ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವೈದ್ಯಕೀಯ ಸೀಟುಗಳ ಪಟ್ಟಿ ವೆಬ್‌ಸೈಟ್‌ನಲ್ಲಿ ಪ್ರಕಟ

|
Google Oneindia Kannada News

ಬೆಂಗಳೂರು, ಜೂನ್ 25 : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೈದ್ಯಕೀಯ ಕಾಲೇಜುಗಳ ಸೀಟು ಲಭ್ಯತಾ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. 2,491 ಸೀಟುಗಳನ್ನು ಪ್ರಕಟಿಸಲಾಗಿದ್ದು, ಜೂನ್ 27ರ ತನಕ ಆಯ್ಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

18 ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು 10 ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಲಭ್ಯವಿರುವ ಸೀಟುಗಳ ವಿವರಗಳನ್ನು http:// kea.kar.nic.in ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಸೀಟುಗಳನ್ನು ಆನ್‌ಲೈನ್‌ ಮೂಲಕ ಆಯ್ಕೆ ಮಾಡಿಕೊಳ್ಳಲು ಜೂನ್ 27ರ ಬೆಳಗ್ಗೆ 11ರವರೆಗೆ ಸಮಯ ನೀಡಲಾಗಿದೆ. [ವೈದ್ಯಕೀಯ ಮತ್ತು ದಂತ ವೈದ್ಯಕೀಯ ಶುಲ್ಕ ಹೆಚ್ಚಳ]

kea

ಅಲ್ಪಸಂಖ್ಯಾತ ವೈದ್ಯಕೀಯ ಕಾಲೇಜುಗಳು ಮತ್ತು ಡೀಮ್ಡ್‌ ವಿಶ್ವವಿದ್ಯಾಲಯಗಳಲ್ಲಿ ಲಭ್ಯ ಇರುವ ವೈದ್ಯಕೀಯ ಸೀಟುಗಳ ಹಂಚಿಕೆ ಮತ್ತು ಶುಲ್ಕ ನಿಗದಿಗೆ ಸಂಬಂಧಿಸಿದಂತೆ ಇನ್ನೂ ಚರ್ಚೆ ನಡೆಯುತ್ತಿದೆ. ಆದ್ದರಿಂದ, ಈ ಕಾಲೇಜುಗಳ ಸೀಟು ಲಭ್ಯತೆಯನ್ನು ಪ್ರಕಟಿಸಿಲ್ಲ. [ಇಂಜಿನಿಯರಿಂಗ್ ಪ್ರವೇಶ ಶುಲ್ಕ ಶೇ 10ರಷ್ಟು ಹೆಚ್ಚಳ]

ಸೀಟು ಹಂಚಿಕೆಯ ಕರಡು ಪ್ರತಿಯನ್ನು ಜೂನ್ 28ರ ಮಧ್ಯಾಹ್ನ 2 ಗಂಟೆಗೆ ಪ್ರಕಟಿಸಲಾಗುತ್ತದೆ. ಕೋರ್ಸ್‌ನಲ್ಲಿ ಬದಲಾವಣೆ ಮಾಡಿಕೊಳ್ಳಲು ಜೂನ್ 30ರ ಮಧ್ಯಾಹ್ನ 3 ಗಂಟೆ ವರೆಗೆ ಅವಕಾಶವಿದೆ. ಜುಲೈ 1ರ ರಾತ್ರಿ 8ರ ನಂತರ ಸೀಟು ಹಂಚಿಕೆ ಮಾಡಲಾಗುತ್ತದೆ.

ಶುಲ್ಕ ಪಾವತಿಸಲು ಜುಲೈ 5ರವರೆಗೆ ಅವಕಾಶ ನೀಡಲಾಗಿದೆ. ಜುಲೈ 7ರ ಸಂಜೆ 5.30 ರೊಳಗೆ ಪ್ರವೇಶ ಪಡೆದ ಕಾಲೇಜಿನಲ್ಲಿ ದಾಖಲಾಗಬೇಕಾಗಿದೆ.

English summary
Karnataka Examinations Authority (KEA) has uploaded the seat matrix for medical seats. As many as 2,446 medical seats in 18 government medical colleges and 10 private medical colleges have been added so far.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X