ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

#BanTippuJayanthi ಟ್ವಿಟ್ಟರ್ ನಲ್ಲಿ ಫುಲ್ ಟ್ರೆಂಡಿಂಗ್

ಹಲವು ವಿರೋಧಗಳ ನಡುವೆಯೂ ಟಿಪ್ಪು ಜಯಂತಿ ಆಚರಿಸಲು ಮುಂದಾಗಿರುವ ಸರಕಾರದ ಕ್ರಮಕ್ಕೆ ಟ್ವೀಟಿಗರು ತೀವ್ರ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ.

|
Google Oneindia Kannada News

ಹಲವು ವಿರೋಧಗಳ ನಡುವೆಯೂ ಟಿಪ್ಪು ಜಯಂತಿ ಆಚರಿಸಲು ಮುಂದಾಗಿರುವ ಸರಕಾರದ ಕ್ರಮಕ್ಕೆ ಟ್ವೀಟಿಗರು ತೀವ್ರ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ.

#BanTippuJayanthi ಹ್ಯಾಷ್ ಟ್ಯಾಗ್ ರಾಷ್ಟ್ರೀಯ ಮತ್ತು ಬೆಂಗಳೂರಿನಲ್ಲಿ ಟ್ರೆಂಡಿಂಗ್ ನಲ್ಲಿದೆ. ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲೂ "ಟಿಪ್ಪು ಜಯಂತಿ ಆಚರಣೆ ಬೇಡ' ಎನ್ನುವ ಖಾತೆಯ ಮೂಲಕ ವಿರೋಧ ವ್ಯಕ್ತವಾಗುತ್ತಿದೆ.

ಈ ನಡುವೆ ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ (ನ 10) ಆಯೋಜಿಸಲಾಗಿದ್ದ ಟಿಪ್ಪು ಜಯಂತಿ ಆಚರಣೆಯನ್ನು ರವೀಂದ್ರ ಕಲಾಕ್ಷೇತ್ರದ ಬದಲು ವಿಧಾನಸೌಧದ ಬಾಂಕ್ವೆಟ್ ಹಾಲ್ ನಲ್ಲಿ ನಡೆಸಲು ನಿರ್ಧರಿಸಲಾಗಿದೆ.(ಟಿಪ್ಪು ಜಯಂತಿ, ಸರಕಾರದ ಮುಖ್ಯ ಕಾರ್ಯದರ್ಶಿ ನಿರ್ಧರಿಸಲಿ)

ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ನಿಡುಮಾಮಿಡಿ ಮಠದ ವೀರಭದ್ರ ಚನ್ನಮಲ್ಲ ಸ್ವಾಮೀಜಿಯವರು ಸಾನಿಧ್ಯ ವಹಿಸಲಿದ್ದಾರೆ.

ರಾಜ್ಯದೆಲ್ಲಡೆ ಟಿಪ್ಪು ಜಯಂತಿ ಕಾರ್ಯಕ್ರಮ ಆಚರಣೆಯ ಬಗ್ಗೆ ಪರ/ವಿರೋಧ ಚರ್ಚೆ ಮತ್ತು ಹೇಳಿಕೆಗಳು ತೀವ್ರಗೊಂಡಿರುವ ಹಿನ್ನಲೆಯಲ್ಲಿ, ಬೆಂಗಳೂರಿನ ಕಾರ್ಯಕ್ರಮವನ್ನು ಸ್ಥಳಾಂತರಿಸಲಾಗಿದೆ. ಕೆಲವೊಂದು ಟ್ವೀಟ್ ಪ್ರತಿಭಟನೆಗಳು ಹೀಗಿವೆ..

ವಿಎಚ್ಪಿ ಮುಖಂಡ

ವಿಎಚ್ಪಿ ಮುಖಂಡ

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಟಿಪ್ಪು ಜಯಂತಿ ಆಚರಣೆಗೆ ಅವಕಾಶ ಕೊಡುವುದಿಲ್ಲ ಎಂದು ವಿಎಚ್ಪಿ ಜಂಟಿ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಕುಮಾರ್ ಜೈನ್ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ವಿದ್ಯಾವಂತ ಭಾರತೀಯರು

ಈ ಹ್ಯಾಷ್ ಟ್ಯಾಗ್ ಟ್ರೆಂಡಿಂಗ್ ನಲ್ಲಿದೆ. ಇದು ವಿದ್ಯಾವಂತ ಭಾರತೀಯರಿಗೆ ಈ ಜಯಂತಿ ಬೇಕಾಗಿಲ್ಲ ಎನ್ನುವುದನ್ನು ತೋರಿಸುತ್ತದೆ.

ಹಿಂದೂಗಳ ಮಾರಣಹೋಮ

ಟಿಪ್ಪು ಸ್ವಾತಂತ್ರ್ಯ ಹೋರಾಟಗಾರನಲ್ಲ. ಭಾರತೀಯರ ಮಾರಣಹೋಮ ನಡೆಸಿದವನು.

ರಾಜನಾಥ್ ಸಿಂಗ್

ಈ ಟ್ರೆಂಡಿಂಗ್ ಭಾರತೀಯರ ಮೂಡ್ ಅನ್ನು ತೋರಿಸುತ್ತದೆ. ಕೇಂದ್ರ ಗೃಹ ಸಚಿವಾಲಯ ಮಧ್ಯಪ್ರವೇಶಿಸಬೇಕು.

ಕಾಂಗ್ರೆಸ್

ಹಿಂದೂಗಳಿಗೆ ಮತ್ತು ಹಿಂದೂ ದೇವಾಲಯಗಳಿಗೆ ತೊಂದರೆ ಮಾಡಿದ ಈ ವ್ಯಕ್ತಿಯ ಜಯಂತಿಯನ್ನು ಕಾಂಗ್ರೆಸ್ ಆಚರಿಸುತ್ತಿದೆ.

ಸಮಸ್ಯೆಗೆ ಪರಿಹಾರ

ಟಿಪ್ಪು ಜಯಂತಿ ಜೊತೆ ಅಫ್ಜಲ್ ಖಾನ್ ಜಯಂತಿಯನ್ನೂ ಆಚರಿಸಿ, ಸಮಸ್ಯೆಗೆ ಪರಿಹಾರ ಸಿಗುತ್ತದೆ.

English summary
Netizens on Twitter saying Ban on Tippu Jayanthi. #BanTippuJayanthi hashtag top trending in India and Bangalore.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X