ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶ್ರವಣಬೆಳಗೊಳದಲ್ಲಿ 81ನೇ ಕನ್ನಡ ಸಾಹಿತ್ಯ ಸಮ್ಮೇಳನ

|
Google Oneindia Kannada News

ಹಾಸನ, ನ. 17 : 81ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಎಲ್ಲಿ ನಡೆಸಬೇಕು ಎಂಬ ಗೊಂದಲಗಳಿಗೆ ತೆರೆ ಬಿದ್ದಿದ್ದು, ಹಾಸನ ಜಿಲ್ಲೆಯ ಶ್ರವಣ­ಬೆಳಗೊಳ­ದಲ್ಲಿ ಸಮ್ಮೇಳನ ನಡೆಸಲು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಭಾನುವಾರ ಬೇಲೂರಿನ ಪುರಸಭೆಯ ಸಭಾಭವನ­ದಲ್ಲಿ ಕನ್ನಡ ಸಾಹಿತತ್ಯ ಪರಿಷತ್ತಿನ ಅಧ್ಯಕ್ಷ ಪುಂಡಲೀಕ ಹಾಲಂಬಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶ್ರವಣ­ಬೆಳಗೊಳ­ದಲ್ಲಿ ಈ ಬಾರಿಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿದೆ. [ಹಾವೇರಿ ಕೈ ತಪ್ಪಿದ ಸಮ್ಮೇಳನ ಆತಿಥ್ಯ]

Shravanabelagola

ಮೈಸೂರು, ಕಲಬುರಗಿ, ಬೀದರ್‌, ಶಿವಮೊಗ್ಗ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯವರು ತಮ್ಮ ಜಿಲ್ಲೆಯಲ್ಲಿ ಸಮ್ಮೇಳನ ಆಯೋಜಿಸು­ವಂತೆ ಸಭೆಯಲ್ಲಿ ಮನವಿ ಮಾಡಿದರು. ಈ ಕುರಿತು ಹಲವು ಸುತ್ತಿನ ಚರ್ಚೆ ನಡೆದ ಬಳಿಕ ಶ್ರವಣಬೆಳಗೊಳದಲ್ಲಿ ಸಮ್ಮೇಳನ ನಡೆಸಲು ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿದೆ.

ಜನವರಿಯಲ್ಲಿ ಕೊಡಗಿನಲ್ಲಿ ನಡೆದ 80ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ 81 ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಾವೇರಿಯಲ್ಲಿ ನಡೆಸುವ ಕುರಿತು ತೀರ್ಮಾನ ಕೈಗೊಳ್ಳಲಾಗಿತ್ತು. ಆದರೆ. ಹಾವೇರಿ ಮತ್ತು ರಾಣೆಬೆನ್ನೂರು ಇವುಗಳಲ್ಲಿ ಯಾವ ಸ್ಥಳದಲ್ಲಿ ನಡೆಸಬೇಕು ಎಂಬ ಜಟಾಪಟಿಯಿಂದಾಗಿ ಸಮ್ಮೇಳನ ನಡೆಸುವ ಅವಕಾಶ ಹಾವೇರಿ ಕೈ ತಪ್ಪಿತ್ತು. [ಕೊಡಗು ಸಮ್ಮೇಳನಕ್ಕೆ ತೆರೆ, ನಿರ್ಣಯಗಳ ಹೊರೆ]

ಸಭೆಯ ಹೊರಗೆ ಪ್ರತಿಭಟನೆ : ಕಸಾಪ ಕಾರ್ಯಕಾರಿ ಸಮಿತಿ ಸಭೆ ನಡೆಯುತ್ತಿದ್ದ ಸಭಾಭವನದ ಹೊರಗೆ ಹಾವೇರಿ ಜಿಲ್ಲಾ ಸಾಹಿತ್ಯ ಸಮ್ಮೇಳನ ಹೋರಾಟ ಸಮಿತಿ ಸದಸ್ಯರು ಸಮ್ಮೇಳನವನ್ನು ಹಾವೇರಿ ಜಿಲ್ಲೆ­ಯಲ್ಲಿಯೇ ನಡೆಸುವಂತೆ ಪ್ರತಿಭಟನೆ ಮಾಡಿದರು. ಹಾವೇರಿಯಲ್ಲಿ ಸಮ್ಮೇಳನ ನಡೆಸದಿದ್ದರೆ, ನ. 21ರಂದು ಹಾವೇರಿ ಜಿಲ್ಲಾ ಬಂದ್‌ ಹಾಗೂ ಡಿ. 15ರಂದು ಉತ್ತರ ಕರ್ನಾಟಕ ಬಂದ್‌ಗೆ ಕರೆ ನೀಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಆದರೆ, ಶ್ರವಣಬೆಳಗೊಳದಲ್ಲಿ ಸಮ್ಮೇಳನ ನಡೆಸಲು ತೀರ್ಮಾನ ಕೈಗೊಂಡಿದ್ದರಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು ಕಸಾಪ ಅಧ್ಯಕ್ಷ ಪುಂಡಲೀಕ ಹಾಲಂಬಿ ಅವರ ಕಾರಿಗೆ ಮುತ್ತಿಗೆ ಹಾಕಿದರು. ಸ್ಥಳದಲ್ಲಿದ್ದ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಿದರು.

English summary
The 81st Akhila Bharata Kannada Sahitya Sammelan will be held in Shravanabelagola of Hassan district said Sahitya Parishat president Pundalika Halambi. Sammelan shifted form Haveri due to differences among the office bearers and members of the Haveri district unit of the parishat over the venue.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X