ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ರಾಜ್ಯಪಾಲರ ಗಣರಾಜ್ಯೋತ್ಸವ ಭಾಷಣ

|
Google Oneindia Kannada News

ಬೆಂಗಳೂರು, ಜ. 26 : ಕರ್ನಾಟಕದ ಪ್ರತಿಯೊಬ್ಬ ನಿರಾಶ್ರಿತ ಮತ್ತು ಅನಾಥ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗಬೇಕು. ಈ ನಿಟ್ಟಿನಲ್ಲಿ ಸರ್ಕಾರ ಗಮನ ಹರಿಸಬೇಕು ಎಂದು ರಾಜ್ಯಪಾಲ ವಜುಭಾಯಿ ರೂಡಾಭಾಯಿ ವಾಲಾ ಹೇಳಿದರು.

ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ ಗಣರಾಜ್ಯೋತ್ಸವ ಭಾಷಣ ಮಾಡಿದ ಅವರು, ದೇಶಕ್ಕಾಗಿ ತ್ಯಾಗ ಬಲಿದಾನ ಮಾಡಿದವರನ್ನು ಸ್ಮರಿಸುವುದು ನಮ್ಮ ಕರ್ತವ್ಯ. ನಾವೆಲ್ಲ ಒಂದಾಗಿ ಹಿರಿಯರ ಹಾದಿಯಲ್ಲಿ ಸಾಗೊಣ. ಗುಣಾತ್ಮಕ ಶಿಕ್ಷಣ ನೀಡಲು ಶ್ರಮಿಸೋಣ ಎಂದು ಕರೆ ನೀಡಿದರು.[ರಾಜ್ಯದ ದಕ್ಷ ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ]

karnataka

ಕೇಂದ್ರ ಸರ್ಕಾರದ ಯೋಜನೆಗಳನ್ನು ಶ್ಲಾಘಿಸಿದ ರಾಜ್ಯಪಾಲರು ದೇಶದ ಅಭಿವೃದ್ಧಿಗೆ ಎಲ್ಲರೂ ಕೈ ಜೋಡಿಸಬೇಕು. ಉತ್ತಮ ಯೋಜನೆಗಳನ್ನು ಒಪ್ಪಿಕೊಳ್ಳಬೇಕು ಎಂದು ಹೇಳಿದರು.

ಭಾರತ ಒಂದು ಶಕ್ತಿಶಾಲಿ ರಾಷ್ಟ್ರವಾಗಿದೆ. ಕರ್ನಾಟಕಕ್ಕೆ ದೇಶದಲ್ಲಿಯೇ ವಿಶೇಷ ಸ್ಥಾನವಿದೆ. ರಾಜ್ಯದ ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಂದಾಗಿ ದುಡಿಯಬೇಕಿದೆ ಎಂದು ಹೇಳಿದರು.[ಶಿಕ್ಷಣದಲ್ಲಿ ಭಾರತೀಯತೆ 'ಕೇಸರೀಕರಣ' ಅಲ್ಲ : ವಜುಬಾಯಿ]

ಭಯೋತ್ಪಾದನೆ ಸಮಾಜ ಶತ್ರು. ಇದರ ವಿರುದ್ಧ ಎಲ್ಲರೂ ಒಂದಾಗಿ ಹೋರಾಡಬೇಕು. ಪ್ರಜಾಪ್ರಭುತ್ವ ಕೇವಲ ನಿಷ್ಪಕ್ಷ ಚುನಾವಣೆಯಲ್ಲ. ಇದು ಎಲ್ಲರ ಏಳಿಗೆ ಗೆ ಶ್ರಮಿಸುತ್ತಿದೆ ಎಂದು ವ್ಯಾಖ್ಯಾನಿಸಿದರು.

English summary
Bengaluru: Every child of Karnataka to get good eduction said, Governor Vajubhai Rudabhai Vala in his speech on the occasion of Republic day.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X