ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕನ್ನಡ ಹಬ್ಬಕ್ಕೆ ಹೊಸ ರೂಪದಲ್ಲಿ 'ಪದ' ತಂತ್ರಾಂಶ

By ಮಲೆನಾಡಿಗ
|
Google Oneindia Kannada News

ಕಂಪ್ಯೂಟರಲ್ಲಿ ಕನ್ನಡದ ಬಳಕೆ ದಿನೇ ದಿನೇ ಹೆಚ್ಚಾಗುತ್ತಿದೆ. ಅಂತರ್ಜಾಲದಲ್ಲಿ ಸದ್ಯಕ್ಕೆ ಕನ್ನಡ ವೆಬ್ ಸೈಟುಗಳ ಸಂಖ್ಯೆ ಕಡಿಮೆ ಇದ್ದರೂ ಕೂಡ ಓದುಗರ ಸಂಖ್ಯೆ ಕಡಿಮೆ ಇಲ್ಲ. ಬಹಳಷ್ಟು ಜನ ಕಂಪ್ಯೂಟರ್ನಲ್ಲಿ ಕನ್ನಡದಲ್ಲಿ ಬರೆಯಲು ಬಯಸುತ್ತಿದ್ದಾರೆ. ಆದರೆ, ಮರುಕ್ಷಣವೇ ಬರೆಯುವುದು ಹೇಗೆ ಎಂಬ ಗೊಂದಲಕ್ಕೆ ಬೀಳುತ್ತಾರೆ.

ನನಗೆ ಟೈಪಿಸಲು ಬರುವುದಿಲ್ಲ, ಏನೋ ಟೈಪ್ ಮಾಡಿದರೆ ಏನೋ ಅಕ್ಷರ ಮೂಡುತ್ತದೆ ಎಂಬ ಸರಳ ಸಮಸ್ಯೆಗಳನ್ನು ದೊಡ್ಡದಾಗಿ ಹೇಳಿಕೊಳ್ಳುತ್ತದೆ. ಅನಿವಾರ್ಯವಾಗಿ kanglish ಬಳಸಿ ಅನೇಕರಿಗೆ ಕಿರಿಕಿರಿ ಮಾಡುತ್ತಾರೆ. ಈ ಸಮಸ್ಯೆಗೆ ಪರಿಹಾರ ರೂಪದಲ್ಲಿ ಕೆಲ ವರ್ಷಗಳ ಹಿಂದೆ ಬಂದ 'ಪದ' ತಂತ್ರಾಂಶ ಈಗ ಲಿನಾಕ್ಸ್ ಆವೃತ್ತಿಯಲ್ಲೂ ಲಭ್ಯವಿದ್ದು ಕನ್ನಡಿಗರಿಗೆ ರಾಜ್ಯೋತ್ಸವ ಹಾಗೂ ಬೆಳಕಿನ ಹಬ್ಬದ ಕೊಡುಗೆಯಾಗಲಿದೆ ಎಂದು ತಂತ್ರಾಂಶ ಅಭಿವೃದ್ಧಿ ಪಡಿಸಿದ ತಂತ್ರಜ್ಞ ಲೋಹಿತ್ ಡಿ. ಶಿವಮೂರ್ತಿ ಒನ್ ಇಂಡಿಯಾ ಕನ್ನಡ ಪ್ರತಿನಿಧಿಗೆ ಹೇಳಿದರು.

