ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹುಬ್ಬಳ್ಳಿಯಲ್ಲಿ ತಾತ್ಕಾಲಿಕ ಐಐಐಟಿ ಕೇಂದ್ರ ಸ್ಥಾಪನೆ

|
Google Oneindia Kannada News

ಬೆಂಗಳೂರು,ಮಾ. 30: ಹುಬ್ಬಳ್ಳಿಯ ಐಟಿ ಪಾರ್ಕ್‌ ಕ್ಯಾಂಪಸ್‌ನಲ್ಲಿ ತಾತ್ಕಾಲಿಕವಾಗಿ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (ಐಐಐಟಿ) ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಎಸ್.ಆರ್. ಪಾಟೀಲ್ ವಿಧಾನ ಪರಿಷತ್‌ನಲ್ಲಿ ಸೋಮವಾರ ತಿಳಿಸಿದ್ದಾರೆ.

ಐಐಟಿ ಮಾದರಿಯಲ್ಲಿಯೇ ಈಗ ಐಐಐಟಿ ಸ್ಥಾಪಿಸಲಾಗುವುದು. ಇದಕ್ಕಾಗಿ ಇನ್ಫೋಸಿಸ್ ಪ್ರತಿಷ್ಠಾನದ ಡಾ. ಸುಧಾಮೂರ್ತಿ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿ ಕೇಂದ್ರ, ರಾಜ್ಯ ಸರ್ಕಾರದ ತಲಾ ಇಬ್ಬರು ನಿರ್ದೇಶಕರು ಸೇರಿದಂತೆ 20 ಮಂದಿಯ ನಿರ್ದೇಶಕರ ನೇಮಕ ಮಾಡಲಾಗುವುದು. ಈ ಬಗ್ಗೆ ಕಳೆದ ಮೂರು ದಿನಗಳ ಹಿಂದೆ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದರು.[ಐಐಟಿ ಎಲ್ಲಿ ಸ್ಥಾಪನೆ ಆಗಬೇಕು? ಉತ್ತರ ಸಿಕ್ಕಿದೆ!]

iit

ಸಾರ್ವಜನಿಕ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ರಾಜ್ಯಕ್ಕೆ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯನ್ನು ಕೇಂದ್ರ ಸರ್ಕಾರ ಮಂಜೂರು ಮಾಡಿತ್ತು. ಕೇಂದ್ರ ಬಜೆಟ್ ನಲ್ಲಿ ಅಧಿಕೃತವಾಗಿ ತಿಳಿಸಲಾಗಿತ್ತು. ಈಗ ರಾಜ್ಯ ಸರ್ಕಾರ ತಾತ್ಕಾಲಿಕ ಸ್ಥಾಪನೆಗೆ ಹುಬ್ಬಳ್ಳಿಯನ್ನು ಆರಿಸಿಕೊಂದೆ.[ಐಐಟಿ ಹರಪನಹಳ್ಳಿಗೆ ಸಿಗಲಿ: ಸ್ಮೃತಿಗೆ ಸಿದ್ದೇಶ್ವರ್ ಪತ್ರ]

ಸ್ಥಳವನ್ನು ಆಯ್ಕೆ ಸಮಿತಿ ಪರಿಶೀಲಿಸಿದ್ದು ಯೋಗ್ಯವಲ್ಲ ಎಂದು ವರದಿ ನೀಡಿರುವ ಹಿನ್ನೆಲೆಯಲ್ಲಿ ಹೊಸ ಜಾಗ ಹುಡುಕಾಟ ನಡೆಯುತ್ತಿದೆ. ಸದ್ಯಕ್ಕೆ ಹುಬ್ಬಳ್ಳಿಯ ಐಟಿ ಕ್ಯಾಂಪಸ್‌ನಲ್ಲಿ ಈ ಸಂಸ್ಥೆಯನ್ನು ಆರಂಭಿಸಲಾಗುವುದು ಎಂದು ತಿಳಿಸಿದರು.

English summary
Finally State Government decided to establish temporary IIT center in Hubli IT park. Minister for IT, BT and Science and Technology S.R. Patil said on Monday in Vidhan Parishath.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X