ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಸ್ತೆ ಸಾರಿಗೆ ನಿಗಮದ ನೌಕರರ ಮುಷ್ಕರ ಏಕೆ, ಏನು?

|
Google Oneindia Kannada News

ಬೆಂಗಳೂರು, ಜುಲೈ 23 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರು ಜುಲೈ 25ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ. ಶೇ. 35ರಷ್ಟು ವೇತನ ಪರಿಷ್ಕರಣೆ ಸೇರಿದಂತೆ 42 ಬೇಡಿಕೆಗಳನ್ನು ಅವರು ಸರ್ಕಾರದ ಮುಂದಿಟ್ಟಿದ್ದಾರೆ.

ಮುಷ್ಕರಕ್ಕೆ ಮುಂದಾಗಿರುವ ನೌಕರರ ಜೊತೆ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ನಡೆಸಿದ ಸಂಧಾನ ಸಭೆ ಮುರಿದುಬಿದ್ದಿದೆ. ಆದ್ದರಿಂದ, ಜುಲೈ 25ರಿಂದ ಸರ್ಕಾರಿ ಬಸ್ ಸಂಚಾರ ಸ್ಥಗಿತಗೊಳಿಸಿ ಮುಷ್ಕರ ನಡೆಸುವುದು ಖಚಿತವಾಗಿದೆ. [ಸಾರಿಗೆ ನೌಕರರ ಮುಷ್ಕರ, ಸಂಧಾನ ಸಭೆ ವಿಫಲ]

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲಾ ನೌಕರರಿಗೆ ಶೇ 8ರಷ್ಟು ವೇತನ ಹೆಚ್ಚಳ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿತ್ತು. ವೇತನ ಪರಿಷ್ಕರಣೆ ಬಗ್ಗೆ ಸರ್ಕಾರದ ಏಕಪಕ್ಷೀಯ ನಿರ್ಧಾರ ಖಂಡಿಸಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಮುಂದಾಗಿದ್ದಾರೆ.[ಸಾರಿಗೆ ಸಂಸ್ಥೆ ನೌಕರರಿಗೆ ಶೇ 8ರಷ್ಟು ವೇತನ ಹೆಚ್ಚಳ]

ಮುಷ್ಕರದ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಪ್ರತಿಕ್ರಿಯೆ ನೀಡಿದ್ದು, 'ಶೇ 10ರಷ್ಟು ವೇತನ ಹೆಚ್ಚಳ ಮಾಡಲು ಸರ್ಕಾರ ಒಪ್ಪಿಗೆ ನೀಡಿದೆ. ಇದರಿಂದಲೇ ನಿಗಮಗಳಿಗೆ ವರ್ಷಕ್ಕೆ 400 ಕೋಟಿ ಹೆಚ್ಚುವರಿ ಹೊರೆಯಾಗಲಿದೆ. ಶೇ 30ರಷ್ಟು ವೇತನ ಪರಿಷ್ಕರಣೆ ಮಾಡುವುದು ಸಾಧ್ಯವಿಲ್ಲದ ಮಾತು. ನೌಕರರ ಜೊತೆ ಮತ್ತೊಂದು ಸುತ್ತಿನ ಸಭೆ ನಡೆಸಲಾಗುತ್ತದೆ' ಎಂದು ಹೇಳಿದ್ದಾರೆ.

42 ಬೇಡಿಕೆಗ ಮುಂದಿಟ್ಟಿರುವ ನೌಕರರು

42 ಬೇಡಿಕೆಗ ಮುಂದಿಟ್ಟಿರುವ ನೌಕರರು

ಎಐಟಿಯುಸಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಅನಂತ ಸುಬ್ಬರಾವ್ ಅವರು ಮುಷ್ಕರದ ಕುರಿತು ಹೇಳಿಕೆ ನೀಡಿದ್ದು, 'ಶೇ 35ರಷ್ಟು ವೇತನ ಪರಿಷ್ಕರಣೆ ಸೇರಿದಂತೆ 42 ಬೇಡಿಕೆಗಳನ್ನು ಮುಂದಿಟ್ಟಿದ್ದೇವೆ. ಮುಖ್ಯಮಂತ್ರಿಗಳು ಶೇ 10ರಷ್ಟು ವೇತನ ಹೆಚ್ಚಳ ಮಾಡುವುದಾಗಿ ಹೇಳಿದ್ದಾರೆ. ಸರ್ಕಾರ ಬೇಡಿಕೆಗೆ ಸಮರ್ಪಕವಾಗಿ ಸ್ಪಂದಿಸದ ಕಾರಣ ಮುಷ್ಕರ ನಡೆಸಲು ತೀರ್ಮಾನಿಸಲಾಗಿದೆ' ಎಂದು ಹೇಳಿದ್ದಾರೆ.

