕೆ ಮಾಡಲು 7.56 ಟಿಎಂಸಿ ನೀರನ್ನು ಬಳಕೆ ಮಾಡಿಕೊಳ್ಳಲು ಅನುಮತಿ ನೀಡಬೇಕು ಎಂದು ಕರ್ನಾಟಕ ಸಲ್ಲಿಸಿದ್ದ ಅರ್ಜಿಯನ್ನು ಮಹದಾಯಿ ನ್ಯಾಯಮಂಡಳಿ ಬುಧವಾರ ತಿರಸ್ಕರಿಸಿದೆ. ನ್ಯಾಯಮಂಡಳಿ ಆದೇಶದ ಬಳಿಕ ಉತ್ತರ ಕರ್ನಾಟಕ ಭಾಗದಲ್ಲಿ ರೈತರ ಆಕ್ರೋಶ ಮುಗಿಲು ಮುಟ್ಟಿದೆ.

'ಮಹದಾಯಿ ನ್ಯಾಯಮಂಡಳಿ ನೀಡಿರುವುದು ಮಧ್ಯಂತರ ತೀರ್ಪು, ಇದು ಅಂತಿಮ ತೀರ್ಪಲ್ಲ. 'ಮಹದಾಯಿ ನ್ಯಾಯಮಂಡಳಿ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗುತ್ತದೆ. ಮುಂದಿನ ನಡೆ ಕುರಿತು ಚರ್ಚಿಸಲು ಮುಂದಿನ ವಾರ ಸರ್ವ ಪಕ್ಷ ಸಭೆ ಕರೆಯಲಾಗುವುದು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.[ಇದು ಮಧ್ಯಂತರ ತೀರ್ಪು ಮಾತ್ರ ಎಂದ ಮುಖ್ಯಮಂತ್ರಿ]

ನ್ಯಾಯಮಂಡಳಿ ಆದೇಶದ ವಿರುದ್ಧ ಹುಬ್ಬಳ್ಳಿ, ಬೆಳಗಾವಿ, ಧಾರವಾಡ, ಗದಗ ಮುಂತಾದ ಜಿಲ್ಲೆಗಳಲ್ಲಿ ಹೋರಾಟ ತೀವ್ರಗೊಂಡಿದೆ. ರೈತ ಮತ್ತು ಕನ್ನಡ ಪರ ಸಂಘಟನೆಗಳು ಜುಲೈ 30ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಉತ್ತರ ಕರ್ನಾಟಕ ಭಾಗದಲ್ಲಿ ಗುರುವಾರ ಬಂದ್‌ ನಡೆಸಲಾಗುತ್ತಿದೆ.[ಕಳಸಾ ಬಂಡೂರಿಗಾಗಿ ಮತ್ತೆ ಕರ್ನಾಟಕ ಸ್ತಬ್ಧ]

ಮಹದಾಯಿ ನ್ಯಾಯಮಂಡಳಿಯ ಮಧ್ಯಂತರ ತೀರ್ಪಿನ ಬಗ್ಗೆ ಹಲವು ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ. ತೀರ್ಪಿನಿಂದಾಗಿ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಹೇಳಿರುವ ನಾಯಕರು, ಸರ್ಕಾರ ಕಾನೂನು ಹೋರಾಟ ಮುಂದುವರೆಸಬೇಕು ಎಂದು ಆಗ್ರಹಿಸಿದ್ದಾರೆ. ತೀರ್ಪಿನ ಬಗ್ಗೆ ಯಾರು, ಏನು ಹೇಳಿದರು?....

