ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕನ್ನಡಿಗರ ಮೇಲೆ ಹಲ್ಲೆ, ಜಯಲಲಿತಾಗೆ ಸಿದ್ದರಾಮಯ್ಯ ಪತ್ರ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 12 : ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ನಡೆದಿರುವ ಹಲ್ಲೆ ಮತ್ತು ಕರ್ನಾಟಕದ ಅಂಗಡಿ, ಹೊಟೇಲ್ ಗಳ ಮೇಲೆ ನಡೆಸಿರುವ ದಾಳಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ.

Safety of Kannadigas : Siddaramaiah's letter to Jayalalithaa

ತಮಿಳುನಾಡಿನಲ್ಲಿರುವ ಕನ್ನಡಿಗರಿಗೆ ರಕ್ಷಣೆ ನೀಡಬೇಕು ಮತ್ತು ಹಲ್ಲೆ, ದೌರ್ಜನ್ಯ ನಡೆಸುತ್ತಿರುವವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಅವರು ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಪತ್ರ ಬರೆದಿದ್ದಾರೆ.['ಸುಪ್ರೀಂಕೋರ್ಟ್‌ ತೀರ್ಪು ಕರ್ನಾಟಕ ಪಾಲಿಗೆ ಶಿಕ್ಷೆ']

ತಮಿಳು ಕನ್ನಡಿಗರ ಪ್ರತಿನಿಧಿಗಳು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ರಾಜ್ಯದಲ್ಲಿ ಮತ್ತು ತಮಿಳುನಾಡಿನಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಮಾತುಕತೆ ನಡೆಸಿದರು. ಕರ್ನಾಟಕದಲ್ಲಿರುವ ತಮಿಳು ಜನರಿಗೂ ಯಾವುದೇ ಪ್ರಚೋದನೆಗೆ ಒಳಗಾಗದಿರಲು ಮನವಿ ಮಾಡುವುದಾಗಿ ತಿಳಿಸಿದರು.[ಕಾವೇರಿ ವಿವಾದ : ಕರ್ನಾಟಕಕ್ಕೆ ಮತ್ತೆ ಅನ್ಯಾಯ]

ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಎಲ್ಲಾ ಕ್ರಮ ಕೈಗೊಳ್ಳಲಾಗಿದೆ. ತಮಿಳುನಾಡಿನಲ್ಲೂ ಎಲ್ಲಾ ಕ್ರಮಗಳನ್ನು ಕೈಗೊಳ್ಳಿ ಎಂದು ಸಿದ್ದರಾಮಯ್ಯ ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಕಾವೇರಿ ಗಲಾಟೆ ಹಿನ್ನಲೆಯಲ್ಲಿ ತಮಿಳುನಾಡಿಗೆ ಸಂಚಾರ ನಡೆಸುವ ಕೆಎಸ್‌ಆರ್‌ಟಿಸಿ ಬಸ್ಸುಗಳನ್ನು ಸ್ಥಗಿತಗೊಳಿಸಲಾಗಿದೆ. ಬೆಂಗಳೂರು ನಗರದಲ್ಲಿಯೂ ಕಾನೂನು ಸುವ್ಯವಸ್ಥೆ ಕಾಪಾಡಲು ಕ್ರಮ ಕೈಗೊಳ್ಳಲಾಗಿದೆ.

English summary
Karnataka chief minister Siddaramaiah condemned the assault on Kannadigas in Tamil Nadu. Siddaramaiah wrote to Tamil Nadu CM Jayalalithaa about safety of kannadigas.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X