ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತಮಿಳುನಾಡು ಬಂದ್ : ಕನ್ನಡಿಗರಿಗೆ ರಕ್ಷಣೆ ನೀಡಲು ಸಿದ್ದರಾಮಯ್ಯ ಪತ್ರ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 15 : ತಮಿಳುನಾಡು ಬಂದ್ ವೇಳೆ ಕನ್ನಡಿಗರ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಯಲಲಿತಾ ಅವರಿಗೆ ಪತ್ರ ಬರೆದಿದ್ದಾರೆ. ಕರ್ನಾಟಕದಲ್ಲಿ ನಡೆದ ಗಲಭೆ ಖಂಡಿಸಿ ವಿವಿಧ ಸಂಘಟನೆಗಳು ಸೆ.16ರಂದು ತಮಿಳುನಾಡು ಬಂದ್‌ಗೆ ಕರೆ ನೀಡಿವೆ.

ಬಂದ್‌ ವೇಳೆ ಕನ್ನಡಿಗರಿಗೆ ಸೇರಿದ ಆಸ್ತಿ-ಪಾಸ್ತಿಗಳಿಗೆ ಹಾನಿಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಭರವಸೆ ಇದೆ ಎಂದು ಸಿದ್ದರಾಮಯ್ಯ ಪತ್ರದಲ್ಲಿ ತಿಳಿಸಿದ್ದಾರೆ. ಸೆಪ್ಟೆಂಬರ್ 12 ರಂದು ನಿಮಗೆ ಬರೆದ ಪತ್ರದಲ್ಲಿ ತಿಳಿಸಿದಂತೆ ರಾಜ್ಯದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಹಲವು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.[ಕಾವೇರಿ ವಿವಾದ : ಪಕ್ಷ, ಸರ್ಕಾರದ ನಡುವೆ ಹೊಂದಾಣಿಕೆ ಇಲ್ಲ?]

Siddaramaiah urges Jayalalithaa to ensure peace during TN bandh tomorrow

ಕಾವೇರಿ ನದಿ ನೀರು ಹಂಚಿಕೆ ವಿವಾದ ಬಂದ್‌ ನಿಂದ ಬಗೆಹರಿಯುವಂತಹದ್ದಲ್ಲ. ಸುಪ್ರೀಂಕೋರ್ಟ್ ಮತ್ತು ಮೇಲುಸ್ತುವಾರಿ ಸಮಿತಿಗಳ ಮುಂದೆ ಈ ವಿಚಾರ ಬಗೆರಿಯಬೇಕು ಎಂದು ಸಿದ್ದರಾಮಯ್ಯ ಪತ್ರದಲ್ಲಿ ತಿಳಿಸಿದ್ದಾರೆ.[ಕರ್ನಾಟಕ, ತಮಿಳುನಾಡಿನಲ್ಲಿ ಶಾಂತಿ ಕಾಪಾಡಲು ಅರ್ಜಿ]

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಜವಾಬ್ದಾರಿಯುತವಾಗಿ ವರದಿ ಮಾಡುವಂತೆ ಮಾಧ್ಯಮಗಳಿಗೆ ಸೂಚನೆ ನೀಡಲಾಗಿದೆ. ನೀವು ಇಂತಹ ಸೂಚನೆ ನೀಡುವಂತೆ ಮನವಿ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಪತ್ರದಲ್ಲಿ ತಿಳಿಸಿದ್ದಾರೆ.[ಕಾವೇರಿಗಾಗಿ ಗಲಭೆ: ಬೆಂಗಳೂರಿಗೆ 25 ಸಾವಿರ ಕೋಟಿ ರು ನಷ್ಟ]

English summary
Karnataka Chief Minister, Siddaramaiah has urged his Tamil Nadu counterpart, J Jayalalithaa to take all measures to ensure no untoward incident takes place during the bandh tomorrow.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X