ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯುಗಾದಿ ಉಡುಗೊರೆ: ಸರ್ಕಾರಿ ನೌಕರರಿಗೆ ಡಿಎ ಹೆಚ್ಚಳ!

By Mahesh
|
Google Oneindia Kannada News

ಬೆಂಗಳೂರು, ಏಪ್ರಿಲ್ 04: ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಯುಗಾದಿ ಹಬ್ಬಕ್ಕೂ ಮುನ್ನ ಉಡುಗೊರೆ ನೀಡಿದೆ. ತುಟ್ಟಿಭತ್ಯೆಯನ್ನು ಶೇ.3.5ರಷ್ಟು ಏರಿಕೆ ಮಾಡಲು ಸಿದ್ದರಾಮಯ್ಯ ಅವರು ಒಪ್ಪಿಗೆ ಸೂಚಿಸಿದ್ದಾರೆ. ಇದರಿಂದಾಗಿ 8.5 ಲಕ್ಷ ನೌಕರರ ಮಾಸಿಕ ವೇತನ ಹೆಚ್ಚಳವಾಗಲಿದೆ. ಅಧಿಕೃತ ಆದೇಶ ಶೀಘ್ರದಲ್ಲೇ ಹೊರಡಿಸಲಾಗುತ್ತದೆ. ಅಧಿಕೃತ ಆದೇಶದಲ್ಲಿ ಶೇ3.75ರಷ್ಟು ಹೆಚ್ಚಳ ಕಂಡು ಬಂದರು ಅಚ್ಚರಿ ಪಡಬೇಕಾಗಿಲ್ಲ.

ಕೇಂದ್ರ ಸರ್ಕಾರ ತನ್ನ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಮಾಡಿದ ಬೆನ್ನಲ್ಲೇ ರಾಜ್ಯಸರ್ಕಾರವೂ ನೌಕರರ ತುಟ್ಟಿಭತ್ಯೆ ಮಾಡುವ ಪರಿಪಾಠ ಮುಂದುವರೆದಿದೆ. ಅದರೆ, ಶೇ.4.25ರಷ್ಟು ಹೆಚ್ಚಳ ಮಾಡುವ ನಿರೀಕ್ಷೆ ಹೊಂದಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಈಗ ಮೂಲವೇತನದ ಶೇ. 33 ರಿಂದ ಶೇ.36ರಷ್ಟು ಹೆಚ್ಚಿನ ಸಂಬಳ ಸಿಗಲಿದೆ. [ಹೋಳಿ ಗಿಫ್ಟ್ : ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಕೊಟ್ಟ ಸರ್ಕಾರ]

Siddaramaiah Government announce Dearness allowance Hike

ಇದಕ್ಕೂ ಮುನ್ನ ಮೂಲವೇತನದ ಶೇ.28.75 ರಿಂದ ಶೇ.33ಕ್ಕೆ ಹೆಚ್ಚಳ ಮಾಡಲಾಗಿತ್ತು. ಹಾಲಿ ಸರ್ಕಾರಿ ಹಾಗೂ ನಿವೃತ್ತ ನೌಕರರಿಗೂ ಸಮಾನ ರೀತಿಯ ತುಟ್ಟಿಭತ್ಯೆ ನೀಡಲಾಗುತ್ತದೆ.

ರಾಜ್ಯ ಸರ್ಕಾರಿ ನೌಕರರು, ಜಿಲ್ಲಾ ಪಂಚಾಯತ್‌ಗಳ ಪೂರ್ಣಾವಧಿ ನೌಕರರು, ಕಾಲಿಕ ವೇತನ ಶ್ರೇಣಿಗಳಲ್ಲಿ ಪೂರ್ಣಾವಧಿ ವರ್ಕ್ ಚಾರ್ಜ್ ನೌಕರರು, ಸರ್ಕಾರದ ಸಹಾಯಾನುದಾನ ಪಡೆಯುವ ಶಿಕ್ಷಣ ಸಂಸ್ಥೆಗಳ, ವಿಶ್ವವಿದ್ಯಾಲಯಗಳ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರಿಗೂ ತುಟ್ಟಿಭತ್ಯೆ ಹೆಚ್ಚಳದ ಲಾಭ ದೊರೆಯಲಿದೆ.[ದಸರಾ ಕೊಡುಗೆ : ಸರ್ಕಾರಿ ನೌಕರರಿಗೆ ಡಿಎ ಹೆಚ್ಚಳ]

ಸರ್ಕಾರಿ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರು, ರಾಜ್ಯ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನ ಪಡೆಯುವವರು ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೂ ಈ ಹೆಚ್ಚಳ ಅನ್ವಯವಾಗಲಿದೆ.

ತುಟ್ಟಿ ಭತ್ಯೆ(dearness allowance) : ಭಾರತದಲ್ಲಿ, ತುಟ್ಟಿಭತ್ಯೆಯು ಒಬ್ಬ ವ್ಯಕ್ತಿಯ ಸಂಬಳದ ಭಾಗವಾಗಿದೆ. ತುಟ್ಟಿಭತ್ಯೆಯನ್ನು ಮೂಲ ಸಂಬಳದ ಶೇಕಡಾವಾರು ಲೆಕ್ಕ ಆಧಾರಿಸಿ ಲೆಕ್ಕಮಾಡಲಾಗುತ್ತದೆ. ನಂತರ, ಈ ಮೊತ್ತವನ್ನು ಮನೆ ಬಾಡಿಗೆ ಭತ್ಯೆಯ ಜೊತೆಗೆ ಮೂಲ ಸಂಬಳಕ್ಕೆ ಸೇರಿಸಿ ಒಟ್ಟು ಸಂಬಳವನ್ನು ಪಡೆಯಲಾಗುತ್ತದೆ. ದರಗಳು ಗ್ರಾಮೀಣ/ನಗರ ಪ್ರದೇಶಗಳ ಪ್ರಕಾರ ಬದಲಾಗುತ್ತವೆ.

English summary
As new year #Ugadi gift state government employees, Karnataka government led by Siddaramaiah has decided to hike dearness allowance to state government employees by 3.5 percent with effect from 1st January 2016.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X