ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಪರಿಷತ್ ಚುನಾವಣೆಯಲ್ಲಿ ನಮ್ಮವರೇ ಮೋಸ ಮಾಡಿದರು'

|
Google Oneindia Kannada News

ಮೈಸೂರು, ಜನವರಿ 02 : ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 13 ಸ್ಥಾನಗಳಲ್ಲಿ ಜಯಗಳಿಸಿದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಫಲಿತಾಂಶ ತೃಪ್ತಿ ತಂದಿಲ್ಲ. 'ಸ್ಥಳೀಯ ಸಂಸ್ಥೆಗಳಿಂದ ನಡೆದ ಚುನಾವಣೆಯಲ್ಲಿ ಪಕ್ಷ ಇನ್ನಷ್ಟು ಸ್ಥಾನಗಳನ್ನು ಗೆಲ್ಲಬಹುದಿತ್ತು' ಎಂದು ಸಿದ್ದರಾಮಯ್ಯ ಹೇಳಿದರು.

ಶನಿವಾರ ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, 'ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಇನ್ನೂ ಹೆಚ್ಚಿನ ಸ್ಥಾನಗಳಲ್ಲಿ ಜಯಗಳಿಸಬಹುದಿತ್ತು. ಆದರೆ, ನಮ್ಮ ಪಕ್ಷದವರೇ ಮೋಸ ಮಾಡಿದರು' ಎಂದು ಅಸಮಾಧಾನ ವ್ಯಕ್ತಪಡಿಸಿದರು. [ಪರಿಷತ್ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿಗೆ ಗೆಲುವು?]

mysuru

'ದ್ವಿ ಸದಸ್ಯ ಕ್ಷೇತ್ರವಾದ ಬೆಳಗಾವಿಯಲ್ಲಿ ಇನ್ನೊಂದು ಕ್ಷೇತ್ರದಲ್ಲಿ ಗೆಲ್ಲಬಹುದಾಗಿತ್ತು. ಕೋಲಾರ, ಚಿಕ್ಕಮಗಳೂರು ಕ್ಷೇತ್ರದಲ್ಲಿ ಗೆಲುವು ಸಾಧಿಸಬಹುದಾಗಿತ್ತು. ಮಂಡ್ಯದಲ್ಲಿ ಗೆಲುವಿನ ನಿರೀಕ್ಷೆ ಇತ್ತು. ಆದರೆ, ಆ ಜಿಲ್ಲೆಗಳಲ್ಲಿ ಸೋಲಾಗಿದೆ' ಎಂದು ಸಿದ್ದರಾಮಯ್ಯ ತಿಳಿಸಿದರು. [ಪರಿಷತ್ ಫಲಿತಾಂಶ : ಯಾರು, ಏನು ಹೇಳಿದರು?]

'ಪರಿಷತ್ ಚುನಾವಣೆಯಲ್ಲಿ ಪಕ್ಷದ ವಿರುದ್ಧವಾಗಿ ಕೆಲಸ ಮಾಡಿ, ಪಕ್ಷದ ಸೋಲಿಗೆ ಕಾರಣರಾದವರ ವಿರುದ್ಧ ಸ್ಥಳೀಯ ಘಟಕಗಳು ಶಿಸ್ತುಕ್ರಮಕ್ಕೆ ಶಿಫಾರಸು ಮಾಡಿದರೆ, ಅಂತಹ ನಾಯಕರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ' ಎಂದು ಸಿದ್ದರಾಮಯ್ಯ ಹೇಳಿದರು. [ನಾನ್ಯಾಕೆ ರಾಜಕೀಯ ಸನ್ಯಾಸ ಸ್ವೀಕರಿಸಲಿ : ಈಶ್ವರಪ್ಪ]

ಕಾರ್ಯಕರ್ತರು ಹೇಳಿದಂತೆ ಮಾಡಿದ್ದಾರೆ : 'ಪರಿಷತ್ ಚುನಾವಣೆಯಲ್ಲಿ ಹಾಸನ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಅಲ್ಲಿನ ಕಾರ್ಯಕರ್ತರು ಅನಿರೀಕ್ಷಿತ ಫಲಿತಾಂಶ ನೀಡುತ್ತೇವೆ ಎಂದಿದ್ದರು. ಹೇಳಿದಂತೆ ಮಾಡಿ ತೋರಿಸಿದ್ದಾರೆ. ದೇವೇಗೌಡರು ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಗೆಲ್ಲುತ್ತೇವೆ ಎಂದಿದ್ದಾರೆ. ಅವರು ಆಶಾವಾದಿಗಳಾಗಿರುವುದರಲ್ಲಿ ತಪ್ಪಿಲ್ಲ' ಎಂದರು.

ಡಿಸೆಂಬರ್ 30ರಂದು ವಿಧಾನಪರಿಷತ್ ಚುನಾವಣಾ ಫಲಿತಾಂಶ ಪ್ರಕಟಗೊಂಡಿತ್ತು. 25 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 13 ಸ್ಥಾನಗಳಲ್ಲಿ ಜಯಗಳಿಸಿತ್ತು. ಬಿಜೆಪಿ 6 ಮತ್ತು ಜೆಡಿಎಸ್‌ನ 4 ಅಭ್ಯರ್ಥಿಗಳು, ಇಬ್ಬರು ಪಕ್ಷೇತರರು ಜಯಗಳಿಸಿದ್ದರು.

English summary
Karnataka Chief Minister Siddaramaiah has reportedly expressed his displeasure over the legislative council election results announced on December 30th, 2015.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X