ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಸಿದ್ದರಾಮಯ್ಯ ಮನೆಯಲ್ಲಿ ಬಿಎಸ್‌ವೈ ಫೋಟೋ ಹಾಕಿಕೊಳ್ಳಲಿ'

|
Google Oneindia Kannada News

ಹಾವೇರಿ, ಏ.8 : 'ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಮನೆಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಫೋಟೋ ಹಾಕಿಕೊಳ್ಳಬೇಕು' ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಹಾವೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿದ ಕೆ.ಎಸ್.ಈಶ್ವರಪ್ಪ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕರ್ನಾಟಕದಲ್ಲಿ ಕಾಂಗ್ರೆಸ್ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬಂದಿಲ್ಲ, ಬಿಜೆಪಿ ತಪ್ಪಿನಿಂದ ಅಧಿಕಾರ ಪಡೆದಿದೆ ಎಂದು ತಿಳಿಸಿದರು.

ks eshwarappa

'ಬಿಜೆಪಿಯಿಂದಾಗಿ ಅಧಿಕಾರ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮನೆಯಲ್ಲಿ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಫೋಟೋವನ್ನು ಹಾಕಿಕೊಳ್ಳಬೇಕು. ಆದರೆ, ಪೂಜೆ ಮಾಡಿ ಎಂದು ನಾನು ಹೇಳುವುದಿಲ್ಲ' ಎಂದು ಈಶ್ವರಪ್ಪ ಸ್ಪಷ್ಟಪಡಿಸಿದರು.[ಸಿಎಂಗೆ ಒಳ್ಳೆ ಬುದ್ಧಿ ಬರಲೆಂದು ಪೂಜೆ ಮಾಡಿಸಿದ ಈಶ್ವರಪ್ಪ!]

ಯಾರು ಸಮರ್ಥರು? : 'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದೂವರೆ ವರ್ಷಗಳ ನಂತರ ತಮ್ಮ ಸಂಪುಟದಲ್ಲಿ ಸಮರ್ಥ ಸಚಿವರು ಯಾರು?' ಎಂದು ಹುಡುಕಾಟ ನಡೆಸುತ್ತಿದ್ದಾರೆ. ಸಮರ್ಥ ಮತ್ತು ಅಸಮರ್ಥ ಸಚಿವರು ಯಾರು? ಎಂಬ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲೇ ಚರ್ಚೆ ನಡೆಯುತ್ತಿದೆ ಎಂದರು. ['ಈಶ್ವರಪ್ಪ ಆರತಕ್ಷತೆ ಗುಂಗಿನಲ್ಲಿಯೇ ಇದ್ದಾರೆ']

ಸರ್ಕಾರದಿಂದ ಅಭಿವೃದ್ಧಿ ಸಾಧ್ಯವಿಲ್ಲ : 'ಸಿದ್ದರಾಮಯ್ಯ ಅವರ ಸರ್ಕಾರದಿಂದ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಹೇಳಿದ ಈಶ್ವರಪ್ಪ ಅವರು, ಸರ್ಕಾರ ಜಾತಿ ಗಣತಿಯನ್ನು ನಡೆಸುವ ಮೂಲಕ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದೆ' ಎಂದು ಆರೋಪಿಸಿದರು. [ಕರ್ನಾಟಕದಲ್ಲಿ ಜಾತಿ ಗಣತಿ : ಏಕೆ, ಏನು, ಇದೆಲ್ಲಾ ಬೇಕೆ?]

English summary
Opposition leader of Legislative Council K.S.Eshwarappa said, Karnataka Chief Minister Siddaramaiah should display a photograph of BJP National Vice President B.S.Yeddyurappa at his house.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X