ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿಸೆಂಬರ್ 15ರಿಂದ ಶಿರಾಡಿ ಘಾಟ್ ಬಂದ್

|
Google Oneindia Kannada News

ಮಂಗಳೂರು, ನ.26 : ಶಿರಾಡಿ ಘಾಟ್‌ನಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿ ನಡೆಯುವ ಕಾರಣದಿಂದ ಆರು ತಿಂಗಳ ಕಾಲ ಘಾಟ್ ಬಂದ್ ಆಗಲಿದೆ. ಡಿಸೆಂಬರ್ 15ರಿಂದ ಶಿರಾಡಿಘಾಟ್ ರಸ್ತೆಯಲ್ಲಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ.

ಲೋಕೋಪಯೋಗಿ ಇಲಾಖೆ ಡಿಸೆಂಬರ್‌ 1ರಿಂದ ಶಿರಾಡಿಘಾಟ್ ರಸ್ತೆಯನ್ನು ಬಂದ್ ಮಾಡಲು ನಿರ್ಧರಿಸಿತ್ತು. ಆದರೆ, ಎರಡು ದಿನಗಳ ಹಿಂದೆ ಲೋಕೋಪಯೋಗಿ ಸಚಿವ ಎಚ್.ಸಿ.ಮಹದೇವಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಡಿಸೆಂಬರ್ 15ರಿಂದ ರಸ್ತೆ ಬಂದ್ ಮಾಡುವ ತೀರ್ಮಾನ ತೆಗೆದುಕೊಳ್ಳಲಾಗಿದೆ. [ಕುಂಭಕರ್ಣನ ನಿದ್ದೆಗೆ ಜಾರಲಿರುವ ಶಿರಾಡಿಘಾಟ್!]

Shiradi Gha

47 ಕಿ.ಮೀ ಉದ್ದದ ರಸ್ತೆಯ ದುರಸ್ತಿಗೆ 155.18 ಕೋಟಿ ರೂ. ವೆಚ್ಚವಾಗಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ಅಂದಾಜಿಸಿದೆ. ಹಾಸನ ಮತ್ತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿ, ಪರ್ಯಾಯ ಮಾರ್ಗಗಳ ಕುರಿತು ಚರ್ಚೆ ನಡೆಸಿ, ಡಿ.15ರಿಂದ ಘಾಟ್ ಬಂದ್ ಮಾಡಲು ಕ್ರಮ ಕೈಗೊಳ್ಳಿ ಎಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. [ಪರ್ಯಾಯ ಮಾರ್ಗಗಳು ಇಲ್ಲಿವೆ]

ಶಿರಾಡಿ ಘಾಟ್‌ನಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿ ನಡೆಯವ ವೇಳೆಯಲ್ಲಿ ಕರಾವಳಿ ಹಾಗೂ ರಾಜಧಾನಿ ಬೆಂಗಳೂರಿನ ನಡುವೆ ಸಂಚರಿಸುವ ವಾಹನಗಳ ಸಂಚಾರಕ್ಕೆ ಐದು ಪರ್ಯಾಯ ಮಾರ್ಗಗಳನ್ನು ಜಿಲ್ಲಾಡಳಿತ ಸೂಚಿಸಿದೆ. [ಮೂರು ತಿಂಗಳು ಆಗುಂಬೆ ಘಾಟ್ ಬಂದ್]

ಹಾಸನ ಜಿಲ್ಲೆಯ ಮಾರನಹಳ್ಳಿಯಿಂದ ಗುಂಡ್ಯದ­ವರೆಗಿನ 26 ಕಿ.ಮೀ. ರಸ್ತೆಯನ್ನು 150 ಕೋಟಿ ವೆಚ್ಚದಲ್ಲಿ ಮತ್ತು ಕೆಂಪುಹೊಳೆಯಿಂದ ಗುಂಡ್ಯ ತನಕದ 13 ಕಿ.ಮೀ ದೂರದ ರಸ್ತೆಯನ್ನು 85.28 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತದೆ. ಮಂಗಳೂರಿನ ಓಷನ್ ಕನ್ಸ್‌ಸ್ಟ್ರಕ್ಷನ್ಸ್ ಸಂಸ್ಥೆಗೆ ಕಾಮಗಾರಿಯ ಗುತ್ತಿಯನ್ನು ನೀಡಲಾಗಿದೆ.

English summary
The Shiradi Ghat stretch of National Highway 75 is likely to be closed for six months from December 15 to facilitate strengthening and concreting work at a cost of about Rs. 155 core.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X