ಬಿಎಸ್‌ವೈ ಸೂಚನೆ ತಿರಸ್ಕಾರ, ಈಶ್ವರಪ್ಪರಿಂದ ಮತ್ತೆ ಸಭೆ

Posted By:
Subscribe to Oneindia Kannada

ಬೆಂಗಳೂರು, ಆಗಸ್ಟ್ 18 : ಯಡಿಯೂರಪ್ಪ ಅವರ ಸೂಚನೆ ಧಿಕ್ಕರಿಸಿರುವ ಕೆ.ಎಸ್.ಈಶ್ವರಪ್ಪ ಅವರು 'ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್' ರಚನೆ ವಿಚಾರದಲ್ಲಿ ಸಭೆ ನಡೆಸುತ್ತಿದ್ದಾರೆ. ಬ್ರಿಗೇಡ್ ವಿಚಾರದಲ್ಲಿ ಯಡಿಯೂರಪ್ಪ ಮತ್ತು ಈಶ್ವರಪ್ಪ ನಡುವೆ ಕೋರ್ ಕಮಿಟಿ ಸಭೆಯಲ್ಲಿ ಜಟಾಪಟಿ ನಡೆದಿತ್ತು.[ಸೆ.26ರಂದು ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸ್ಥಾಪನೆ]

ಬೆಂಗಳೂರಿನ ಶಾಸಕರ ಭವನದಲ್ಲಿ ಗುರುವಾರ ಬೆಳಗ್ಗೆ ಕೆ.ಎಸ್.ಈಶ್ವರಪ್ಪ ಅವರ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಮಾಜಿ ಸಂಸದ ವಿರೂಪಾಕ್ಷಪ್ಪ, ಮುಕುಡಪ್ಪ, ಬಿಬಿಎಂಪಿ ಮಾಜಿ ಮೇಯರ್ ವೆಂಕಟೇಶಮೂರ್ತಿ ಸೇರಿದಂತೆ ಹಲವು ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.[ರಾಯಣ್ಣ ಬ್ರಿಗೇಡ್ : ಯಡಿಯೂರಪ್ಪ, ಈಶ್ವರಪ್ಪ ಜಟಾಪಟಿ]

ks eshwarappa

'ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್' ರಚನೆ ಬಗ್ಗೆ ಅಂತಿಮ ರೂಪುರೇಷೆ ತಯಾರಿಸಲು ಇಂದು ಸಭೆ ನಡೆಸಲಾಗುತ್ತಿದೆ. ಸೆಪ್ಟೆಂಬರ್ 26ರಂದು ಹಾವೇರಿಯಲ್ಲಿ ಬ್ರಿಗೇಡ್‌ನ ಮೊದಲ ಸಭೆ ನಡೆಸುವ ಕುರಿತು ಚರ್ಚೆ ನಡೆಯುತ್ತಿದೆ.[ಅಹಿಂದ ಶಕ್ತಿ ಪ್ರದರ್ಶನಕ್ಕೆ ಸಜ್ಜಾದ ಕೆ.ಎಸ್.ಈಶ್ವರಪ್ಪ]

ಸಭೆಯಲ್ಲಿ ಜಟಾಪಟಿ ನಡೆದಿತ್ತು : ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ 'ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಹುಟ್ಟು ಹಾಕಲು ಹೊರಟಿರುವುದರಿಂದ ಪಕ್ಷದ ಸಂಘಟನೆಗೆ ಧಕ್ಕೆ ಉಂಟಾಗುತ್ತಿದೆ. ಆದ್ದರಿಂದ, ಈ ಪ್ರಯತ್ನವನ್ನು ತಕ್ಷಣ ನಿಲ್ಲಿಸಬೇಕು. ಪಕ್ಷದಲ್ಲಿರುವ ಎಸ್‌ಸಿ, ಎಸ್‌ಟಿ, ಅಲ್ಪಸಂಖ್ಯಾತ ಮುಂತಾದ ಮೋರ್ಚಾಗಳಿವೆ ಇವುಗಳ ಮೂಲಕವೇ ಹಿಂದುಳಿದ ವರ್ಗದವರನ್ನು ಸಂಘಟಿಸಬೇಕು' ಎಂದು ಯಡಿಯೂರಪ್ಪ ಅವರು ತಾಕೀತು ಮಾಡಿದ್ದರು.[ರಾಯಣ್ಣ ಬ್ರಿಗೇಡ್ ರಚನೆ ರಹಸ್ಯ ಬಯಲು]

'ನನ್ನ ಕುತ್ತಿಗೆ ಕಡಿದರೂ ಬಿಜೆಪಿ ತೊರೆಯುವುದಿಲ್ಲ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಅನ್ನು ನಾನು ಹುಟ್ಟು ಹಾಕಿಲ್ಲ. ಈ ಸಂಘಟನೆಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ಇದರಿಂದ ಪಕ್ಷಕ್ಕೆ ಅನುಕೂಲವಾಗುತ್ತದೆ. ಬ್ರಿಗೇಡ್ ರಚನೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ' ಎಂದು ಈಶ್ವರಪ್ಪ ಅವರು ಸ್ಪಷ್ಟನೆ ನೀಡಿದ್ದರು.

English summary
Legislative Council opposition leader K.S.Eshwarappa on August 18, 2016 met dalit and OBC leaders in Bengaluru to discuss about Sangolli Rayanna Brigade.
Please Wait while comments are loading...