ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊಪ್ಪಳದ ಹಿಂದುಳಿದ ವರ್ಗಕ್ಕೆ ವಿದೇಶಿ ವ್ಯಾಸಂಗ ವೇತನ

By Prasad
|
Google Oneindia Kannada News

ಕೊಪ್ಪಳ, ಜು. 26 : ಕೊಪ್ಪಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೊತ್ತರ ಪದವಿ/ ಪಿ.ಎಚ್.ಡಿ/ ಸಂಶೋಧನೆ ಮಾಡುವ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳಿಗೆ "ಡಿ. ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನ" ಒದಗಿಸಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಲ್ಪಸಂಖ್ಯಾತ, ಹಿಂದುಳಿದವರಿಗೆ ಭರ್ಜರಿ ಕೊಡುಗೆಅಲ್ಪಸಂಖ್ಯಾತ, ಹಿಂದುಳಿದವರಿಗೆ ಭರ್ಜರಿ ಕೊಡುಗೆ

ಅರ್ಜಿ ಸಲ್ಲಿಸಲು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, ಹಾಗೂ 3ಬಿ ಗಳಿಗೆ ಸೇರಿರಬೇಕು. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನಾಂಕವಾಗಿದ್ದು, ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‍ಸೈಟ್ www.backwardclasses.kar.nic.in ನ್ನು ನೋಡಬಹುದು.

Opportunity for backward class in Koppal to study abroad

ಮಾಹಿತಿಯನ್ನು ಪಡೆಯಲು ದೂರವಾಣಿ ಸಂಖ್ಯೆ 080-65970004ಕ್ಕೆ ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಕೊಪ್ಪಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವೃತ್ತಿಪರ ಕೋರ್ಸಿಗೆ ಮನೆಯಲ್ಲೇ ತರಬೇತಿ ಪಡೆಯಿರಿǃವೃತ್ತಿಪರ ಕೋರ್ಸಿಗೆ ಮನೆಯಲ್ಲೇ ತರಬೇತಿ ಪಡೆಯಿರಿǃ

ಧನಶ್ರೀ ಯೋಜನೆ : ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿಗೆ ಧನಶ್ರೀ ಯೋಜನೆಯಡಿ ಪ್ರೋತ್ಸಾಹಧನಕ್ಕಾಗಿ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಬೆಂಗಳೂರಿನ ವ್ಯವಸ್ಥಾಪಕ ನಿರ್ದೇಶಕರ ಸೂಚನೆಯಂತೆ ಧನಶ್ರೀ ಯೋಜನೆಯಡಿ ಎಚ್.ಐ.ವಿ ಸೋಂಕಿತ ಮತ್ತು ಬಾಧಿತ ಮಹಿಳೆಯರಿಗೆ ತಲಾ ಫಲಾನುಭವಿಗೆ ರೂ. 40,000ಗಳ ನೇರ ಸಾಲ ಹಾಗೂ ರೂ. 10,000ಗಳ ಸಹಾಯಧನ ಸಿಗಲಿದೆ.

English summary
Wonderful opportunity for backward class in Koppal district to study abroad. Under Devaraj Urs scholarship for foreign study scheme eligible backward class students will get financial assistance to study in foreign universities.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X