ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊಪ್ಪಳ: ಅಲೆಮಾರಿ ಗರ್ಭಿಣಿ ಮಹಿಳೆಯರಿಗೆ ಪೌಷ್ಠಿಕ ಆಹಾರ ವಿತರಣೆ

|
Google Oneindia Kannada News

ಕೊಪ್ಪಳ, ಜುಲೈ 20 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಕೊಪ್ಪಳ ತಾಲೂಕು ಗಿಣಿಗೇರಾ ಗ್ರಾಮದ ಬೈಪಾಸ್ ರಸ್ತೆಯಲ್ಲಿ ಟೆಂಟ್ ಗಳಲ್ಲಿ ವಾಸವಿರುವ ಹೊರ ರಾಜ್ಯದ ಅಲೆಮಾರಿ ಜನಾಂಗ ಕುಟುಂಬದ ಗರ್ಭಿಣಿ ಮಹಿಳೆಯರಿಗೆ ಪೂರಕ ಪೌಷ್ಠಿಕ ಆಹಾರದ ಕಿಟ್ ವಿತರಣೆ ಮಾಡಲಾಯಿತು.

ಬೆಳಗ್ಗಿನ ತಿಂಡಿಯನ್ನು ಪೌಷ್ಟಿಕಗೊಳಿಸುವ ಉಪಾಯ ಇಲ್ಲಿದೆ!ಬೆಳಗ್ಗಿನ ತಿಂಡಿಯನ್ನು ಪೌಷ್ಟಿಕಗೊಳಿಸುವ ಉಪಾಯ ಇಲ್ಲಿದೆ!

ಬುಧವಾರದಂದು ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕೊಪ್ಪಳದಿಂದ ಅಲೆಮಾರಿ ಜನಾಂಗ ಗರ್ಭಿಣಿ ತಾಯಂದಿರಿಗೆ ಮತ್ತು ಮಕ್ಕಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಮಂಜುನಾಥ ಅವರು ಪೌಷ್ಠಿಕ ಆಹಾರ ಕಿಟ್ ವಿತರಣೆ ಮಾಡಿದರು.

Nutritious food distributed to nomadic pregnant women's in koppal

ಬಳಿಕ ಮಾತನಾಡಿದ ಅವರು, "ಗಿಣಿಗೇರಾ ಗ್ರಾಮದಲ್ಲಿ ವಾಸವಾಗಿರುವ ಹೊರ ರಾಜ್ಯದಿಂದ ಬಂದಂತಹ ಅಲೆಮಾರಿ ಜನಾಂಗ ಕುಟುಂಬದ ಗರ್ಭಿಣಿ ಮಹಿಳೆಯರಿಗೆ ಮತ್ತು 6 ವರ್ಷದೊಳಗಿನ ಮಕ್ಕಳಿಗೆ ಪೌಷ್ಠಿಕ ಆಹಾರ ವಿತರಣೆ ಮಾಡುವ ಕುರಿತು ಅಲೆಮಾರಿ ಜನಾಂಗದ ಕುಟುಂಬಗಳನ್ನು ಸಮೀಕ್ಷೆ ನಡೆಸಲಾಗಿದ್ದು ಇದರಲ್ಲಿ ಒಟ್ಟು 53 ಕುಟುಂಬಗಳಿವೆ.

ಇದರಲ್ಲಿ ಗರ್ಭಿಣಿಯರು 7 ಜನ ಮತ್ತು ಬಾಣಂತಿಯರು 3 ಜನ, ಇದರಲ್ಲಿ 0-3 ವರ್ಷದೊಳಗಿನ ಮಕ್ಕಳ ಸಂಖ್ಯೆ 21 ಮತ್ತು 03 ರಿಂದ 6 ವರ್ಷದೊಳಗಿನ ಮಕ್ಕಳ ಸಂಖ್ಯೆ 22. ಈ ಎಲ್ಲ ಗರ್ಭಿಣಿಯರು, ಬಾಣಂತಿಯರು ಮತ್ತು ಮಕ್ಕಳು ಪೌಷ್ಠಿಕ ಆಹಾರ ಸೇವಿಸಿ ಸದೃಢವಾಗಿ ಬೆಳೆಯಲು ಪೌಷ್ಠಿಕ ಆಹಾರವನ್ನು ಇಲಾಖೆ ವತಿಯಿಂದ ವಿತರಿಸುತ್ತಿದ್ದು ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರವಿ ಬಡಿಗೇರ ಮಾತನಾಡಿ, ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಪೊಲೀಸ್ ಇಲಾಖೆಯಿಂದ ಅಲೇಮಾರಿ ಜನಾಂಗದ ಮಕ್ಕಳ ಶಿಕ್ಷಣದ ಕುರಿತು ಸ್ಥಳ ಭೇಟಿ ಪರಿಶೀಲನೆ ನಡೆಸಲಾಗಿದೆ.

ಅಂತಹ ಮಕ್ಕಳ ಶಿಕ್ಷಣ ಸಲುವಾಗಿ ಟೆಂಟ್ ಶಾಲೆಯನ್ನು ಪ್ರಾರಂಭಿಸಲು ನಿರ್ಧರಿಸಿ ಶಿಕ್ಷಣ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಶಿಕ್ಷಣ ಇಲಾಖೆಯಿಂದ ಟೆಂಟ್ ಶಾಲೆ ಪ್ರಾರಂಭವಾದ ನಂತರ ಎಲ್ಲ ಮಕ್ಕಳಿಗೆ ಶಿಕ್ಷಣ ನೀಡಲಾಗುವುದು ಎಂದರು.

English summary
Nutritious food distributed to outside State nomadic pregnant women's under woman and child development department in Ginigera, koppal district, on July 19th.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X