'ಸರ್ವಪಕ್ಷಗಳ ಸಭೆ ಕರೆಯುವೆ'

'ಸರ್ವಪಕ್ಷಗಳ ಸಭೆ ಕರೆಯುವೆ'

'ನಾವು ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ನ್ಯಾಯಮಂಡಳಿ ತಿರಸ್ಕರಿಸಿದೆ. ಮುಂದಿನ ಕ್ರಮದ ಬಗ್ಗೆ ಚರ್ಚಿಸಲು ಸರ್ವಪಕ್ಷಗಳ ಸಭೆಯನ್ನು ಮುಂದಿನ ವಾರ ಕರೆಯುತ್ತೇನೆ. ಅಗತ್ಯವಿದ್ದರೆ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗುತ್ತದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

'ಎಲ್ಲಾ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವೆವು'

'ಎಲ್ಲಾ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವೆವು'

'ಮಹದಾಯಿ ನ್ಯಾಯಮಂಡಳಿ ನೀಡಿರುವ ತೀರ್ಪಿನ ಬಗ್ಗೆ ವಕೀಲರಾದ ಪಾಲಿ ನಾರಿಮನ್ ಅವರ ಅಭಿಪ್ರಾಯವನ್ನು ಪಡೆದು ಮುಂದಿನ ನಿರ್ಧಾರವನ್ನು ಕೈಗೊಳ್ಳುತ್ತೇವೆ. ಈ ವಿಷಯದಲ್ಲಿ ಎಲ್ಲಾ ರಾಜಕೀಯ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದಿನ ಹೆಜ್ಜೆ ಇಡಲಾಗುತ್ತದೆ' ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

'ರಾಜ್ಯಕ್ಕೆ ಹಿನ್ನಡೆಯಾಗಿದೆ'

'ರಾಜ್ಯಕ್ಕೆ ಹಿನ್ನಡೆಯಾಗಿದೆ'

'ಮಹದಾಯಿ ನ್ಯಾಯಾಧೀಕರಣದ ತೀರ್ಪಿನಿಂದಾಗಿ ಕರ್ನಾಟಕಕ್ಕೆ ಹಿನ್ನಡೆಯಾಗಿದೆ. ಮಹಾರಾಷ್ಟ್ರ ಮತ್ತು ಗೋವಾದ ಸಿಎಂಗಳನ್ನು ಒಪ್ಪಿಸುವುದಾಗಿ ಬಿಜೆಪಿ, ಪ್ರತಿಪಕ್ಷ ನಾಯಕರನ್ನು ಒಪ್ಪಿಸುವುದಾಗಿ ಕಾಂಗ್ರೆಸ್ ಹೇಳಿತ್ತು. ಆದರೆ, ಅದು ಆಗಿಲ್ಲ. ಕಾನೂನು ಕೈಗೆತ್ತಿಕೊಂಡು ಹೋರಾಟ ಮಾಡಿದರೆ ಪ್ರಯೋಜನವಿಲ್ಲ. ನಮ್ಮ ಕಾನೂನು ಸಲಹೆಗಾರರು ಸರಿಯಾದ ಸಲಹೆ ನೀಡುವಲ್ಲಿ ಎಡವಿದ್ದಾರೆ ಎನಿಸುತ್ತಿದೆ' ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಪ್ರತಿಕ್ರಿಯೆ ಕೊಟ್ಟಿದದಾರೆ.

'ತೀರ್ಪಿನಿಂದಾಗಿ ಆಘಾತವಾಗಿದೆ'

'ತೀರ್ಪಿನಿಂದಾಗಿ ಆಘಾತವಾಗಿದೆ'

'ನ್ಯಾಯಾಧೀಕರಣದ ತೀರ್ಪಿನಿಂದಾಗಿ ಆಘಾತವಾಗಿದೆ. ನಾನು ಗೋವಾ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸುತ್ತೇವೆ. ನೆಲ, ಜಲ, ಭಾಷೆಯ ವಿಚಾರದಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಒಟ್ಟಾಗಿರುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಭೇಟಿ ಮಾಡಿ ಈ ವಿಚಾರದ ಕುರಿತು ಮಾತುಕತೆ ನಡೆಸುತ್ತೇವೆ' ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

'ನಿರಾಶಾದಾಯಕ ಆದೇಶ'

'ನಿರಾಶಾದಾಯಕ ಆದೇಶ'

'ಮಹದಾಯಿ ನ್ಯಾಯಮಂಡಳಿಯ ಆದೇಶ ನಿರಾಶಾದಾಯಕವಾಗಿದೆ. ಈ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಒತ್ತಾಯಿಸುತ್ತೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು, ತಜ್ಞರ ಜೊತೆ ಸಮಾಲೋಚನೆ ನಡೆಸಿ, ಮುಂದಿನ ಕ್ರಮ ಕೈಗೊಳ್ಳಬೇಕು' ಎಂದು ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಒತ್ತಾಯಿಸಿದ್ದಾರೆ.

