ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಸಂಪುಟದಿಂದ ನನ್ನನ್ನು ಕೈ ಬಿಟ್ಟರೆ ಒಳ್ಳೆಯದು'

|
Google Oneindia Kannada News

ಚಾಮರಾಜನಗರ, ಸೆ. 19 : 'ಸಚಿವ ಸಂಪುಟದಿಂದ ನನ್ನನ್ನು ಕೈ ಬಿಟ್ಟರೆ ಒಳ್ಳೆಯದು. ಪಕ್ಷ ಮತ್ತು ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧನಾಗಿದ್ದೇನೆ' ಎಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಹೇಳಿದ್ದಾರೆ. ಈಗಾಗಲೇ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ.

ಶನಿವಾರ ಬಿಳಿಗಿರಿರಂಗನ ಬೆಟ್ಟದಲ್ಲಿ ಗಿರಿಜನ ಆಶ್ರಮ ಶಾಲೆ ಉದ್ಘಾಟಿಸಿ ಮಾತನಾಡಿದ ಆಂಜನೇಯ ಅವರು, 'ಸಚಿವ ಸಂಪುಟ ವಿಸ್ತರಣೆ ಸಮಯದಲ್ಲಿ ನನ್ನನ್ನು ಕೈ ಬಿಟ್ಟರೆ ಒಳ್ಳೆಯದು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪಕ್ಷದ ನಿರ್ಧಾರಕ್ಕೆ ನಾನು ಬದ್ಧವಾಗಿದ್ದೇನೆ' ಎಂದರು. [ಸಂಪುಟ ವಿಸ್ತರಣೆ : ಏಳು ಸಚಿವರಿಗೆ ಕೊಕ್]

h anjaneya

'ನನ್ನನ್ನು ಸಂಪುಟದಿಂದ ಕೈ ಬಿಟ್ಟರೆ ಇತರರಿಗೆ ಅವಕಾಶ ಸಿಗುತ್ತದೆ. ಸಚಿವ ಸ್ಥಾನದ ಬೇರೆ ಆಕಾಂಕ್ಷಿಗಳಿಗೆ ಅವಕಾಶ ಸಿಗುತ್ತದೆ. ಈ ವಿಚಾರದಲ್ಲಿ ಮುಖ್ಯಮಂತ್ರಿಗಳು ತೆಗೆದುಕೊಳ್ಳುವ ನಿರ್ಧಾರಕ್ಕೆ ನನ್ನ ಒಪ್ಪಿಗೆ ಇದೆ' ಎಂದು ಆಂಜನೇಯ ತಿಳಿಸಿದರು. [ಸಂಪುಟ ವಿಸ್ತರಣೆ : ಸೆ.24ರಂದು ಸಭೆ]

ಸಚಿವ ಸಂಪುಟ ಪುನಾರಚನೆ ಬಗ್ಗೆ ಮಾತನಾಡಿದ ಆಂಜನೇಯ ಅವರು 'ನಾನು ಬೇರೆ ಖಾತೆಯ ಆಕಾಂಕ್ಷಿಯಲ್ಲ' ಎಂದು ಸ್ಪಷ್ಟಪಡಿಸಿದರು. ಸಚಿವ ಸಂಪುಟ ಪುನಾರಚನೆ ಬಗ್ಗೆ ಸೆ.24ರಂದು ದೆಹಲಿಯಲ್ಲಿ ಸಭೆ ನಡೆಯಲಿದೆ. ಈ ತಿಂಗಳ ಅಂತ್ಯದೊಳಗೆ ಸಂಪುಟ ವಿಸ್ತರಣೆ ಯಾಗುವ ಸಾಧ್ಯತೆ ಇದೆ. [ಹಾಸನ ಜಿಲ್ಲೆಗೊಂದು ಸಚಿವ ಸ್ಥಾನ ನೀಡಿ]

ಅಂದಹಾಗೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಲಿದ್ದು, ಸೆ.24ರಂದು ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ಸಭೆ ನಡೆಯಲಿದೆ. ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

English summary
Social Welfare minister H.Anjaneya on Saturday said, he is ready to quit minister post in the time of cabinet expansion.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X