ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ, ಜೆಡಿಎಸ್ ಅಭ್ಯರ್ಥಿ ಅಂತಿಮ

|
Google Oneindia Kannada News

ಬೆಂಗಳೂರು, ಜೂನ್ 22 : ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರ ಆಯ್ಕೆಗೆ ನಡೆಯುವ ಉಪ ಚುನಾವಣೆ ಜೆಡಿಎಸ್ ಅಭ್ಯರ್ಥಿಯನ್ನು ಅಂತಿಮಗೊಳಿಸಿದೆ. ಚುನಾವಣಾ ಆಯೋಗ ಶೀಘ್ರದಲ್ಲೇ ಚುನಾವಣೆ ವೇಳಾಪಟ್ಟಿ ಪ್ರಕಟಿಸುವ ನಿರೀಕ್ಷೆ ಇದೆ.

ಮಂಗಳವಾರ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರು ರಮೇಶ್ ಬಾಬು ಅವರನ್ನು ಅಭ್ಯರ್ಥಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ರಮೇಶ್ ಬಾಬು ಅವರು ಜೆಡಿಎಸ್‌ ವಕ್ತಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. [ಹೆಬ್ಬಾಳ ಉಪ ಚುನಾವಣೆ ಕಾಂಗ್ರೆಸ್ ನಾಯಕರಿಗೆ ಕಲಿಸಿದ್ದೇನು?]

ramesh babu

ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದ ವೈ.ಎ.ನಾರಾಯಣ ಸ್ವಾಮಿ ಅವರ ರಾಜೀನಾಮೆಯಿಂದ ಸ್ಥಾನ ತೆರವಾಗಿದೆ. ನಾರಾಯಣ ಸ್ವಾಮಿ ಅವರು ಹೆಬ್ಬಾಳ ಕ್ಷೇತ್ರದ ಉಪ ಚುನಾವಣೆಯಲ್ಲಿ ಜಯಗಳಿಸಿ ವಿಧಾನಸಭೆ ಪ್ರವೇಶಿಸಿದ್ದು, ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು. [ಹೆಬ್ಬಾಳದಲ್ಲಿ ಕಾಂಗ್ರೆಸ್ ಬೀಳಲು ಏಳೇ 7 ಕಾರಣಗಳು]

ಆಗ್ನೇಯ ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ನಿರಂಜನ್ ಅವರ ಹೆಸರು ಅಂತಿಮಗೊಳಿಸಿದೆ. ಜೆಡಿಎಸ್‌ ಅಭ್ಯರ್ಥಿಯೂ ಅಂತಿಮವಾಗಿದೆ. ಆದರೆ, ಬಿಜೆಪಿ ಇನ್ನೂ ಅಭ್ಯರ್ಥಿಗಳ ಹೆಸರು ಪ್ರಕಟಿಸಿಲ್ಲ. ಚುನಾವಣಾ ಆಯೋಗ ಕೆಲವೇ ದಿನಗಳಲ್ಲಿ ವೇಳಾಪಟ್ಟಿ ಪ್ರಕಟಿಸುವ ನಿರೀಕ್ಷೆ ಇದೆ.

ಅಂದಹಾಗೆ ಆಗ್ನೇಯ ಶಿಕ್ಷಕರ ಕ್ಷೇತ್ರದ ವ್ಯಾಪ್ತಿಗೆ ಚಿತ್ರದುರ್ಗ, ದಾವಣಗೆರೆ (ಚನ್ನಗಿರಿ, ಹೊನ್ನಾಳಿ, ಹರಪನಹಳ್ಳಿ ಹೊರತುಪಡಿಸಿ), ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳು ಸೇರುತ್ತವೆ.

English summary
Karnataka JDS has finalized its candidate for the Legislative Council elections to the South-East Teachers constituency. Party official spokesperson Ramesh Babu candidate for election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X