ಸೆ.14ರಂದು ಕರ್ನಾಟಕ ಬಂದ್ ಇಲ್ಲ : ವಾಟಾಳ್ ನಾಗರಾಜ್

Posted By:
Subscribe to Oneindia Kannada

ಬೆಂಗಳೂರು, ಸೆಪ್ಟೆಂಬರ್ 13 : ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸುವಂತೆ ಒತ್ತಾಯಿಸಿ ಸೆ.14ರಂದು ಕರ್ನಾಟಕ ಬಂದ್ ಇರುವುದಿಲ್ಲ. ಬುಧವಾರ ಬಂದ್ ನಡೆಯಲಿದೆ ಎಂಬ ಸುದ್ದಿ ಸೋಮವಾರ ಸಂಜೆಯಿಂದ ಹಬ್ಬಿತ್ತು.

ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗಾರಾಜ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. 'ಸೆ.15ರಂದು ಕನ್ನಡ ಒಕ್ಕೂಟದಿಂದ ರಾಜ್ಯಾದ್ಯಂತ ರೈಲ್ವೆ ಬಂದ್‌ಗೆ ಕರೆ ನೀಡಲಾಗಿದೆ. ಆದರೆ, ಸೆ.14ರಂದು ಯಾವುದೇ ಬಂದ್ ನಡೆಯುವುದಿಲ್ಲ' ಎಂದು ಅವರು ಹೇಳಿದರು.[ಸೆಪ್ಟೆಂಬರ್ 15ರಂದು ರೈಲ್ವೆ ಬಂದ್]

vatal nagaraj

ಬುಧವಾರ ಯಾವುದೇ ಬಂದ್ ಇರುವುದಿಲ್ಲ ಎಂದು ಬೆಂಗಳೂರು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.[ಬೆಂಗಳೂರಿನಲ್ಲಿ ಎಲ್ಲೆಲ್ಲಿ ಗಲಾಟೆ, ಪೊಲೀಸರ ಹೇಳಿಕೆ ಮಾತ್ರ ನಂಬಿ!]

ಸೋಮವಾರ ಸಂಜೆಯಿಂದ ಸೆ.14ರಂದು ಕರ್ನಾಟಕ ಬಂದ್ ನಡೆಸಲಾಗುತ್ತದೆ ಎಂಬ ಸುದ್ದಿ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿದೆ. ಬಂದ್‌ ಹಿನ್ನಲೆಯಲ್ಲಿ ಬಸ್ ಮತ್ತು ಆಟೋ ಸಂಚಾರ ಸ್ಥಗಿತಗೊಳ್ಳುತ್ತದೆ. 800ಕ್ಕೂ ಹೆಚ್ಚು ಸಂಘಟನೆಗಳು ಬಂದ್‍ಗೆ ಬೆಂಬಲ ನೀಡಿವೆ ಎಂಬ ಸುದ್ದಿ ಹಬ್ಬಿತ್ತು.[ನನ್ನ ಬಸ್ ಸುಟ್ಟಿದ್ದರಿಂದ ಕಾವೇರಿ ಸಮಸ್ಯೆ ಬಗೆಹರಿಯುತ್ತಾ? : ಕೆಪಿಎನ್]

ಆದರೆ, ವಾಟಾಳ್ ನಾಗರಾಜ್ ಅವರು ಬುಧವಾರ ಕರ್ನಾಟಕ ಬಂದ್ ನಡೆಯಲಿದೆ ಎಂಬ ಸುದ್ದಿಯನ್ನು ತಳ್ಳಿ ಹಾಕಿದ್ದಾರೆ. ಆದರೆ, ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ನಿಲ್ಲಿಸಬೇಕೆಂದು ಒತ್ತಾಯಿಸಿ ಸೆ.15ರಂದು ರೈಲ್ವೆ ಬಂದ್‌ ಕರೆ ನೀಡಲಾಗಿದೆ.

English summary
Kannada Chaluvali Vatal Paksha president Vatal Nagraj has clarified that he has not called for a bandh on September 14, 2016.
Please Wait while comments are loading...