ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎರಡು ದಿನದಲ್ಲಿ ನೂತನ ಲೋಕಾಯುಕ್ತರ ಹೆಸರು ಘೋಷಣೆ

By ವಿಕಾಸ್ ನಂಜಪ್ಪ
|
Google Oneindia Kannada News

ಬೆಂಗಳೂರು, ಜನವರಿ 18 : ನೂತನ ಲೋಕಾಯುಕ್ತರ ನೇಮಕದ ಕುರಿತು ಚರ್ಚೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರನ್ನು ಭೇಟಿಯಾಗಲಿದ್ದಾರೆ. ನ್ಯಾಯಮೂರ್ತಿ ಎಸ್.ಆರ್‌.ನಾಯಕ್ ಅವರು ಲೋಕಾಯುಕ್ತರಾಗುವುದು ಬಹುತೇಕ ಖಚಿತವಾಗಿದೆ.

ಎರಡು ದಿನಗಳಲ್ಲಿ ಸಿದ್ದರಾಮಯ್ಯ ಅವರು ರಾಜಭವನಕ್ಕೆ ಭೇಟಿ ನೀಡಲಿದ್ದು, ರಾಜ್ಯಪಾಲ ವಜುಭಾಯಿ ವಾಲಾ ಅವರ ಜೊತೆ ಲೋಕಾಯುಕ್ತ ನೇಮಕದ ಕುರಿತು ಚರ್ಚೆ ನಡೆಸಲಿದ್ದಾರೆ. ಎಸ್.ಆರ್.ನಾಯಕ್ ಅವರನ್ನು ನೇಮಕ ಮಾಡುವ ಪ್ರಸ್ತಾಪವನ್ನು ಸಲ್ಲಿಕೆ ಮಾಡಲಿದ್ದಾರೆ. [ಲೋಕಾಯುಕ್ತ ಹುದ್ದೆ ಬೇಡವೆಂದು ಪತ್ರ ಬರೆದ ವಿಕ್ರಂಜಿತ್ ಸೇನ್]

vajubhai vala

ವೈ.ಭಾಸ್ಕರರಾವ್ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ನ್ಯಾ.ಎಸ್.ಆರ್.ನಾಯಕ್ ಅವರನ್ನು ನೇಮಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಪ್ಪಿಗೆ ನೀಡಿದ್ದು, ಎರಡು ದಿನದಲ್ಲಿ ಈ ಕುರಿತು ಪ್ರಕಟಣೆ ಹೊರಡಿಸುವ ಸಾಧ್ಯತೆ ಇದೆ.[ನ್ಯಾ.ನಾಯಕ್ ವಿರುದ್ಧ ಲೋಕಾಯುಕ್ತಕ್ಕೆ ದೂರು]

ರಾಜ್ಯಪಾಲ ವಜುಭಾಯಿ ವಾಲಾ ಅವರು ನೇಮಕಕ್ಕೆ ಒಪ್ಪಿಗೆ ನೀಡಿದ ಬಳಿಕ ಸಿದ್ದರಾಮಯ್ಯ ಅವರು ಎಸ್.ಆರ್.ನಾಯಕ್ ಅವರ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ. [ಕರ್ನಾಟಕ ಲೋಕಾಯುಕ್ತ ಹಗರಣದ Timeline]

ಕರ್ನಾಟಕ ಲೋಕಾಯುಕ್ತ ಹುದ್ದೆಗೆ ನ್ಯಾ.ಎಸ್.ಆರ್‌.ನಾಯಕ್ ಮತ್ತು ಸುಪ್ರೀಂಕೋರ್ಟ್ ನಿವೃತ್ತ ನ್ಯಾ.ವಿಕ್ರಂಜಿತ್ ಸೇನ್ ಅವರ ಹೆಸರುಗಳು ಕೇಳಿಬರುತ್ತಿದ್ದವು. ಆದರೆ, ವಿಕ್ರಂಜಿತ್ ಸೇನ್ ಅವರು ಲೋಕಾಯುಕ್ತರಾಗಲು ಆಸಕ್ತಿ ಹೊಂದಿಲ್ಲ ಎಂದು ಸರ್ಕಾರಕ್ಕೆ ಪತ್ರ ಬರೆದಿದ್ದರು.

ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರರಾವ್ ಅವರು ಲೋಕಾಯುಕ್ತದಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣ ಬೆಳಕಿಗೆ ಬಂದು, ತಮ್ಮ ಪುತ್ರ ಅಶ್ವಿನ್ ರಾವ್ ಬಂಧನವಾದ ಬಳಿಕ ಸರಣಿ ರಜೆ ಪಡೆದಿದ್ದರು. ಬಳಿಕ 2015ರ ಡಿಸೆಂಬರ್ 7ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

English summary
Karnataka Chief Minister Siddaramaiah is set to meet with the Governor and recommend the name of Justice S.R.Nayak as the new Lokayukta. The post of Lokayukta has been lying vacant since Justice Y.Bhaskar Rao resigned following corruption allegations against his son and other members in the institution.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X