ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪೆಟ್ರೋಲ್ ಬಂಕ್ ಮಾಲೀಕರ ಮುಷ್ಕರ ವಾಪಸ್

|
Google Oneindia Kannada News

ಬೆಂಗಳೂರು, ಏ. 11 : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶನಿವಾರ ಸಂಜೆಯಿಂದ ಕರೆ ನೀಡಿದ್ದ ಮುಷ್ಕರವನ್ನು ಪೆಟ್ರೋಲ್ ಬಂಕ್ ಮಾಲೀಕರು ವಾಪಸ್ ಪಡೆದಿದ್ದಾರೆ. ಬಂಕ್ ಮಾಲೀಕರ ಬೇಡಿಕೆ ಈಡೇರಿಸುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದ ಹಿನ್ನಲೆಯಲ್ಲಿ ಮುಷ್ಕರ ವಾಪಸ್ ಪಡೆಯಲಾಗಿದೆ.

ಶನಿವಾರ ಸಂಜೆ 6 ಗಂಟೆಯಿಂದ ಭಾನುವಾರ ಬೆಳಗ್ಗೆ 6 ಗಂಟೆಯ ತನಕ ತೈಲ ಮಾರಾಟ ಸ್ಥಗಿತಗೊಳಿಸಿ ಮುಷ್ಕರ ನಡೆಸುವುದಾಗಿ ಪೆಟ್ರೋಲ್ ಬಂಕ್ ಮಾಲೀಕರು ಹೇಳಿದ್ದರು. ದೇಶಾದ್ಯಂತ ಈ ಮುಷ್ಕರಕ್ಕೆ ಬೆಂಬಲ ವ್ಯಕ್ತವಾಗಿತ್ತು. ಕರ್ನಾಟಕದಲ್ಲಿಯೂ ಬೆಂಬಲ ದೊರಕಿತ್ತು.

Petrol

ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂಧ್ರ ಪ್ರಧಾನ್ ಶನಿವಾರ ಇಲಾಖೆಯ ಅಧಿಕಾರಿಗಳು, ತೈಲ ಮಾರಾಟಗಾರರ ಒಕ್ಕೂಟದ ಜೊತೆ ಸಭೆ ನಡೆಸಿ ಅವರ ಬೇಡಿಕೆಗಳನ್ನು ಏ.30ರೊಳಗೆ ಈಡೇಸಿರುವ ಭರವಸೆ ನೀಡಿದ್ದಾರೆ.[ಮಾಲೀಕರ ಮುಷ್ಕರ ಏಕೆ?]

ಕೇಂದ್ರ ಸಚಿವರಿಂದ ಭರವಸೆ ಸಿಕ್ಕಿರುವ ಹಿನ್ನಲೆಯಲ್ಲಿ ಶನಿವಾರ ಸಂಜೆ 6 ಗಂಟೆಯಿಂದ ಭಾನುವಾರ ಬೆಳಗ್ಗೆ 6 ಗಂಟೆಯ ತನಕ ಪೆಟ್ರೋಲ್ ಬಂಕ್ ಬಂದ್ ಮಾಡಿ ನಡೆಸುವ ಮುಷ್ಕರವನ್ನು ವಾಪಸ್ ಪಡೆಯಲಾಗಿದೆ. ಪೆಟ್ರೋಲ್ ಬಂಕ್‌ಗಳು ರಾತ್ರಿಯೂ ಕಾರ್ಯನಿರ್ವಹಿಸಲಿವೆ. [ತೈಲ ಬೆಲೆ ನಿರಂತರ ಇಳಿಕೆಗೆ ನಿಜವಾದ ಕಾರಣವೇನು?]

ಡೀಸೆಲ್ ಮತ್ತು ಪೆಟ್ರೋಲ್ ಮಾರಾಟಗಾರರಿಗೆ ಶೇ.5ರಷ್ಟು ಲಾಭಾಂಶ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಈ ಮುಷ್ಕರ ನಡೆಸಲು ತೀರ್ಮಾನಿಸಲಾಗಿತ್ತು. ತೈಲ ಮಾರಾಟ ಮಾಡುವ ಡೀಲರ್‌ಗಳಿಗೆ ಒಂದು ವರ್ಷದಿಂದ ಲಾಂಭಶ ಹೆಚ್ಚಳ ಮಾಡಿಲ್ಲ ಎಂದು ತೈಲ ಮಾರಾಟಗಾರರು ಆರೋಪಿದ್ದರು.

English summary
After meeting with Petroleum Minister Dharmendra Pradhan on Saturday, petrol pump dealers strike withdrawn. Petrol pump owners decided to go on a strike on Saturday April 11th evening 6 pm to Sunday morning 6 am.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X