ಶನಿವಾರ ಮೂರು ಕ್ಷೇತ್ರಗಳಲ್ಲಿ ಉಪ ಚುನಾವಣೆ

Posted By:
Subscribe to Oneindia Kannada

ಬೆಂಗಳೂರು, ಫೆಬ್ರವರಿ 12 : ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಚುನಾವಣಾ ಆಯೋಗ ಸಕಲ ರೀತಿಯಲ್ಲಿ ಸಜ್ಜಾಗಿದೆ. ಶನಿವಾರ ಹೆಬ್ಬಾಳ, ದೇವದುರ್ಗ ಮತ್ತು ಬೀದರ್ ಕ್ಷೇತ್ರಗಳ ಉಪ ಚುನಾವಣೆ ನಡೆಯಲಿದೆ.

ಫೆ.13ರ ಶನಿವಾರ ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯ ತನಕ ಮತದಾನ ಮಾಡಲು ಅವಕಾಶವಿದೆ. ಈಗಾಗಲೇ ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು, ಅಭ್ಯರ್ಥಿಗಳು ಮನೆ-ಮನೆ ಪ್ರಚಾರದಲ್ಲಿ ತೊಡಗಿದ್ದಾರೆ. 15 ಜಿಲ್ಲೆಗಳಲ್ಲಿ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗೆ ಮತದಾನವೂ ಶನಿವಾರ ನಡೆಯಲಿದೆ. [ಉಪ ಚುನಾವಣೆ ವೇಳಾಪಟ್ಟಿ]

election

ಹೆಬ್ಬಾಳದ ಶಾಸಕರಾಗಿದ್ದ ಜಗದೀಶ್ ಕುಮಾರ್ (ಬಿಜೆಪಿ), ಬೀದರ್ ಶಾಸಕರಾಗಿದ್ದ ಗುರುಪಾದಪ್ಪ ನಾಗಮಾರಪಲ್ಲಿ (ಕೆಜೆಪಿ) ಮತ್ತು ದೇವದುರ್ಗದ ಶಾಸಕರಾಗಿದ್ದ ವೆಂಕಟೇಶ್ ನಾಯಕ್ ಅವರ ಅಕಾಲಿಕ ಮರಣದಿಂದಾಗಿ ಮೂರು ಕ್ಷೇತ್ರಗಳಲ್ಲಿ ಉಪ ಚುನಾವಣೆ ಎದುರಾಗಿದೆ. [3 ಕ್ಷೇತ್ರಗಳ ಉಪ ಚುನಾವಣೆ : ಪಕ್ಷಗಳ ಅಭ್ಯರ್ಥಿಗಳ ಪಟ್ಟಿ]

ಹೆಬ್ಬಾಳ ಕ್ಷೇತ್ರ : ಹೆಬ್ಬಾಳ ಕ್ಷೇತ್ರದ ಉಪ ಚುನಾವಣೆ ಭಾರೀ ಕುತೂಹಲ ಕೆರೆಳಿಸಿದೆ. 1.26 ಲಕ್ಷ ಮತದಾರರನ್ನು ಕ್ಷೇತ್ರಹೊಂದಿದೆ. ಕಾಂಗ್ರೆಸ್‌ನಿಂದ ಸಿ.ಕೆ.ಅಬ್ದುಲ್ ರೆಹಮಾನ್ ಷರೀಫ್, ಬಿಜೆಪಿಯಿಂದ ವೈ.ಎ.ನಾರಾಯಣಸ್ವಾಮಿ, ಜೆಡಿಎಸ್‌ನ ಇಸ್ಮಾಯಿಲ್ ಷರೀಫ್ ಕ್ಷೇತ್ರದ ಪ್ರಮುಖ ಅಭ್ಯರ್ಥಿಗಳಾಗಿದ್ದಾರೆ.

ದೇವದುರ್ಗ ಕ್ಷೇತ್ರ : ದೇವದುರ್ಗ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಎ.ರಾಜಶೇಖರ ನಾಯಕ್, ಬಿಜೆಪಿಯ ಶಿವನಗೌಡ ನಾಯಕ್ ಹಾಗೂ ಜೆಡಿಎಸ್‌ನಿಂದ ಕರಿಯಮ್ಮ ಅವರು ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳು.

ಬೀದರ್ ಕ್ಷೇತ್ರ : ಬೀದರ್ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ನ ರಹೀಂಖಾನ್, ಬಿಜೆಪಿಯ ಪ್ರಕಾಶ್ ಖಂಡ್ರೆ, ಜೆಡಿಎಸ್‌ನ ಎಂ.ಡಿ.ಅಯಾಜ್ ಖಾನ್ ಅವರು ಪ್ರಮುಖ ಅಭ್ಯರ್ಥಿಗಳು.

English summary
The stage is set for Hebbal, Devadurga and Bidar constituency by poll scheduled on February 13, 2016.
Please Wait while comments are loading...