8 ಸಂಘಟನೆಗಳಿಂದ ಮಷ್ಕರಕ್ಕೆ ಬೆಂಬಲ

8 ಸಂಘಟನೆಗಳಿಂದ ಮಷ್ಕರಕ್ಕೆ ಬೆಂಬಲ

ಜುಲೈ 25ರಿಂದ ಆರಂಭವಾಗುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಎಐಟಿಯುಸಿ, ಅಖಿಲ ಕರ್ನಾಟಕ ಸಾರಿಗೆ ನೌಕರರ ಮಹಾಮಂಡಳ, ಸಿಐಟಿಯು ಸೇರಿದಂತೆ ಆರರಿಂದ ಎಂಟು ಸಂಘಟನೆಗಳು ಬೆಂಬಲ ನೀಡಿವೆ.

ಬಸ್ ಸಂಚಾರ ಸ್ಥಗಿತ

ಬಸ್ ಸಂಚಾರ ಸ್ಥಗಿತ

ಬಿಎಂಟಿಸಿ, ಕೆಎಸ್ಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಎನ್‌ಇಕೆಆರ್‌ಟಿಸಿ ಸೇರಿ ಎಲ್ಲಾ ನಿಗಮಗಳಿಂದ ಒಟ್ಟು 23 ಸಾವಿರ ಬಸ್ಸುಗಳಿದ್ದು, 1.25 ಲಕ್ಷ ಸಿಬ್ಬಂದಿಗಳಿದ್ದಾರೆ. ಮುಷ್ಕರಿಂದಾಗಿ ಬಸ್ ಸಂಚಾರ ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ.

ಶೇ 8ರಷ್ಟು ವೇತನ ಹೆಚ್ಚಳ

ಶೇ 8ರಷ್ಟು ವೇತನ ಹೆಚ್ಚಳ

2016ರ ಜನವರಿ 1ರಿಂದಲೇ ಅನ್ವಯವಾಗುವಂತೆ ಸಾರಿಗೆ ನಿಗಮಗಳ ನೌಕರರಿಗೆ ಶೇ 8ರಷ್ಟು ವೇತನ ಹೆಚ್ಚಳ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಆದರೆ, ಶೇ. 35ರಷ್ಟು ವೇತನ ಪರಿಷ್ಕರಣೆಗೆ ನೌಕರರು ಪಟ್ಟು ಹಿಡಿದಿದ್ದಾರೆ.

ಸಾರಿಗೆ ಸಚಿವರು ಹೇಳುವುದೇನು?

ಸಾರಿಗೆ ಸಚಿವರು ಹೇಳುವುದೇನು?

ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಮುಷ್ಕರದ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, 'ಶೇ 10ರಷ್ಟು ವೇತನ ಹೆಚ್ಚಳ ಮಾಡಲು ಸರ್ಕಾರ ಒಪ್ಪಿಗೆ ನೀಡಿದೆ. ಶೇ 30ರಷ್ಟು ವೇತನ ಪರಿಷ್ಕರಣೆ ಮಾಡುವುದು ಸಾಧ್ಯವಿಲ್ಲದ ಮಾತು. ನೌಕರರ ಜೊತೆ ಮತ್ತೊಂದು ಸುತ್ತಿನ ಸಭೆ ನಡೆಸಲಾಗುತ್ತದೆ' ಎಂದು ಹೇಳಿದ್ದಾರೆ.

English summary
Karnataka State Road Transport Corporation employees to go on strike from July 25, 2016. Chief Minister Siddaramaiah meeting with employee union leaders failed.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X