ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಿಕ್ಷಕರು ಆಧಾರ್ ಕಾರ್ಡ್ ನಂಬರ್ ನೀಡುವುದು ಕಡ್ಡಾಯ

|
Google Oneindia Kannada News

ಬೆಂಗಳೂರು, ಆಗಸ್ಟ್ 3 : ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರು ಆಧಾರ್‌ ಸಂಖ್ಯೆಯನ್ನು ನೀಡುವುದು ಕಡ್ಡಾಯ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಸೆಪ್ಟೆಂಬರ್‌ 15ರ ಒಳಗಾಗಿ ಶಿಕ್ಷಕರು ಆಧಾರ್ ಸಂಖ್ಯೆಯನ್ನು ನೀಡಬೇಕಾಗಿದೆ.

ಹ್ಯೂಮನ್‌ ರಿಸೋರ್ ಮ್ಯಾನೇಜ್‌ಮೆಂಟ್‌ ಸಿಸ್ಟಮ್‌ (ಎಚ್‌ಆರ್‌ಎಂಎಸ್‌) ತಂತ್ರಾಶ ಮೂಲಕ ಸರ್ಕಾರಿ ನೌಕರರಿಗೆ ವೇತನ ನೀಡಲಾಗುತ್ತಿದೆ. ಈ ತಂತ್ರಾಂಶದಲ್ಲಿ ಶಿಕ್ಷಕರೂ ಸೇರಿದಂತೆ ಎಲ್ಲ ಸರ್ಕಾರಿ ನೌಕರರ ವೈಯಕ್ತಿಕ ದಾಖಲೆಗಳ ಜತೆಗೆ ಆಧಾರ್‌ ಕಾರ್ಡ್‌ ಹಾಗೂ ಚುನಾವಣಾ ಗುರುತಿನ ಚೀಟಿ ಸಂಖ್ಯೆಯನ್ನು ದಾಖಲಿಸುವುದು ಕಡ್ಡಾಯವಾಗಿದೆ. [ಎಲ್ ಪಿಜಿ ಜೊತೆ ಆಧಾರ್ ಲಿಂಕ್ ಮಾಡುವುದು ಹೇಗೆ?]

aadhaar

ಆದರೆ, ಶಿಕ್ಷಕರು ವೈಯಕ್ತಿಕ ಮಾಹಿತಿ ಮಾತ್ರ ದಾಖಲಿಸಿದ್ದು, ಆಧಾರ್‌ ಕಾರ್ಡ್‌ ಹಾಗೂ ಎಪಿಕ್‌ ಕಾರ್ಡ್‌ ಮಾಹಿತಿ ದಾಖಲಿಸಿಲ್ಲ. ಆದ್ದರಿಂದ ಆಧಾರ್ ಕಾರ್ಡ್ ಮಾಹಿತಿ ನೀಡುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಸೆಪ್ಟೆಂಬರ್‌ 15ರ ಒಳಗಾಗಿ ಆಧಾರ್ ಸಂಖ್ಯೆ ನೀಡಬೇಕು ಎಂದು ಇಲಾಖೆ ಆಯುಕ್ತ ಕೆ.ಎಸ್‌. ಸತ್ಯಮೂರ್ತಿ ಅವರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.[ಆಧಾರ್ ಕಾರ್ಡ್ ಮಾಡಿಸುವುದು ಹೇಗೆ?]

English summary
Teachers should submit Aadhar card number before September 15, 2015, Karnataka education department issued circular.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X