ಮೇಕೆದಾಟು ಕುಡಿಯುವ ನೀರಿನ ಯೋಜನೆ ಡಿಪಿಆರ್ ಸಿದ್ಧ

Posted By:
Subscribe to Oneindia Kannada

ಬೆಂಗಳೂರು, ಸೆಪ್ಟೆಂಬರ್ 16 : ತಮಿಳುನಾಡು ಸರ್ಕಾರದ ವಿರೋಧದ ನಡುವೆಯೂ ಮೇಕೆದಾಟು ಕುಡಿಯುವ ನೀರಿನ ಯೋಜನೆಯ ಸಮಗ್ರ ಯೋಜನಾ ವರದಿ ಸಿದ್ಧವಾಗಿದೆ. ಯೋಜನೆಗೆ ಸುಮಾರು 5 ಸಾವಿರ ಕೋಟಿ ರೂ. ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿದೆ.

ಕರ್ನಾಟಕ ಸರ್ಕಾರ ಮೇಕೆದಾಟು ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಳಿಸಲು ಮುಂದಾಗಿದೆ. ಶೀಘ್ರದಲ್ಲೇ ಯೋಜನಾ ವರದಿ (ಡಿಪಿಆರ್‌) ಅನ್ನು ಸಚಿವ ಸಂಪುಟ ಸಭೆಯ ಮುಂದೆ ಇಟ್ಟು, ಅನುಮೋದನೆ ಪಡೆಯಲಾಗುತ್ತದೆ.[ಕಾನೂನು ಚೌಕಟ್ಟಿನಲ್ಲಿ ಮೇಕೇದಾಟಿನಲ್ಲಿ ಅಣೆಕಟ್ಟು ನಿರ್ಮಾಣ]

mekedatu

ಮಳೆಗಾಲದ ಸಂದರ್ಭದಲ್ಲಿ ಕಾವೇರಿ ನದಿಯಿಂದ ಹೆಚ್ಚು ನೀರು ತಮಿಳುನಾಡಿಗೆ ಹರಿದು ಹೋಗುತ್ತದೆ. ಅಂತಹ ಸಂದರ್ಭದಲ್ಲಿ ನೀರನ್ನು ಸಂಗ್ರಹಿಸಿ, ಮೈಸೂರು, ಬೆಂಗಳೂರು ನಗರಗಳಿಗೆ ಕುಡಿಯುವ ನೀರು ಪೂರೈಸುವ ಯೋಜನೆ ಇದಾಗಿದೆ.[ಮೇಕೆದಾಟು ಯೋಜನೆ ವಿವಾದವೇನು?]

ಆದರೆ, ತಮಿಳುನಾಡು ಈ ಯೋಜನೆಗೆ ಭಾರೀ ವಿರೋಧ ವ್ಯಕ್ತಪಡಿಸಿದೆ. ಈ ಯೋಜನೆಗೆ ಅನುಮತಿ ನೀಡಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೂ ಪತ್ರ ಬರೆಯಲಾಗಿದೆ. ಕರ್ನಾಟಕ ಸರ್ಕಾರ ಯೋಜನೆಯಿಂದ ತಮಿಳುನಾಡಿಗೆ ನೀರಿನ ಕೊರತೆ ಉಂಟಾಗುವುದಿಲ್ಲ ಎಂದು ಸ್ಪಷ್ಟನೆ ನೀಡಿದೆ.[ಮೇಕೆದಾಟು ವಿವಾದ : ಕಾನೂನು ಸ್ಥಿತಿ-ಗತಿ ಏನು?]

5 ಸಾವಿರ ಕೋಟಿ ವೆಚ್ಚ : ಮೇಕೆದಾಟು ಯೋಜನೆಯ ಸಮಗ್ರ ಯೋಜನಾ ವರದಿ ಪ್ರಕಾರ ಎರಡು ಕಡೆ ಸಮಾನಾಂತರ ಜಲಾಶಯ ನಿರ್ಮಾಣ ಮಾಡಲಾಗುತ್ತದೆ. ಸುಮಾರು 60 ಟಿಎಂಸಿ ನೀರು ಸಂಗ್ರಹವಾಗಲಿದೆ. ಕುಡಿಯುವ ನೀರಿನ ಪೂರೈಕೆ ಜೊತೆ ವಿದ್ಯುತ್ ಉತ್ಪಾದನೆಗೂ ಆದ್ಯತೆ ನೀಡಲಾಗುತ್ತದೆ. ಈ ಯೋಜನೆಗೆ ಸುಮಾರು 5 ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ.

English summary
Karnataka Government has prepared the detailed project report (DPR) of Mekedatu drinking water project. Proposed project to be built across Cauvery river.
Please Wait while comments are loading...