ಕೆಲವರು ಒತ್ತಕ್ಷರ, ದೀರ್ಘ, ಅಲ್ಪಪ್ರಾಣ, ಮಹಾಪ್ರಾಣ ಮುಂತಾದ ಟೈಪಿಂಗ್ ಸ್ವಲ್ಪ ಸಮಸ್ಯೆಯಾಗಿ ಹಿಂಜರಿಯುತ್ತಿದ್ದಾರೆ. ಆದರೂ ಕೂಡ ಉತ್ಸಾಹಿಗಳಿಗೇನೂ ಕಡಿಮೆ ಇಲ್ಲ. ಬಹಳ ಸುಲಭವಾಗಿ ನೇರವಾಗಿ ಎಲ್ಲಿ ಬೇಕಾದರೂ ಕನ್ನಡದಲ್ಲಿ ಬರೆಯಲು ಗೂಗಲ್, ಮೈಕ್ರೋಸಾಫ್ಟ್, ಪ್ರಮುಖ್ ಮುಂತಾದ ಹಲವು IME ಟೂಲ್ ಗಳಿವೆ. ನುಡಿ, ಪದ, ಬರಹದ IME ಜೊತೆಗೆ ಪದ ಸಂಸ್ಕಾರಕಗಳೂ (Word Processors) ಇವೆ.

ಆನ್ ಲೈನ್ ನಲ್ಲಿ ಬರೆಯಲು ಹಲವು ಟೂಲ್ ಗಳಿವೆ. ಸಾಮಾನ್ಯ ಬಳಕೆದಾರರಿಗೆ ಈಗ ಯಾವ ತಾಂತ್ರಿಕ ಸಮಸ್ಯೆ ಇಲ್ಲ. ಬೇಕಾಗಿರುವುದು ಸ್ವಲ್ಪ ಆಸಕ್ತಿ, ಅಭ್ಯಾಸ ಅಷ್ಟೆ. ಈ ಸಂದರ್ಭದಲ್ಲಿ ಕನ್ನಡ ಟೈಪಿಸಲು 'ಪದ' ತಂತ್ರಾಂಶದ ಹೊಸ ಆವೃತ್ತಿ (Pada 4.0) ಲಿನಾಕ್ಸ್ ಆವೃತ್ತಿಯಲ್ಲಿ ಬಿಡುಗಡೆಯಾಗಿದೆ.

ತಂತ್ರಾಂಶದಲ್ಲಿ ಏನಿದೆ?

ತಂತ್ರಾಂಶದಲ್ಲಿ ಏನಿದೆ?

ಕನ್ನಡ ಸೇರಿದಂತೆ ಹಲವು ಭಾರತೀಯ ಭಾಷೆಗಳಲ್ಲಿ ಬರೆಯಲು ಸಾಧ್ಯವಿರುವ ಈ ತಂತ್ರಾಂಶದಲ್ಲಿ ಮುಖ್ಯವಾಗಿ ಕನ್ನಡಕ್ಕೆ ಹಲವು ರೀತಿಯ ವಿಶೇಷ ಸೌಲಭ್ಯಗಳಿವೆ. ಸ್ಪೆಲ್ ಚೆಕರ್, ಪದ ಅರ್ಥ, ಆಟೋ ಕಂಪ್ಲೀಟ್ ಸೌಲಭ್ಯಗಳಿವೆ. ಮೊತ್ತಮೊದಲ ಬಾರಿಗೆ ಎರಡು ಲಕ್ಷಕ್ಕೂ ಹೆಚ್ಚು ಪದಗಳನ್ನುಳ್ಳ ನಿಘಂಟು ಕೂಡ ಇದರಲ್ಲಿದೆ. ಟೈಪಿಸಿದ ಕಡತಗಳನ್ನು ಹಲವು ರೀತಿಯಲ್ಲಿ ಉಳಿಸಲು(save as) ಅವಕಾಶವಿದೆ.

ಹೊಸ ಅಕ್ಷರ ಶೈಲಿಗಳಿವೆ

ಹೊಸ ಅಕ್ಷರ ಶೈಲಿಗಳಿವೆ

ಹಲವು ಬಗೆಯ ಅಕ್ಷರ ಶೈಲಿಗಳಿವೆ (Font styles) ಹೆಚ್ಚಿನ ಅಕ್ಷರಶೈಲಿ ಗೊತ್ತಿದ್ದರೆ ಸೇರಿಸಲು ಅವಕಾಶವಿದೆ. ಪದ ತಂತ್ರಾಂಶ ಅಳವಡಿಸಿಕೊಂಡಾಗ ಅದರ ಜೊತೆ ಪದ IME ಕೂಡ ಇರುತ್ತದೆ. ಸದ್ಯಕ್ಕೆ IME ಲಿನಾಕ್ಸ್ ಆವೃತ್ತಿಯಲ್ಲಿ ಲಭ್ಯವಿಲ್ಲ. ವಿಂಡೋಸ್ ಆವೃತ್ತಿಯಲ್ಲಿ ಬಳಕೆಯಲ್ಲಿದೆ.

