ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಂಗಾರಿಗೆ ಅಣಿಯಾದ ಚಿತ್ರದುರ್ಗದ ರೈತರು

ಮುಂಗಾರು ಆರಂಭವಾದ ಹಿನ್ನೆಲೆಯಲ್ಲಿ, ಜಿಲ್ಲೆಯಾದ್ಯಂತ ರೈತರು ಕೃಷಿ ಚಟುವಟಿಕೆಗಳನ್ನು ಆರಂಭಿಸಲು ಸಿದ್ಧತೆ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿ ಕೃಷಿ ಅಧಿಕಾರಿಗಳ ಸಭೆ ಕರೆದು ರೈತರಿಗೆ ನೆರವು ನೀಡುವಂತೆ ಸೂಚಿಸಿದ್ದಾರೆ.

|
Google Oneindia Kannada News

ಚಿತ್ರದುರ್ಗ, ಮೇ 24: ರಾಜ್ಯದೆಲ್ಲೆಡೆ ಮುಂಗಾರು ಆರಂಭಗೊಂಡಿದ್ದು, ನಾನಾ ಭಾಗಗಳಲ್ಲಿ ಕೃಷಿ ಚಟುವಟಿಕೆಗಳು ಆರಂಭಗೊಂಡಿವೆ. ಇತ್ತ ಬಯಲು ನಾಡು ಚಿತ್ರದುರ್ಗದಲ್ಲೂ ಮುಂಗಾರು, ರೈತರಲ್ಲಿ ಹೊಸ ಆಶಾಕಿರಣವನ್ನು ಮೂಡಿಸಿದ್ದು, ತಿಂಗಳುಗಟ್ಟಲೆ ಹೊಲ ದಾರಿ ಮರೆತಿತ್ತ ರೈತರಿಗೆ ಅತ್ತ ಮುಖ ಮಾಡುವ ಮನಸ್ಸು ನೀಡಿದೆ.

ಈ ಹಿನ್ನೆಲೆಯಲ್ಲಿ, ಜಿಲ್ಲೆಯಾದ್ಯಂತ ರೈತರು ಕೃಷಿ ಚಟುವಟಿಕೆಗಳನ್ನು ಆರಂಭಿಸಲು ಸಿದ್ಧತೆ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿ ಪಿ.ಎ. ಮೇಘಣ್ಣವರ ಜಿಲ್ಲಾ ಕೃಷಿ ಅಧಿಕಾರಿಗಳ ಸಭೆ ಕರೆದು ರೈತರಿಗೆ ಅಗತ್ಯ ನೆರವು ನೀಡುವಂತೆ ಸೂಚಿಸಿದ್ದಾರೆ.

On Monsoon backdrop DC of Chitradurga instruct officials to help farmers

ರೈತ ಸಂಪರ್ಕ ಕೇಂದ್ರಗಳಲ್ಲಿ ಬೀಜ ಮಾರಾಟಕ್ಕೆ ಪರವಾನಗಿ ಪಡೆದವರಿಗೆ ಹಾಗೂ ಕೃಷಿ ಪತ್ತಿನ ಸಂಘಗಳಿಗೆ ಚುರುಕಾಗಿ ಕಾರ್ಯ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಇದರ ಜತೆಗೆ, ರೈತರಿಗೆ ಉತ್ತಮ ಗುಣಮಟ್ಟದ ಬೀಜ ಹಾಗೂ ರಸಗೊಬ್ಬರಗಳನ್ನು ಪೂರೈಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

English summary
As monsoon enters Chitradurga region of Karnataka, the district farmers getting ready for the irrigation. The District commissioner has instructed the agriculture department officials to strech helping hand to the farmers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X