ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

SSLC ಪರೀಕ್ಷೆ ಮುಕ್ತಾಯ, ಏ 20ರಿಂದ ಮೌಲ್ಯಮಾಪನ ಶುರು

|
Google Oneindia Kannada News

ಬೆಂಗಳೂರು, ಏಪ್ರಿಲ್ 13 : ಪ್ರಸಕ್ತ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಬುಧವಾರ ಮುಕ್ತಾಯಗೊಂಡಿದ್ದು, ಏಪ್ರಿಲ್ 20ರಿಂದ ಮೌಲ್ಯಮಾಪನ ಕಾರ್ಯ ಆರಂಭವಾಗಲಿದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.

ಈ ಬಾರಿ 8.77 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆ ಯಂತಹ ಯಾವುದೇ ಅಹಿತಕರ ಘಟನೆಗಳು ಎಲ್ಲೂ ನಡೆದಿಲ್ಲ. ಮಾರ್ಚ್ 30ರಿಂದ ಏಪ್ರಿಲ್ 12ರವರೆಗೆ ನಡೆದ ಎಲ್ಲಾ ವಿಷಯಗಳ ಪರೀಕ್ಷೆಳು ಯಶಸ್ವಿಯಾಗಿ ನಡೆದಿವೆ ಎಂದು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕಿ ಯಶೋದಾ ಬೋಪಣ್ಣ ಹೇಳಿದರು.[SSLC ಪರೀಕ್ಷೆಗೆ ಇಂದು ಮಂಗಳ, ಕಾಲೇಜಿಗೆ ದಾರಿ ಯಾವುದಯ್ಯ]

SSLC exams end, evaluation starts from April 20

ಏಪ್ರಿಲ್ 20ರಿಂದ ರಾಜ್ಯದ 225 ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಪ್ರಾರಂಭವಾಗಲಿದೆ. ಮೌಲ್ಯಮಾಪನ ಕಾರ್ಯಕ್ಕೆ 68,567 ಶಿಕ್ಷಕರನ್ನು ನಿಯೋಜಿಸಲಾಗಿದೆ.

ಪರೀಕ್ಷೆಯಂತೆ ಮೌಲ್ಯಮಾಪನ ಕಾರ್ಯವೂ ಸಮಯಯಕ್ಕೆ ಸರಿಯಾಗಿ ಯಶಸ್ವಿಯಾಗಿ ಪೂರ್ಣಗೊಳ್ಳಲು ಅಗತ್ಯ ಕ್ರಮ ವಹಿಸಲಾಗಿದೆ ಎಂದು ಯಶೋದಾ ಬೋಪಣ್ಣ ತಿಳಿಸಿದ್ದಾರೆ.

English summary
SSLC exams end. The evaluation is set to begin on April 20 in 225 centres across Karnataka. As many 68,567 evaluators have been assigned for the task, said director of karnataka Secondary Education Examination Board (KSEEB) Yashoda Bopanna.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X