IME ಆನ್ ಮಾಡಿಕೊಂಡು ವರ್ಡ್, ಎಕ್ಸೆಲ್ ಮುಂತಾದ ಯಾವುದೇ ಅಪ್ಲಿಕೇಶನ್ ಗಳಲ್ಲಿ ಹಾಗೂ ಇಮೇಲ್, ಚಾಟ್, ಫೇಸ್ ಬುಕ್, ಬ್ಲಾಗ್, ಜಿಪ್ಲಸ್, ಮುಂತಾದ ಯಾವುದೇ ಅಂತರಜಾಲ ತಾಣಗಳಲ್ಲಿ ನೇರವಾಗಿ ಕನ್ನಡದಲ್ಲಿ ಟೈಪಿಸಬಹುದು. ಈ ತಂತ್ರಾಂಶ ಉಚಿತವಾಗಿ ದೊರೆಯುತ್ತದೆ.

ನುಡಿ, ಬರಹಕ್ಕೆ ಪೂರಕ

ನುಡಿ, ಬರಹಕ್ಕೆ ಪೂರಕ

ಪದ ತಂತ್ರಾಂಶದ ಇನ್ನೊಂದು ವಿಶೇಷವೆಂದರೆ ಬರಹ, ನುಡಿ ಮುಂತಾದ ತಂತ್ರಾಂಶಗಳಲ್ಲಿ ಉಳಿಸಿಟ್ಟಿರುವ ಯಾವುದೇ ಕಡತಗಳನ್ನು ನೇರವಾಗಿ ಇದರಲ್ಲಿ ತೆರೆಯಬಹುದು. ಅದು ಯುನಿಕೋಡ್ ಅಕ್ಷರಗಳಾಗಿ ತೆರೆದುಕೊಳ್ಳುತ್ತದೆ.

ಮತ್ತೊಂದು ವಿಶೇಷವೆಂದರೆ ಪದ ತಂತ್ರಾಂಶದ ಮೂಲಕ ರಚಿಸಿದ ಪಿಡಿಎಫ್ ಕಡತಗಳಲ್ಲಿ ಯಾವುದೇ ಪದವನ್ನು ಕೂಡ ಹುಡುಕಬಹುದು (find) ಹಾಗೂ ಪಿಡಿಎಫ್ ಕಡತದಲ್ಲಿರುವ ಪಠ್ಯವನ್ನು ಕಾಪಿ ಮಾಡಿ ಬೇರೆಡೆಗೆ ಪೇಸ್ಟ್ ಮಾಡಬಹುದು. ಯಾವುದೇ ಫಾಂಟ್ ಸಮಸ್ಯೆ ಉಂಟಾಗುವುದಿಲ್ಲ.
ಇದು ಸಂಚಾರಿ ತಂತ್ರಾಂಶ

ಇದು ಸಂಚಾರಿ ತಂತ್ರಾಂಶ

ಪದ ತಂತ್ರಾಂಶದ zipped version ಕೂಡ ಲಭ್ಯವಿದೆ. ಬಹುತೇಕ ಆಫೀಸ್ ಮುಂತಾದ ಕಡೆ ಗಣಕದಲ್ಲಿ ಯಾವುದೇ ತಂತ್ರಾಂಶ ಅಳವಡಿಸಿಕೊಳ್ಳಲು admin rights ಅಥವಾ permission ಇರುವುದಿಲ್ಲ. ಅಂಥ ಕಡೆ ಈ zipped version ಇಟ್ಟುಕೊಂಡು ಕನ್ನಡದಲ್ಲಿ ಬರೆಯಬಹುದು. ನಮ್ಮ ಕಂಪ್ಯೂಟರಿನಲ್ಲಿ ಇನ್ ಸ್ಟಾಲ್ ಮಾಡಿಕೊಳ್ಳುವ ಅವಶ್ಯಕತೆ ಇರುವುದಿಲ್ಲ.

