ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಳ್ಳಾರಿಗೆ ತೆರಳಲು ಅನುಮತಿ ಕೋರಿದ ರೆಡ್ಡಿ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 02 : ಬಳ್ಳಾರಿಗೆ ಭೇಟಿ ನೀಡಲು ಅನುಮತಿ ನೀಡುವಂತೆ ಕೋರಿ ಮಾಜಿ ಸಚಿವ ಜನಾರ್ದನ ರೆಡ್ಡಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ರೆಡ್ಡಿ ಅವರಿಗೆ ಜಾಮೀನು ನೀಡಿರುವ ಕೋರ್ಟ್ ಬಳ್ಳಾರಿಗೆ ಭೇಟಿ ನೀಡದಂತೆ ಷರತ್ತು ಹಾಕಿದೆ.

ಜನಾರ್ದನ ರೆಡ್ಡಿ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಗುರುವಾರ ನಡೆಸಿದ ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಎಚ್‌.ಎಲ್.ದತ್ತು ಅವರ ನೇತೃತ್ವದ ಪೀಠ, ಈ ಕುರಿತು ಆಕ್ಷೇಪಣೆಗಳಿದ್ದರೆ ಸಲ್ಲಿಸುವಂತೆ ಸಿಬಿಐಗೆ ಸೂಚನೆ ನೀಡಿದ್ದು, ವಿಚಾರಣೆಯನ್ನು ಮುಂದೂಡಿದೆ. [ಚಿತ್ರ: ಅಗ್ರಹಾರದಿಂದ ಹೊರ ಬಂದ ರೆಡ್ಡಿಗೆ ಬಹುಪರಾಕ್]

janardhana redd

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐ ಜನಾರ್ದನ ರೆಡ್ಡಿ ಅವರನ್ನು ಬಂಧಿಸಿತ್ತು. ಸುಮಾರು ಮೂರುವರೆ ವರ್ಷಗಳ ನಂತರ ಎಲ್ಲಾ ಪ್ರಕರಣಗಳಲ್ಲಿ ಜಾಮೀನು ಪಡೆದ ರೆಡ್ಡಿ ಅವರು ಜೈಲಿನಿಂದ ಬಿಡುಗಡೆಯಾಗಿದ್ದರು. 2015ರ ಜನವರಿ 20ರಂದು ಸುಪ್ರೀಂಕೋರ್ಟ್ ಓಬಳಾಪುರಂ ಗಣಿಗಾರಿಕೆ ಪ್ರಕರಣದಲ್ಲಿ ಜಾಮೀನು ನೀಡಿತ್ತು. [ಜೈಲಿನಿಂದ ಬೇಲ್ ತನಕ: ಗಾಲಿ ಜನಾರ್ದನ ರೆಡ್ಡಿ ಟೈಮ್ ಲೈನ್]

ಜಾಮೀನು ನೀಡುವಾಗ ಕರ್ನಾಟಕದ ಬಳ್ಳಾರಿ, ಆಂಧ್ರ ಪ್ರದೇಶದ ಕಡಪಾ ಮತ್ತು ಅನಂತಪುರಕ್ಕೆ ಭೇಟಿ ನೀಡದಂತೆ ಷರತ್ತು ವಿಧಿಸಿತ್ತು. ಆದ್ದರಿಂದ, ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಗೊಂಡ ರೆಡ್ಡಿ ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಿದ್ದಾರೆ. [ರೆಡ್ಡಿಗೆ ಷರತ್ತುಬದ್ಧ ಜಾಮೀನು ಮಂಜೂರು]

ಸದ್ಯ, ಜಾಮೀನಿನ ಷರತ್ತಿನಲ್ಲಿ ಬದಲಾವಣೆ ಮಾಡಿ ತವರು ಜಿಲ್ಲೆ ಬಳ್ಳಾರಿಗೆ ಭೇಟಿ ನೀಡಲು ಅವಕಾಶ ಮಾಡಿಕೊಡುವಂತೆ ಕೋರಿ ಜನಾರ್ದನ ರೆಡ್ಡಿ ಸುಪ್ರೀಂಕೋರ್ಟ್‌ಗೆ ಮನವಿ ಮಾಡಿದ್ದಾರೆ. ಸಿಬಿಐಗೆ ಆಕ್ಷೇಪಣೆ ಸಲ್ಲಿಸಲು ಕೋರ್ಟ್ ಎರಡು ವಾರಗಳ ಕಾಲಾವಕಾಶ ನೀಡಿದೆ.

English summary
Karnataka former minister Gali Janardhana Reddymoved the supreme court for modifying his bail condition to facilitate his visit to Ballari. Court asked the CBI to reply to a plea in two weeks.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X