ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಯಚೂರಿನಲ್ಲಿ ಐಐಟಿ ಸ್ಥಾಪನೆಗೆ ಆದ್ಯತೆ : ಸಿದ್ದರಾಮಯ್ಯ

|
Google Oneindia Kannada News

ವಿಜಯಪುರ, ಏ.10 : ಐಐಟಿ ಸ್ಥಾಪನೆ ಕುರಿತು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳಿಸುವಾಗ ರಾಯಚೂರು ಜಿಲ್ಲೆಗೆ ಆದ್ಯತೆ ನೀಡುವಂತೆ ಮನವಿ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಜಯಪುರದಲ್ಲಿ ಗುರುವಾರ ಮಾತನಾಡಿದ ಸಿದ್ದರಾಮಯ್ಯ ಅವರು, ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ)ಯನ್ನು ಯಾವ ಜಿಲ್ಲೆಯಲ್ಲಿ ಸ್ಥಾಪಿಸಬೇಕು ಎಂದು ರಾಜ್ಯ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿಲ್ಲ. ಈ ಕುರಿತ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಶೀಘ್ರದಲ್ಲೇ ಸಲ್ಲಿಕೆ ಮಾಡಲಾಗುತ್ತದೆ ಎಂದು ಹೇಳಿದರು. [ಎಲ್ಲಿ ಐಐಟಿ ಸ್ಥಾಪನೆ?]

siddaramaiah

ಮೈಸೂರು, ರಾಯಚೂರು, ಧಾರವಾಡ, ಹಾಸನ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಐಐಟಿ ಸ್ಥಾಪನೆ ಮಾಡುವ ಕುರಿತು ಬೇಡಿಕೆ ಬಂದಿದೆ. ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುವಾಗ ರಾಯಚೂರು ಜಿಲ್ಲೆಗೆ ಆದ್ಯತೆ ನೀಡುವಂತೆ ಮನವಿ ಸಲ್ಲಿಸಲಾಗತ್ತದೆ ಎಂದು ತಿಳಿಸಿದರು. [ರಾಯಚೂರಲ್ಲಿ ಐಐಟಿ ಸ್ಥಾಪನೆಗೆ ಬೇಡಿಕೆ ಇಟ್ಟ ಖರ್ಗೆ]

ಮೈಸೂರಿನಲ್ಲಿ ಐಐಟಿ ಸ್ಥಾಪನೆಗೆ ಸರ್ಕಾರ ಪ್ರಯತ್ನ ನಡೆಸಿದ ಎಂಬ ಆರೋಪ ಸುಳ್ಳು. ಮುಖ್ಯಮಂತ್ರಿಯಾಗಿ ನನಗೆ ರಾಜ್ಯದ ಎಲ್ಲಾ ಜಿಲ್ಲೆಗಳು ಒಂದೇ. ಯಾವ ಜಿಲ್ಲೆಯಲ್ಲಿ ಸ್ಥಾಪನೆಯಾದರೂ ಸಂತಸವಾಗುತ್ತದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು. [ಐಐಟಿ ಎಲ್ಲಿ ಸ್ಥಾಪನೆ ಆಗಬೇಕು? ಉತ್ತರ ಸಿಕ್ಕಿದೆ!]

ಕೇಂದ್ರ ಸರ್ಕಾರ 2015-16ನೇ ಸಾಲಿನ ಬಜೆಟ್‌ನಲ್ಲಿ ರಾಜ್ಯದಲ್ಲಿ ಐಐಟಿ ಸ್ಥಾಪನೆ ಮಾಡುವುದಾಗಿ ಘೋಷಣೆ ಮಾಡಿದೆ. ಅಂದಿನಿಂದ ಐಐಟಿ ತಮ್ಮ ಜಿಲ್ಲೆಗೆ ಬರಲಿ ಎಂದು ಜನಪ್ರತಿನಿಧಿಗಳು ಸಿದ್ದರಾಮಯ್ಯ ಮತ್ತು ಕೇಂದ್ರ ಸಚಿವರಿಗೆ ಮನವಿ ಸಲ್ಲಿಸುತ್ತಿದ್ದಾರೆ.

ರಾಯಚೂರು ಜಿಲ್ಲೆಯಲ್ಲಿ ಭಾರತೀಯ ತಂತ್ರಜ್ಞಾನ ಸಂಸ್ಥೆಯನ್ನು ಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೆಲವು ದಿನಗಳ ಹಿಂದೆ ಮನವಿ ಸಲ್ಲಿಸಿತ್ತು.

English summary
Karnataka Chief Minister Siddaramaiah said, government will forward a proposal to the union government according priority to establish the Indian Institute of Technology (IIT) in Raichur district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X