ಬೇರೆ ತಂತ್ರಾಂಶಗಳ ಸ್ಥಿತಿ ಗತಿ

ಬೇರೆ ತಂತ್ರಾಂಶಗಳ ಸ್ಥಿತಿ ಗತಿ

ಈ ಮೊದಲು ವ್ಯಾಪಕವಾಗಿ ಬಳಕೆಯಲ್ಲಿದ್ದ 'ಬರಹ' ತಂತ್ರಾಂಶ ಆವೃತ್ತಿ ಹತ್ತರ ಬಳಿಕ ಉಚಿತವಾಗಿ ಲಭ್ಯವಿಲ್ಲ. ಅದರಲ್ಲಿ ಹೆಚ್ಚಿನ ಅಭಿವೃದ್ಧಿ ಕಾರ್ಯಗಳಿಗಾಗಿ ಸಂಪನ್ಮೂಲ ಒಟ್ಟುಮಾಡಲು ಸದ್ಯಕ್ಕೆ ಬರಹ ತಂತ್ರಾಂಶಕ್ಕೆ ಶುಲ್ಕವಿಡಲಾಗಿದೆ ಎಂದು ಹೇಳಲಾಗಿದೆ. 'ನುಡಿ' ತಂತ್ರಾಂಶದಲ್ಲಿ ಹೆಚ್ಚಿನ ಸೌಲಭ್ಯಗಳಿಲ್ಲ ಮತ್ತು ಡೌನ್ಲೋಡ್ ಮಾಡಲು ಬೇಕಾದ ತಾಣ ಸರಿಒಯಾಗಿ ಲಭ್ಯ ಇಲ್ಲ. ಗೂಗಲ್ ಟ್ರಾನ್ಸ್ ಲಿಟೇರೇಷನ್ ಬಳಕೆ ಎಲ್ಲರಿಗೂ ಒಗ್ಗುತ್ತಿಲ್ಲ.

ಉಚಿತ ಉಚಿತ

ಉಚಿತ ಉಚಿತ

ಇಷ್ಟೆಲ್ಲಾ ಸೌಲಭ್ಯಗಳ ತಂತ್ರಾಂಶ ರಚಿಸಿ ಉಚಿತವಾಗಿ ಬಳಕೆಗೆ ದೊರೆಯುವಂತೆ ಮಾಡಿರುವ ತಂತ್ರಾಂಶ ಅಭಿವೃದ್ಧಿಗಾರರಾದ ಲೋಹಿತ್ ಶಿವಮೂರ್ತಿಯವರಿಗೆ ಧನ್ಯವಾದಗಳನ್ನು ಅರ್ಪಿಸಲೇಬೇಕು. ವಿಂಡೋಸ್ ಅಥವಾ ಲಿನಕ್ಸ್ ಆವೃತ್ತಿಯಲ್ಲಿ ಪದ ತಂತ್ರಾಂಶ ಡೌನ್ ಲೋಡ್ ಮಾಡಿಕೊಳ್ಳುವ ತಾಣ: http://www.pada.pro/download ಇಲ್ಲಿದೆ

English summary
Kannada Rajyotsava offer : ‘Pada Software’ is a Word processor for Indic Scripts, especially for Kannada script is now updated with Linux version. The software developed by Lohith D Shivamurthy is a collection of tools for processing Indic scripts. Specialized Editor, IMEs (Input Method Engine) and PadaKosha (Dictionary) etc.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X