ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲಾಡ್ ರಾಜೀನಾಮೆ, ಕಾಂಗ್ರೆಸ್ ಮೊದಲ ವಿಕೆಟ್ ಪತನ

|
Google Oneindia Kannada News

ಬೆಂಗಳೂರು, ನ.22 : ಅಕ್ರಮ ಗಣಿಗಾರಿಕೆ ಆರೋಪ ಎದುರಿಸುತ್ತಿರುವ ವಾರ್ತಾ ಮತ್ತು ಮೂಲಸೌಕರ್ಯ ಸಚಿವ ಸಂತೋಷ್ ಲಾಡ್ ಅವರು ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಅವರು, ಸಿಎಂ ಸಿದ್ದರಾಮಯ್ಯ ಅವರ ನಿವಾಸಕ್ಕೆ ಖಾಸಗಿ ಕಾರಿನಲ್ಲಿ ತೆರಳಿ ರಾಜೀನಾಮೆ ಸಲ್ಲಿಸಿದರು.

ಶುಕ್ರವಾರ ಬೆಂಗಳೂರಿಗೆ ಆಗಮಿಸಿದ ಕಲಘಟಗಿ ಕ್ಷೇತ್ರದ ಶಾಸಕ ಸಂತೋಷ್ ಲಾಡ್ 5 ಗಂಟೆಯ ಸುಮಾರಿಗೆ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ತೆರಳಿ 20 ನಿಮಿಷಗಳ ಕಾಲ ಚರ್ಚೆ ನಡೆಸಿದರು. ನಂತರ ಸಂಜೆ 7.30ಕ್ಕೆ ಪುನಃ ಆಗಮಿಸಿ, ರಾಜೀನಾಮೆ ಪತ್ರವನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿದರು. ಈ ಮೂಲಕ ಆರು ತಿಂಗಳ ಸಿದ್ದರಾಮಯ್ಯ ಸರ್ಕಾರದಲ್ಲಿ ಮೊದಲ ವಿಕೆಟ್ ಪತನಗೊಂಡಂತಾಗಿದೆ.

Santosh Lad

ಗುರುವಾರ ಸಂಜೆಯೇ ಸಿಎಂ ಸಿದ್ದರಾಮಯ್ಯ ಸಂತೋಷ್ ಲಾಡ್ ಅವರಿಗೆ ರಾಜಿನಾಮೆ ನೀಡುವಂತೆ ಸೂಚನೆ ನೀಡಿ, ಕಾಲಾವಕಾಶ ನೀಡಿದ್ದರು. ಶುಕ್ರವಾರ 5 ಗಂಟೆಗೆ ಸಿಎಂ ಭೇಟಿಯಾಗಿದ್ದ ಸಂತೋಷ್ ಲಾಡ್ ರಾಜೀನಾಮೆ ಕುರಿತಾಗಿ ಚರ್ಚೆ ನಡೆಸಿದ್ದರು. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಲಾಡ್ ರಾಜೀನಾಮೆ ನೀಡಬೇಕಾದ ಅನಿವಾರ್ಯತೆ ಬಗ್ಗೆ ವಿವರಣೆ ನೀಡಿದ್ದರು. ನಂತರ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ನಿವಾಸಕ್ಕೆ ತೆರಳಿ ಅವರು ಮಾತುಕತೆ ನಡೆಸಿದ್ದರು. (ಲಾಡ್ ರಾಜೀನಾಮೆಗೆ ಇವರು ಪ್ರಮುಖ ಕಾರಣ)

ಸ್ವ ಇಚ್ಛೆಯಿಂದ ರಾಜೀನಾಮೆ : ಕಾಂಗ್ರೆಸ್ ಪಕ್ಷಕ್ಕೆ ಆಗುವ ಮುಜುಗರವನ್ನು ತಪ್ಪಿಸಲು ರಾಜೀನಾಮೆ ನೀಡುತ್ತಿದ್ದೇನೆ. ಪ್ರಕರಣದ ಕುರಿತ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಲು ನಿರ್ಧರಿಸಿದೆ. ತನಿಖೆಗೆ ಸಹಕರಿಸುವ ನಿಟ್ಟಿನಲ್ಲಿ ರಾಜೀನಾಮೆ ನೀಡಿದ್ದೇನೆ, ಯಾವುದೇ ಒತ್ತಡಕ್ಕೆ ಮಣಿದಿಲ್ಲ ಎಂದು ರಾಜೀನಾಮೆ ನಂತರ ಮಾಜಿ ಸಚಿವ ಸಂತೋಷ್ ಲಾಡ್ ಹೇಳಿದರು.

ಬಿಜೆಪಿ ಸ್ವಾಗತ : ವಾರ್ತಾ ಮತ್ತು ಮೂಲಭೂತ ಸೌಕರ್ಯ ಸಚಿವ ಸ್ಥಾನಕ್ಕೆ ಸಂತೋಷ್ ಲಾಡ್ ರಾಜೀನಾಮೆ ನೀಡಿದ್ದನ್ನು ಬಿಜೆಪಿ ಸ್ವಾಗತಿಸಿದೆ. ಈ ಕುರಿತು ಹೇಳಿಕೆ ನೀಡಿರುವ ಬಿಜೆಪಿ ವಕ್ತಾರ ಸುರೇಶ್ ಕುಮಾರ್, ತಡವಾಗಿಯಾದರೂ ಸಿಎಂ ಸಿದ್ದರಾಮಯ್ಯ ಉತ್ತಮ ನಿರ್ಧಾರ ಕೈಗೊಂಡಿದ್ದಾರೆ ಇದು ನಮ್ಮ ಹೋರಾಟಕ್ಕೆ ಸಿಕ್ಕ ಜಯ ಎಂದು ಹೇಳಿದ್ದಾರೆ.

English summary
Minister for Information and Infrastructure Santosh Lad quits as minister post from CM Siddaramaih cabinet on Friday, November 22, CM approved resignation. After resignation Lad said he quits minister post to avoid embarrassment on Siddaramaiah government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X