'ಮೇಲ್ಮನವಿ ಸಲ್ಲಿಸಬೇಕು'

'ಮೇಲ್ಮನವಿ ಸಲ್ಲಿಸಬೇಕು'

'ಮಹದಾಯಿ ನ್ಯಾಯಮಂಡಳಿಯ ಮಧ್ಯಂತರ ತೀರ್ಪಿನ ಕುರಿತು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಬೇಕು. ಪ್ರಧಾನಿ ನರೇಂದ್ರ ಮೋದಿ ಅವರು ಕೂಡಲೇ ಮಧ್ಯಪ್ರವೇಶಿಸಿ ಗೋವಾ ಮುಖ್ಯಮಂತ್ರಿಗಳ ಮನವೊಲಿಸಬೇಕು. ಹಿಂದೆ ಅಂತರರಾಜ್ಯ ಜಲವಿವಾದಗಳು ಎದ್ದಾಗ ಇಂದಿರಾಗಾಂಧಿ ಅವರು ಮಧ್ಯಪ್ರವೇಶ ಮಾಡಿ ವಿವಾದ ಬಗೆಹರಿಸಿದ್ದರು' ಎಂದು ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

'ಜುಲೈ 30ರಂದು ಕರ್ನಾಟಕ ಬಂದ್'

'ಜುಲೈ 30ರಂದು ಕರ್ನಾಟಕ ಬಂದ್'

'ಮಹದಾಯಿ ನ್ಯಾಯಾಧೀಕರಣದ ತೀರ್ಪಿನ ವಿರುದ್ಧ ಗುರುವಾರದಿಂದಲೇ ಹೋರಾಟ ಆರಂಭಿಸಲಾಗುತ್ತದೆ. ಜುಲೈ 30ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಅಂದು ಗೋವಾ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿಗಳ ಪ್ರತಿಕೃತಿ ದಹಿಸಲಾಗುತ್ತದೆ' ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದ್ದಾರೆ.

'ರಾಜ್ಯದ ಪರ ತೀರ್ಪು ಬರುವ ವಿಶ್ವಾಸವಿತ್ತು'

'ರಾಜ್ಯದ ಪರ ತೀರ್ಪು ಬರುವ ವಿಶ್ವಾಸವಿತ್ತು'

'ನ್ಯಾಯಾಧೀಕರಣದಲ್ಲಿ ರಾಜ್ಯದ ಪರವಾಗಿ ತೀರ್ಪು ಬರುವ ವಿಶ್ವಾಸವಿತ್ತು. ಈಗ ನಿರಾಸೆಯಾಗಿದೆ. ಮೇಲ್ಮನವಿ ಸಲ್ಲಿಸಲು ಅವಕಾಶವಿದೆಯೇ ಎಂದು ನೋಡಿಕೊಂಡು, ಪಾಲಿ ನಾರಿಮನ್ ಅವರ ಜೊತೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಬೇಕು. ಸರ್ವಪಕ್ಷ ಸಭೆಯಲ್ಲಿ ಮುಖ್ಯಮಂತ್ರಿಗಳಿಗಳಿಗೆ ಅಗತ್ಯ ಸಹಕಾರ ನೀಡುತ್ತೇವೆ' ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

English summary
Mahadayi Tribunal rejected Karnataka government interim petition that sought diversion of 7.56 TMC of water from Mahadayi basin. Who said, What about interim order.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X