ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎರಡು ದಿನ ಕರ್ನಾಟಕ ಪ್ರವಾಸ ಮಾಡಲಿದ್ದಾರೆ ರಾಹುಲ್ ಗಾಂಧಿ

|
Google Oneindia Kannada News

ಬೆಂಗಳೂರು, ಜುಲೈ 26 : 'ರಾಜ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಸಾಂತ್ವನ ಹೇಳಲು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಎರಡು ದಿನ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ' ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಹೇಳಿದ್ದಾರೆ.

ಕರ್ನಾಟಕದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ ರಾಜ್ಯಕ್ಕೆ ಬಂದ ರಾಹುಲ್ ಗಾಂಧಿ ರೈತರನ್ನು ಭೇಟಿ ಮಾಡದೆ ವಾಪಸ್ ತೆರಳಿದ್ದರು. ಇದಕ್ಕೆ ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದವು. 'ರೈತರ ಮನೆಗೆ ಭೇಟಿ ನೀಡದೆ ವಿಮಾನ ನಿಲ್ದಾಣದಿಂದ ವಾಪಸ್ ಹೋಗಿದ್ದಾರೆ' ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ವಾಗ್ದಾಳಿ ನಡೆಸಿದ್ದರು.

rahul gandhi

ಶನಿವಾರ ಬೆಂಗಳೂರಿನಲ್ಲಿ ಮಾತನಾಡಿದ ಡಾ.ಜಿ.ಪರಮೇಶ್ವರ ಅವರು, 'ರಾಹುಲ್ ಗಾಂಧಿ ಅವರು ಎರಡು ದಿನಗಳ ರಾಜ್ಯ ಪ್ರವಾಸ ಮಾಡಲಿದ್ದು, ಕಾರ್ಯಕ್ರಮ ಮತ್ತು ದಿನಾಂಕಗಳನ್ನು ನಿಗದಿಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ತಮಗೆ ಸೂಚನೆ ನೀಡಿದ್ದಾರೆ' ಎಂದು ಹೇಳಿದ್ದಾರೆ. [ರೈತರ ಜಮೀನು, ಮೋದಿ ಕೈವಶವಾಗಲು ಬಿಡುವುದಿಲ್ಲ : ರಾಹುಲ್]

'ಎರಡು ದಿನದ ಕಾರ್ಯಕ್ರಮದ ವೇಳೆ ರಾಹುಲ್ ಗಾಂಧಿ ಅವರು ಮೃತ ರೈತರ ಕುಟುಂಬಗಳನ್ನು ಭೇಟಿ ಮಾಡಿ ಸಾಂತ್ವನ ಹೇಳಲಿದ್ದಾರೆ. ಪಾದಯಾತ್ರೆ, ಸಮಾವೇಶಗಳನ್ನು ನಡೆಸಲಿದ್ದಾರೆ ಎಂದು ಪರಮೇಶ್ವರ ಅವರು ಹೇಳಿದರು. 'ವೆಂಕಯ್ಯ ನಾಯ್ಡು ಅವರಿಂದ ಪ್ರಮಾಣಪತ್ರ ಬೇಕಿಲ್ಲ. ಪಾಠ ಕಲಿಯುವ ಅಗತ್ಯತೆ ಕಾಂಗ್ರೆಸ್‌ ಪಕ್ಷಕ್ಕೆ ಇಲ್ಲ' ಎಂದು ತಿರುಗೇಟು ನೀಡಿದರು. [ರೈತ ಆತ್ಮಹತ್ಯೆಗೆ ಪ್ರೇಮ ವೈಫಲ್ಯ ಕಾರಣ ಅಂದ್ರು ಕೃಷಿ ಸಚಿವರು]

ರಾಹುಲ್ ಗುರುವಾರ ಬಂದಿದ್ದರು : ಅಂದಹಾಗೆ ಶುಕ್ರವಾರ ಅನಂತಪುರದಲ್ಲಿ ನಡೆದ ರೈತ ಭರೋಸಾ ಪಾದಯಾತ್ರೆಯಲ್ಲಿ ರಾಹುಲ್ ಗಾಂಧಿ ಪಾಲ್ಗೊಂಡಿದ್ದರು. ಗುರುವಾರ ರಾತ್ರಿ ಬೆಂಗಳೂರಿಗೆ ಆಗಮಿಸಿ ಖಾಸಗಿ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದ ಅವರು ಶುಕ್ರವಾರ ಬೆಳಗ್ಗೆ ಅನಂತಪುರಕ್ಕೆ ತೆರಳಿದ್ದರು. ಆದರೆ, ಕರ್ನಾಟಕದ ರೈತರ ಮನೆಗಳಿಗೆ ಭೇಟಿ ನೀಡಿರಲಿಲ್ಲ.

ಜು.27ರಂದು ಸಭೆ : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ, ರೈತರ ಸಾವಿನ ಸರಣಿ ಹಿನ್ನೆಲೆಯಲ್ಲಿ ಪಕ್ಷದ ವತಿಯಿಂದ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲು ಜು.27ರ ಸೋಮವಾರ ಕೆಪಿಸಿಸಿ ಪದಾಧಿಕಾರಿಗಳ ಸಭೆಯನ್ನು ಕರೆಯಲಾಗಿದೆ.

English summary
Karnataka Pradesh Congress Committee (KPCC) president, Dr G. Parameshwar said, Congress vice president Rahul Gandhi will soon visit Karnataka for two days to meet some of the family members of farmers who committed suicide recently.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X