ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮತ್ತೆ ಕೇಳಿಬಂತು ಪ್ರತ್ಯೇಕ ರಾಜ್ಯದ ಕೂಗು

|
Google Oneindia Kannada News

ಕಲಬುರಗಿ, ನ.1 : ಕನ್ನಡ ರಾಜ್ಯೋತ್ಸವದ ಸಂಭ್ರಮದ ನಡುವೆಯೇ ಪ್ರತ್ಯೇಕ ರಾಜ್ಯದ ಅಪಸ್ವರ ಕೇಳಿಬಂದಿದೆ. ಹೈದರಾಬಾದ್-ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡಬೇಕು ಎಂದು ಒತ್ತಾಯಿಸಿ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನಿಸಿದ ಘಟನೆ ಕಲಬುರಗಿಯಲ್ಲಿ ಶನಿವಾರ ನಡೆದಿದೆ.

ನಗರದ ಸರ್ದಾರ್‌ ವಲ್ಲಬಾಯಿ ಪಟೇಲ್‌ ವೃತ್ತದಲ್ಲಿ ಪ್ರತ್ಯೇಕ ರಾಜ್ಯ ಹೋರಾಟ ಒಕ್ಕೂಟದ ಕಾರ್ಯಕರ್ತರು ಹೈದರಾಬಾದ್-ಕರ್ನಾಟಕವನ್ನು ಪ್ರತ್ಯೇಕ ರಾಜ್ಯವಾಗಿ ಮಾಡಬೇಕು ಎಂದು ಒತ್ತಾಯಿಸಿ, ಧ್ವಜಾರೋಹಣಕ್ಕೆ ಯತ್ನಿಸಿದರು. ಈ ಸಂದರ್ಭದಲ್ಲಿ ಪೊಲೀಸರು ಕಾರ್ಯಕರ್ತರನ್ನು ಬಂಧಿಸಿದ್ದಾರೆ.

Kalaburagi

ಪ್ರಾದೇಶಿಕ ಅಸಮತೋಲನೆ ನಿವಾರಿಸಲು ಪ್ರತ್ಯೇಕ ರಾಜ್ಯವೊಂದೇ ಪರಿಹಾರ ಎಂದು ಘೋಷಣೆ ಕೂಗಿದ ಕಾರ್ಯಕರ್ತರು, ಪ್ರತ್ಯೇಕ ಧ್ವಜಾರೋಹಣ ಮಾಡಲು ಯತ್ನಿಸಿದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಕಾರ್ಯಕರ್ತರನ್ನು ಬಂಧಿಸಿ, ಧ್ವಜಾರೋಹಣ ಮಾಡದಂತೆ ತಡೆದರು. [ಗುಲ್ಬರ್ಗಾ ಹೆಸರು ಬದಲಾವಣೆಗೆ ಮುಸ್ಲಿಂ ವಿರೋಧ]

ಪ್ರತ್ಯೇಕ ರಾಜ್ಯ ರಚನೆ ಇಲ್ಲ : ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ರಾಜ್ಯವನ್ನು ಉದ್ದೇಶಿಸಿ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅಖಂಡ ಕರ್ನಾಟಕ ಏಕೀಕರಣಕ್ಕಾಗಿ ಹಲವಾರು ಗಣ್ಯರು ಹೋರಾಟ ಮಾಡಿದ್ದು, ಪ್ರತ್ಯೇಕ ರಾಜ್ಯ ರಚನೆ ವಿಚಾರ ಅಪ್ರಸ್ತುತ ಹಾಗೂ ಖಂಡನೀಯವೆಂದು ಹೇಳಿದ್ದಾರೆ. [12 ನಗರಗಳಿಗೆ ಇಂದಿನಿಂದ ಹೊಸ ಹೆಸರು]

ರಾಜ್ಯದ ಎಲ್ಲಾ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಹೈದರಾಬಾದ್-ಕರ್ನಾಟಕ ಭಾಗಕ್ಕೆ ಸಂವಿಧಾನದ 371ನೇ (ಜೆ) ತಿದ್ದುಪಡಿಯನ್ವಯ ನೀಡಿರುವ ವಿಶೇಷ ಸ್ಥಾನಮಾನದಡಿ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಇದಕ್ಕಾಗಿ ಸರ್ಕಾರ ಅಗತ್ಯ ನೆರವು ನೀಡಲಿದೆ ಎಂದು ಸಿಎಂ ಘೋಷಿಸಿದ್ದಾರೆ.

English summary
Separate state for Hyderabad Karnataka voice raised again on Saturday, November 1 at Kalaburagi, Karnataka. Activists of the separate State of the Union protest in Kalaburagi city and demand for a separate state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X