ಜುಲೈ 27ರಂದು ಮಹಾದಾಯಿ ನ್ಯಾಯಾಧೀಕರಣದ ತೀರ್ಪು

By: ಒನ್ ಇಂಡಿಯಾ ಪ್ರತಿನಿಧಿ
Subscribe to Oneindia Kannada

ಬೆಂಗಳೂರು, ಜುಲೈ 25 : ಮಹಾದಾಯಿ ನ್ಯಾಯಮಂಡಳಿ 7 ಟಿಎಂಸಿ ನೀರು ಹಂಚಿಕೆ ವಿವಾದದ ಕುರಿತ ವಿಚಾರಣೆ ಪೂರ್ಣಗೊಳಿಸಿದ್ದು, ತೀರ್ಪನ್ನು ಜುಲೈ 27ಕ್ಕೆ ಕಾಯ್ದಿರಿಸಿದೆ. ಏಳು ಟಿಎಂಸಿ ನೀರು ಬಳಕೆಗೆ ಅವಕಾಶ ನೀಡುವಂತೆ ಕರ್ನಾಟಕ ಸರ್ಕಾರ ಮಹಾದಾಯಿ ನ್ಯಾಯಮಂಡಳಿ ಮುಂದೆ ಅರ್ಜಿ ಸಲ್ಲಿಸಿದೆ.

ಸೋಮವಾರ ನ್ಯಾಯಾಧೀಶರಾದ ಜೆ.ಎಂ.ಪಾಂಚಾಳ ಅವರ ನೇತೃತ್ವದ ಪೀಠದಲ್ಲಿ ಈ ಅರ್ಜಿಯ ವಿಚಾರಣೆ ನಡೆಯಿತು. ಕರ್ನಾಟಕ ಸರ್ಕಾರ ರಾಜ್ಯದಲ್ಲಿನ ಬರಗಾಲ, ನೀರಿನ ಬಳಕೆಯ ಯೋಜನೆ ಕುರಿತು ವಾದ ಮಂಡನೆ ಮಾಡಿತು.[ಏನಿದು ಕಳಸಾ-ಬಂಡೂರಿ ಯೋಜನೆ]

kalasa banduri

ಕಳಸಾ-ಬಂಡೂರಿ ನಾಲೆಯಿಂದ ಮಲಪ್ರಭಾ ಜಲಾಶಯಕ್ಕೆ 7 ಟಿಎಂಸಿ ನೀರು ತಿರುಗಿಸಲು ಅನುಮತಿ ನೀಡುವಂತೆ ಕರ್ನಾಟಕ ಸರ್ಕಾರ ಮಹಾದಾಯಿ ನ್ಯಾಯಮಂಡಳಿ ಮುಂದೆ ಅರ್ಜಿ ಸಲ್ಲಿಸಿದೆ. ವಾದ ಮಂಡನೆ ಬಳಿಕ ತೀರ್ಪನ್ನು ಜುಲೈ 27ಕ್ಕೆ ಕಾಯ್ದಿರಿಸಲಾಯಿತು.[ಮಹದಾಯಿ ನ್ಯಾಯಾಧೀಕರಣಕ್ಕೆ ಅರ್ಜಿ ಸಲ್ಲಿಸಿದ ಕರ್ನಾಟಕ]

ಹುಬ್ಬಳ್ಳಿ, ಗದಗ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಕಳಸಾ-ಬಂಡೂರಿ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಒಂದು ವರ್ಷದಿಂದ ಹೋರಾಟ ನಡೆಯುತ್ತಿದೆ. ನ್ಯಾಯಾಧೀಕರಣದ ತೀರ್ಪು ತಮ್ಮ ಪರವಾಗಿ ಬರಲಿದೆ ಅನ್ನುವ ವಿಶ್ವಾದಲ್ಲಿದ್ದಾರೆ ರೈತರು.[ನ್ಯಾಯಾಧೀಕರಣದತ್ತ ಹರಿದ ಮಹದಾಯಿ ವಿವಾದ]

ನ್ಯಾಯಾಧೀಕರಣದ ಮೊರೆ : 7.56 ಟಿಎಂಸಿ ನೀರನ್ನು ಮಲಪ್ರಭೆಗೆ ತಿರುಗಿಸಿಕೊಂಡು ಹುಬ್ಬಳ್ಳಿ-ಧಾರವಾಡ, ಗದಗ ಮುಂತಾದ ಜಿಲ್ಲೆಗಳ ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಕಳಸಾ-ಬಂಡೂರಿ ಯೋಜನೆಗೆ ಗೋವಾ ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿದೆ. ಆದ್ದರಿಂದ, ಸರ್ಕಾರ ನ್ಯಾಯಾಧೀಕರಣದ ಮೊರೆ ಹೋಗಿದೆ.

English summary
Mahadayi Water Disputes Tribunal on Monday reserved its order on Mahadayi river water dispute. Karnataka government filed an interim application before the tribunal seeking permission to utilize 7 TMC feet of water for drinking water purposes.
Please Wait while comments are loading...