ಶೃಂಗೇರಿ ಶ್ರೀ ಶಾರದಾ ಪೀಠಕ್ಕೆ ಉತ್ತರಾಧಿಕಾರಿ ಘೋಷಣೆ
ಚಿಕ್ಕಮಗಳೂರು, ಜ.5 : ಕುಪ್ಪೂರು ವೆಂಕಟೇಶ್ವರಪ್ರಸಾದ ಶರ್ಮ ಅವರು ಶೃಂಗೇರಿ ಶ್ರೀ ಶಾರದಾ ಪೀಠದ 37ನೇ ಪೀಠಾಧಿಪತಿಯಾಗಲಿದ್ದಾರೆ. ಜಗದ್ಗುರು ಶ್ರೀ ಭಾರತೀತೀರ್ಥ ಸ್ವಾಮೀಜಿ ಅವರು ಭಾನುವಾರ ಉತ್ತರಾಧಿಕಾರಿ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದಾರೆ.
ಭಾನುವಾರ ಜಗದ್ಗುರುಗಳ ಪೀಠಾರೋಹಣದ ರಜತ ಮಹೋತ್ಸವ ಆಚರಣೆಯ ಶುಭ ಸನ್ನಿವೇಶಕ್ಕಾಗಿ ಮಠದಲ್ಲಿ ಶಿಷ್ಯರು ಆಯೋಜಿಸಿದ್ದ ಗುರುವಂದನಾ ಸಮಾರಂಭದಲ್ಲಿ ಮಾತನಾಡಿದ ಶ್ರೀ ಭಾರತೀತೀರ್ಥ ಸ್ವಾಮೀಜಿ ಅವರು ಕುಪ್ಪೂರು ವೆಂಕಟೇಶ್ವರಪ್ರಸಾದ ಶರ್ಮ ಮುಂದಿನ ಉತ್ತರಾಧಿಕಾರಿ ಎಂದು ಘೋಷಿಸಿದರು. [ಶೃಂಗೇರಿ : ರಾಜಗೋಪುರದ ವಿಶೇಷತೆಗಳು]

ಶಾರದಾ ಪೀಠದ 37ನೇ ಪೀಠಾಧಿಪತಿಯನ್ನಾಗಿ ಕುಪ್ಪೂರು ವೆಂಕಟೇಶ್ವರಪ್ರಸಾದ ಶರ್ಮ (25) ಅವರನ್ನು ಆಯ್ಕೆ ಮಾಡಿದ್ದು ಅವರಿಗೆ ಶಿಷ್ಯ ಸ್ವೀಕರವನ್ನು ಜ.22 ಮತ್ತು 23ರಂದು ನೀಡುವುದಾಗಿ ಜಗದ್ಗುರು ಭಾರತೀತೀರ್ಥ ಸ್ವಾಮೀಜಿ ಹೇಳಿದರು.

ರಜತ ಮಹೋತ್ಸವಕ್ಕೆ ಆಗಮಿಸಿದ ಶಿಷ್ಯರೆಲ್ಲರೂ ಪರಿಗ್ರಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂಬ ಉದ್ದೇಶದಿಂದ ಈ ಪ್ರಕಟಣೆಯನ್ನು ಮಾಡುತ್ತಿರುವುದಾಗಿ ತಿಳಿಸಿದ ಶ್ರೀಗಳು, ತಮಗೆ 64 ವರ್ಷ ವಯಸ್ಸಾಗಿದ್ದು ಉತ್ತರಾಧಿಕಾರಿ ನೇಮಕದ ಬಗ್ಗೆ ತಾಯಿ ಶಾರದೆ ನೆನಪಿಸಿದ್ದಾಳೆ ಎಂದರು.

ಶ್ರೀಮಠದಲ್ಲಿ ಗುರು-ಶಿಷ್ಯ ಪರಂಪರೆಗೆ ಅತ್ಯಂತ ಉನ್ನತ ಸ್ಥಾನವಿದ್ದು, 40 ವರ್ಷಗಳ ಹಿಂದೆ ನಾವು ಪಡೆದಿದ್ದ ಶಿಷ್ಯತ್ವ ಸ್ವೀಕಾರದಂತೆ ಇದೀಗ ನಮಗೆ ಶಿಷ್ಯ ಪರಿಗ್ರಹ ನೀಡುವ ಅವಕಾಶ ಒದಗಿ ಬಂದಿದೆ. ಸಕಲ ಸದ್ಗುಣಗಳನ್ನು ಹೊಂದಿರುವ ಶಿಷ್ಯನನ್ನು ನಾವು ಆಯ್ಕೆ ಮಾಡಿದ್ದು, 5-6 ವರ್ಷಗಳಿಂದ ಅವರಿಗೆ ಶಾಸ್ತ್ರಾಭ್ಯಾಸ ಪಾಠ ಕಲಿಸುತ್ತಿದ್ದೇವೆ ಎಂದು ಶ್ರೀಗಳು ಹೇಳಿದರು.
-
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ?












Click it and Unblock the Notifications