ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕ್ಯಾತೆ ತೆಗೆದ ಗೋವಾ ಸಿಎಂ, ಮಹಾದಾಯಿ ಸಭೆ ಮುಂದೂಡಿಕೆ!

ಅಕ್ಟೋಬರ್ 21ರಂದು ಮುಂಬೈನಲ್ಲಿ ಮಹಾದಾಯಿ ಸಭೆಯಲ್ಲಿ ಭಾಗವಹಿಸಲು ಗೋವಾ ಸಿಎಂ ಲಕ್ಷ್ಮೀಕಾಂತ್ ಪರ್ಸೇಕರ್ ಅವರು ಹೊಸ ಕ್ಯಾತೆ ತೆಗೆದಿದ್ದಾರೆ.ಇನ್ನು 15 ದಿನ ಸಭೆಯನ್ನು ಮುಂದೂಡಿ ಎಂದು ಹೇಳಿದ್ದಾರೆ.ಇದಿರಂದ ಸಭೆಯನ್ನು ಮುಂದೂಡಲಾಗಿದೆ.

By Ramesh
|
Google Oneindia Kannada News

ಬೆಂಗಳೂರು, ಅಕ್ಟೋಬರ್. 20 : ಮಹಾದಾಯಿ ವಿವಾದದ ಬಗ್ಗೆ ಚರ್ಚಿಸಲು ಅಕ್ಟೋಬರ್ 21 ರಂದುನಡೆಯಬೇಕಿದ್ದ ಮೂರು ರಾಜ್ಯಗಳ ಮುಖ್ಯಮಂತ್ರಿ ಸಭೆಯನ್ನು ಮುಂದೂಡಲಾಗಿದೆ.

ಗೋವಾ ಮುಖ್ಯಮಂತ್ರಿ ಲಕ್ಷ್ಮೀಕಾಂತ್ ಪರ್ಸೇಕರ್ ಅವರು ಸಭೆಯಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲವೆಂದು ಗೋವಾ ಸಿಎಂ ಕಚೇರಿ ಮೂಲಗಳು ತಿಳಿಸಿವೆ. ಇದರಿಂದ ಸಭೆಯನ್ನು ಮುಂದೂಡಲಾಗಿದೆ. 15 ದಿನಗಳ ಬಳಿಕ ಸಭೆಯ ನೂತನ ದಿನಾಂಕ ನಿಗದಿಯಾಗಲಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೇತೃತ್ವದಲ್ಲಿ ಅ.21ರಂದು ಸಭೆ ನಡೆಯಬೇಕಿತ್ತು. [ಮಹದಾಯಿ ಬಿಕ್ಕಟ್ಟು : ಮಹಾ ಸಿಎಂ ಫಡ್ನವಿಸ್ ಮಧ್ಯಸ್ಥಿಕೆ!]

Mahadayi

ಗೋವಾ ಮುಖ್ಯಮಂತ್ರಿ ಲಕ್ಷ್ಮೀಕಾಂತ್ ಪರ್ಸೇಕರ್ ಅವರು ಇನ್ನು 15 ದಿನಗಳ ವರೆಗೆ ಮಾಹಾದಾಯಿ ಸಭೆಯಲ್ಲಿ ಪಾಲ್ಗೊಳ್ಳಲು ಆಗುವುದಿಲ್ಲ. ಆದ್ದರಿಂದ 15 ದಿನಗಳ ನಂತರ ಮಾಹಾದಾಯಿ ಸಭೆಯನ್ನು ನಿಗಧಿ ಮಾಡಿ ಎಂದು ಗೋವಾ ಸಿಎಂ ಕಚೇರಿ ಮೂಲಗಳು ತಿಳಿಸಿವೆ.

ಮಹಾದಾಯಿ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಿ ಎಂದು ಮಹಾದಾಯಿ ನ್ಯಾಯಾಧೀಕರಣ ಮೂರು ರಾಜ್ಯಗಳಿಗೆ ಸಲಹೆ ನೀಡಿದೆ. ಈ ಕುರಿತು ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು.

ನರೇಂದ್ರ ಮೋದಿ ಸೂಚನೆಯಂತೆ ದೇವೇಂದ್ರ ಫಡ್ನವೀಸ್ ಮುಂಬೈನಲ್ಲಿ ಅಕ್ಟೋಬರ್ 21 ರಂದು ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಆಯೋಜಿಸಿದ್ದರು.

ಸಭೆಯಲ್ಲಿ ಕರ್ನಾಟಕದ ನಿಲುವು ಏನಾಗಿರಬೇಕು ಎಂಬುದನ್ನು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗಷ್ಟೇ ವಿಧಾನಸೌಧದಲ್ಲಿ ಸರ್ವಪಕ್ಷಗಳ ಸಭೆ ಕರೆದು ಚರ್ಚೆ ನಡೆಸಿದ್ದರು.

English summary
The meeting to resolve the long-pending Mahadayi river dispute that was to be chaired by Maharashtra Chief Minister Devendra Fadnavis on Friday has been postponed.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X