ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಳಸಾ ಬಂಡೂರಿ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಕೊಡಗಳ ಸದ್ದು

By ಹುಬ್ಬಳ್ಳಿ ಪ್ರತಿನಿಧಿ
|
Google Oneindia Kannada News

ಹುಬ್ಬಳ್ಳಿ, ನವೆಂಬರ್, 26 : ಕಾರ್ತಿಕ ಮಾಸದ ಗೌರಿ ಹುಣ್ಣಿಮೆಯ ಅಂಗವಾಗಿ ಹುಬ್ಬಳ್ಳಿ ನಗರದ ಬಮ್ಮಾಪುರ ಓಣಿಯ ಸಿದ್ಧಾರೂಢ ಮಠದಲ್ಲಿ ಸಿದ್ಧಾರೂಢರ ರಥೋತ್ಸವ ಜರುಗಿತು. ಈ ರಥೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದು, ದೈವದ ಕೃಪೆಗೆ ಪಾತ್ರರಾದರು. ಆ ಸಂದರ್ಭದಲ್ಲಿ ನಾನಾ ಮಕ್ಕಳು ಹಾಗೂ ಮಹಿಳೆಯರು ಗೌರಿಗೆ ಸಕ್ಕರೆ ಆರತಿ ಅರ್ಪಿಸಿದರು.

ಹಲವು ತಿಂಗಳಿನಿಂದ ನೆನೆಗುದಿಗೆ ಬಿದ್ದರುವ ಕಳಸಾ-ಬಂಡೂರಿ ಯೋಜನೆಗೆ ಆಗ್ರಹಿಸಿ ಕಳಸಾ ಬಂಡೂರಿ ಹೋರಾಟ ಸಮನ್ವಯ ಸಮಿತಿ ಮತ್ತು ಕರ್ನಾಟಕ ಸಂಗ್ರಾಮ ಸೇನೆಯ ಕಾರ್ಯಕರ್ತರು ನಗರದಲ್ಲಿ ಖಾಲಿ ಕೊಡಗಳ ಪ್ರದರ್ಶನ ನಡೆಸಿದರು. ಪ್ರತಿಭಟನೆಯಲ್ಲಿ ಹಲವಾರು ಮಂದಿ ಪಾಲ್ಗೊಂಡು ತಮ್ಮ ಅಳಲನ್ನು ತೋಡಿಕೊಂಡರು. [ಏನಿದು ಕಳಸಾ-ಬಂಡೂರಿ ಯೋಜನೆ?]

Many public programmes held on Wednesday at Hubballi

ಡಾ.ಪಾಟೀಲ ಪುಟ್ಟಪ್ಪ ಅವರ ಆರೋಗ್ಯ ವಿಚಾರಿಸಿದ ರಾಣಿ ಸತೀಶ್

ಮಾಜಿ ಸಚಿವೆ ಹಾಗೂ ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷೆ ರಾಣಿ ಸತೀಶ್ ಅವರು ನಾಡೋಜ ಡಾ.ಪಾಟೀಲ ಪುಟ್ಟಪ್ಪ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಬಾಲವಿಕಾಸ ಅಕಾಡೆಮಿಯ ದ್ರಾಕ್ಷಾಯಿಣಿ ಬಸವರಾಜ ಮತ್ತಿತರರು ಉಪಸ್ಥಿತರಿದ್ದರು.

ಮಹಿಳೆಯರ ಮೇಲಿನ ದೌರ್ಜನ್ಯ ತಡೆ ಜಾಥಾ

ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ನೈರುತ್ಯ ರೈಲ್ವೆ ಮಜ್ದೂರ್ ಯೂನಿಯನ್ ಸಂಸ್ಥೆಯು ಮಹಿಳೆಯರ ಮೇಲಿನ ದೌರ್ಜನ್ಯ ತಡೆ ದಿನ ಆಚರಿಸಿದ್ದು, ನಗರಾದ್ಯಂತ ಜಾಥಾ ಹಮ್ಮಿಕೊಂಡಿತ್ತು. ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ಡಾ.ಎ.ಎಂ.ಡಿಕ್ರೂಜ್ ನೇತೃತ್ವ ವಹಿಸಿದ್ದು, ಮಹಿಳೆಯರ ಮೇಲಿನ ದೌರ್ಜನ್ಯ ತಡೆ ಜಾಥಾಕ್ಕೆ ಕೈಜೋಡಿಸಿದರು.[ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನ ಬಂಧನ]

Many public programmes held on Wednesday at Hubballi

ಮೇದಾರ ಕೇತೇಶ್ವರ ಜಯಂತ್ಯುತ್ಸವ

ಹಳೇ ಹುಬ್ಬಳ್ಳಿಯ ಮೇದಾರ ಓಣಿಯಲ್ಲಿ ಮೇದಾರ ಕೇತೇಶ್ವರ ಜಯಂತ್ಯುತ್ಸವ ಜರುಗಿತು. ಈ ಸಂದರ್ಭದಲ್ಲಿ ಕೇತೇಶ್ವರ ಭಾವಚಿತ್ರ ಮೆರವಣಿಗೆ ಹಮ್ಮಿಕೊಂಡಿದ್ದು, ಸಾಕಷ್ಟು ಮಂದಿ ನೆರೆದಿದ್ದರು.

English summary
Many public programmes held at Hubbali on Wednesday, November 25th. South Western Railway Mazdoor Union Hubballi organized International day of Elimination of Violence and harrasment against women.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X