ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗಿರೀಶ್ ಕಾರ್ನಾಡ್ ವಿರುದ್ಧ ಬೆಂಗಳೂರು, ಮಂಡ್ಯದಲ್ಲಿ ದೂರು

By ವಿಕಾಸ್ ನಂಜಪ್ಪ
|
Google Oneindia Kannada News

ಬೆಂಗಳೂರು, ನವೆಂಬರ್ 12 : 'ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರಿಡಬೇಕು' ಎಂದು ಹೇಳಿದ್ದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ಅವರ ವಿರುದ್ಧ ಮಂಡ್ಯ ಮತ್ತು ಬೆಂಗಳೂರಿನಲ್ಲಿ ದೂರು ದಾಖಲಾಗಿವೆ.

ಈ ದೂರುಗಳನ್ನು ಪೊಲೀಸರು ಸ್ವೀಕರಿಸಿದ್ದು ಅಧಿಕೃತವಾಗಿ ದಾಖಲಿಸಿಕೊಂಡಿಲ್ಲ. ಇಂತಹ ದೂರುಗಳನ್ನು ಹೇಗೆ ದಾಖಲಿಸಿಕೊಳ್ಳಬೇಕು? ಎಂದು ಪೊಲೀಸರು ಕಾನೂನು ಇಲಾಖೆಯ ಸಲಹೆಯನ್ನು ಕೇಳಿದ್ದಾರೆ. [ಗಿರೀಶ್ ಕಾರ್ನಾಡ್ ಅವರಿಗೆ ಜೀವ ಬೆದರಿಕೆ ಸಂದೇಶ]

tippu sultan

ಬೆಂಗಳೂರು : ಬೆಂಗಳೂರಿನಲ್ಲಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಗಿರೀಶ್ ಕಾರ್ನಾಡ್ ಅವರ ವಿರುದ್ಧ ದೂರು ದಾಖಲಾಗಿದೆ. ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಮೂಲಕ ಸಮಾಜದಲ್ಲಿ ಶಾಂತಿ ಕದಡಲು ಕಾರ್ನಾಡ್ ಅವರು ಪ್ರಯತ್ನಿಸಿದ್ದಾರೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು ಎಂದು ದೂರಿನಲ್ಲಿ ಮನವಿ ಮಾಡಲಾಗಿದೆ. [ಕ್ಷಮೆ ಯಾಚಿಸಿದ ಗಿರೀಶ್ ಕಾರ್ನಾಡ್]

ಮಂಡ್ಯ : ಮಂಡ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗಿರೀಶ್ ಕಾರ್ನಾಡ್ ಸೇರಿದಂತೆ ಇತರ ಮೂವರ ವಿರುದ್ಧ ದೂರು ದಾಖಲಾಗಿದೆ. ಕನ್ನಡ ಪರ ಹೋರಾಟಗಾರ ಪ್ರವೀಣ್ ಶೆಟ್ಟಿ ಅವರು ಈ ದೂರು ನೀಡಿದ್ದಾರೆ. ಕಾರ್ನಾಡ್ ಅವರ ಹೇಳಿಕೆಯಿಂದ ಕನ್ನಡಿಗರ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಕಾನೂನು ಅಭಿಪ್ರಾಯವೇಕೆ? : 'ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರಿಡಬೇಕು' ಎಂಬುದು ಗಿರೀಶ್ ಕಾರ್ನಾಡ್ ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ಆದ್ದರಿಂದ, ಈ ವಿಚಾರದಲ್ಲಿ ಹೇಗೆ ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ಕಾನೂನು ಇಲಾಖೆ ಸಲಹೆ ಕೇಳಲಾಗಿದೆ.

ಕ್ಷಮೆ ಕೇಳಿದ್ದಾರೆ? : ತಮ್ಮ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾದ ಕಾರಣ ಗಿರೀಶ್ ಕಾರ್ನಾಡ್ ಕ್ಷಮೆ ಕೇಳಿದ್ದಾರೆ. 'ತಾವು ದುರುದ್ದೇಶದಿಂದ ಈ ಹೇಳಿಕೆ ನೀಡಿರಲಿಲ್ಲ. ನಾನು ನೀಡಿರುವ ಹೇಳಿಕೆಯಿಂದಾಗಿ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ' ಎಂದು ಕಾರ್ನಾಡ್ ಬುಧವಾರ ಕ್ಷಮೆ ಯಾಚಿಸಿದ್ದಾರೆ.

English summary
Girish Karnad who is in the news for suggesting that the Bengaluru airport be named after Tipu Sultan has a host of complaints greeting him. One complaint was filed in Bengaluru another has been filed in Mandya.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X