ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಘವೇಶ್ವರಶ್ರೀಗಳ ಪ್ರಕರಣ : ವರದಿ ಕೇಳಿದ ರಾಜ್ಯಪಾಲರು

|
Google Oneindia Kannada News

ಬೆಂಗಳೂರು, ಅಕ್ಟೋಬರ್ 01 : ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಸ್ವಾಮೀಜಿಗಳ ವಿರುದ್ಧದ ಅತ್ಯಾಚಾರ ಪ್ರಕರಣದ ಬಗ್ಗೆ ವಿವರವಾದ ವರದಿ ನೀಡುವಂತೆ ರಾಜ್ಯಪಾಲ ವಜುಭಾಯಿ ವಾಲಾ ಅವರು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ.

ಗುರುವಾರ ರಾಜ್ಯಪಾಲರು ಈ ಕುರಿತು ಸರ್ಕಾರಕ್ಕೆ ಸೂಚನೆ ರವಾನಿಸಿದ್ದಾರೆ. ಹೊಸನಗರ ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳ ಅತ್ಯಾಚಾರ ಪ್ರಕರಣ, ತನಿಖೆಯ ಹಂತ ಮುಂತಾದ ವಿವರಗಳ ಸಮಗ್ರ ವರದಿಯನ್ನು ನೀಡಿ ಎಂದು ಹೇಳಿದ್ದಾರೆ. [2ನೇ ಪ್ರಕರಣದಲ್ಲಿ ಶ್ರೀಗಳಿಗೆ ಜಾಮೀನು?]

vajubhai vala

ಸ್ವಾಮೀಜಿಗಳ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದ್ದರೂ ಜಾಮೀನು ಹೇಗೆ ಸಿಕ್ಕಿತು?, ಮೊದಲ ಪ್ರಕರಣ ದಾಖಲಾಗಿ ಒಂದು ವರ್ಷವಾದರೂ ಜಾರ್ಜ್‌ಶೀಟ್‌ ಸಲ್ಲಿಕೆಯಾಗಿಲ್ಲ. ಎರಡನೇ ದೂರಿನ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರ ಮತ್ತು ರಾಜ್ಯಪಾಲರಿಗೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ಲಲಿತಾ ಕುಮಾರಮಂಗಳಂ ಪತ್ರ ಬರೆದಿದ್ದರು. [ಶ್ರೀಗಳು ಪುರುಷತ್ವ ಪರೀಕ್ಷೆಗೆ ಬಂದಿಲ್ಲ, ಮುಂದೇನು?]

ರಾಜ್ಯಪಾಲ ವಜುಭಾಯಿ ವಾಲಾ ಅವರು ಈ ಕುರಿತು ಉಲ್ಲೇಖಿಸಿದ್ದು, ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರು ಪತ್ರ ಬರೆದಿದ್ದಾರೆ. ಮಹಿಳೆಯರ ಮೇಲಿನ ದೌರ್ಜನ್ಯ ವಿಚಾರದಲ್ಲಿ ಮೃದು ಧೋರಣೆ ಅನುಸರಿಸಲಾಗುತ್ತಿದೆಯೇ? ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ. [ಮಹಿಳಾ ಆಯೋಗಕ್ಕೆ ಮಠದ 12 ಪ್ರಶ್ನೆಗಳು]

2 ಪ್ರಕರಣಗಳಿವೆ : ರಾಮಕಥಾ ಗಾಯಕಿ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣ ಮತ್ತು ಯಕ್ಷಗಾನ ಕಲಾವಿದೆ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಗಳು ಶ್ರೀಗಳ ವಿರುದ್ಧ ದಾಖಲಾಗಿವೆ. ಎರಡೂ ಪ್ರಕರಣದಲ್ಲಿ ಶ್ರೀಗಳಿಗೆ ನಿರೀಕ್ಷಣಾ ಜಾಮೀನು ಸಿಕ್ಕಿದೆ. ರಾಮಕಥಾ ಗಾಯಕಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ. [ಚಾರ್ಜ್ ಶೀಟ್ ನಲ್ಲೇನಿದೆ?]

English summary
Karnataka Governor Vajubhai Vala has sought a report from government over Raghaveshwara Bharathi Swamiji rape case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X